ಕಲಬುರಗಿ: ಸೇಡಂ ರಸ್ತೆಯಲ್ಲಿರುವ ಸೂರ್ಯ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಈಶ್ವರ ದೇವಸ್ಥಾನದ ಗೋಪುರ ಮತ್ತು ಕಳಸಾರೋಹಣದ ಉದ್ಘಾಟನೆ ಇದೆ 22 ರಂದು ಸೋಮವಾರ ನಡೆಯಲಿದೆ.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಮ. ಘ. ಚ. ಅಭಿನವ ಸಿದ್ದಲಿಂಗ ಶಿವಾಚಾರ್ಯರು ಕಟ್ಟಿಮನಿ ಸಂಸ್ಥಾನ ಮಠ ಮುಗುಳನಾಗಾವ ಮತ್ತು ಶ್ರೀ ಷ. ಬ್ರ. ಚಂದ್ರಗುಂಡ ಶಿವಾಚಾರ್ಯರು ವಹಿಸುವರು. ಬೆಳಿಗ್ಗೆ 7 ಗಂಟೆಗೆ ವಿಶ್ವೇಶ್ವರಯ್ಯ ನಗರದ ಶಿವಮಂದಿರದಿಂದ ಸೂರ್ಯ ನಗರದ ಈಶ್ವರ ದೇವಸ್ಥಾನಕ್ಕೆ ಮೆರವಣಿಗೆ ಮೂಲಕ ಕಳಸವನ್ನು ತರಲಾಗುವುದು ನಂತರ 9 ಗಂಟೆಗೆ ಈಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಕಾರ್ಯಕ್ರಮ ನೆರವೇರುವುದು.
ಎಸಿಸಿ ಅಧಿಕಾರಿಗಳ ಬಂಧನಕ್ಕೆ ವಾಲ್ಮೀಕಿ ಸಮಾಜ ಒತ್ತಾಯ
ಮುಖ್ಯ ಅತಿಥಿಗಳಾಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಭಾಗವಹಿಸುವರು ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಜಯಶ್ರೀ ಮತ್ತಿಮೂಡ ಇವರಿಂದ ಮಧ್ಯಾಹ್ನ 11 ಗಂಟೆಗೆ ಮುತೈದೆಯರಿಗೆ ಉಡಿತುಂಬುವ ಕಾರ್ಯಕ್ರಮ ನೆರವೇರುವುದು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಟೆಂಗಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಅರವಿಂದ ಚವ್ಹಾಣ, ಶ್ರೀಮತಿ ಸಂಗಮ್ಮಾ ಪಾಟೀಲ, ಭಾಗವಹಿಸುವರು ಎಂದು ಸೂರ್ಯ ನಗರದ ಅಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀ ವಿಶ್ವನಾಥ್ ಜೀವಣಗಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…