15ನೇ ಹಣಕಾಸು ಅನುದಾನ ದುರ್ಬಳಕೆ: ತನಿಖೆಗೆ ಕರವೇ ಆಗ್ರಹ

1
35

ಸುರಪುರ: ತಾಲೂಕಿನಾದ್ಯಂತ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ೧೫ನೇ ಹಣಕಾಸು ಯೋಜನೆಯ ಅನುದಾನ ದುರ್ಬಳಕೆಯಾಗಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ತಾಲೂಕು ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಜಿಲ್ಲಾಧ್ಯಕ್ಷ ಶಿವಮೋನಯ್ಯ ನಾಯಕ,೧೫ನೇ ಹಣಕಾಸು ಯೋಜನೆಯ ಅನುದಾನ ಬಂದಾಗ ಗ್ರಾಮ ಪಂಚಾಯತಿಗಳಲ್ಲಿ ಜನಪ್ರತಿನಿಧಿಗಳು ಇರಲಿಲ್ಲ,ಇದರಿಂದ ಅಧಿಕಾರಿಗಳು ತಾವು ಆಡಿದ್ದೆ ಆಟ ಎನ್ನುವಂತಾಗಿ ಎಲ್ಲಾ ಅನುದಾನವನ್ನು ಲಪಟಾಯಿಸಿದ್ದಾರೆ.

Contact Your\'s Advertisement; 9902492681

ಬೀದರ ಬೆಂಗಳೂರು ಹೆದ್ದಾರಿಯಲ್ಲಿ ಸವಿತಾ ಮಹರ್ಷಿ ನಾಮಫಲಕ ಅನಾವರಣ

ಆದ್ದರಿಂದ ೧೫ನೇ ಹಣಕಾಸು ಯೋಜನೆಯಡಿ ಯಾವ ಗ್ರಾಮ ಪಂಚಾಯತಿಗಳಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವುದನ್ನು ತನಿಖೆಗೊಳಪಡಿಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು.

ನಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬರೆದ ಮನವಿಯನ್ನು ತಾಲೂಕು ಪಂಚಾಯತಿ ಸಿಬ್ಬಂದಿ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ವೇದಿಕೆಯ ತಾಲೂಕು ಅಧ್ಯಕ್ಷ ಮೌನೇಶ ಆರ್.ಬೋವಿ ಸೇರಿದಂತೆ ಅನೇಕರಿದ್ದರು.

ಸಾಮಾನ್ಯ ಕಾನೂನುಗಳ ತಿಳಿಯಲು ಪದವಿ ವಿದ್ಯಾರ್ಥಿಗಳಿಗೆ ಪೊಲೀಸ್ ಕಿರು ಪರೀಕ್ಷೆ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here