ಗ್ರಾಮದಲ್ಲಿ ಯಶಸ್ವಿಯಾದ ಜಿಲ್ಲಾಧಿಕಾರಿಗಳ ನಮ್ಮ ನಡೆ ಹಳ್ಳಿ ಕಡೆ ಕಾರ್ಯಕ್ರಮ

3
31

ಸುರಪುರ: ನಮ್ಮ ನಡೆ ಹಳ್ಳಿಯ ಕಡೆ ಎಂಬ ಸರ್ಕಾರದ ಅಭಿಯಾನದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಯಾದಗಿರಿ ಜಿಲ್ಲಾಧಿಕಾರಿಗಳಾದ ಡಾ: ರಾಗಪ್ರಿಯ ಆರ್ ಅವರು ಸುರಪುರ ತಾಲೂಕಿನ ಖಾನಾಪುರ ಎಸ್.ಹೆಚ್ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಿದರು.

ತಾಲೂಕಿನ ಖಾನಾಪುರ ಎಸ್.ಹೆಚ್ ಗ್ರಾಮದ ಸರಕಾರಿ ಶಾಲಾ ಆವರಣದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮ ಒಂದು ಗಂಟೆ ತಡವಾಗಿ ಆರಂಭಗೊಂಡಿತು. ಸಸಿಗೆ ನೀರೆರೆದು ನಂತರ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹನಾಯಕ ರಾಜುಗೌಡ ಮಾತನಾಡಿ, ಇಂದು ಒಂದು ಒಳ್ಳೆಯ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಅನೇಕ ದಿನಗಳಿಂದ ಬಾಕಿ ಉಳಿದಿದ್ದ ಮನವಿಗಳ ವಿಲೇವಾರಿ ಸೇರಿ ಎಲ್ಲ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸುವ ಪ್ರಯತ್ನವನ್ನು ಮಾಡಲಾಗುತ್ತದೆ. ಅದರಂತೆ ಜನರು ಕೂಡ ಈ ಒಂದು ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.

Contact Your\'s Advertisement; 9902492681

ಸರ್ವಜ್ಞನ ವಚನಗಳು ಬದುಕಿಗೆ ದಾರಿದೀಪ: ಚಂದಣ್ಣ ಚೌಡ ಗುಂಡ

ಕಾರ್ಯಕ್ರಮದ ನೇತೃತವ ವಹಿಸಿದ್ದ ಜಿಲ್ಲಾಧಿಕಾರಿಗಳಾದ ಡಾಕ್ಟರ್ ರಾಗಪ್ರಿಯ ಆರ್ ಅವರು ಮಾತನಾಡಿ, ಪೋಡಿ ಪಹಣಿ ತಿದ್ದುಪಡಿ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ ಮತ್ತು ಇತರೆ ಇಲಾಖೆಗಳ ಸಂಬಂಧಿಸಿದ ಅರ್ಜಿಗಳನ್ನು ಪಡೆದುಕೊಂಡು ಅವುಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ನಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಬಸನಗೌಡ ಯಡಿಯಾಪುರ ಅವರು ಕಾರ್ಯಕ್ರಮದ ಕುರಿತು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಯಡಿಯಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರುಶಿಕೇಶ ಭಗವಾನ್ ಸೋನೆವಾಣೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ ರಜಪೂತ್ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ತಾಲೂಕು ಪಂಚಾಯಿತಿ ಅಧ್ಯಕ್ಷರು ತಾಸಿಲ್ದಾರರು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಡಪದ ಸಮಾಜದ ಪ್ರತ್ಯೇಕ ಅಭಿವೃದ್ದಿ ನಿಗಮ ಭಾಗ್ಯವಂತಿ ದೇವಿಯ ಮೂರೆ

ಇದೇ ಸಂದರ್ಭದಲ್ಲಿ ಪಡಿತರ ಚೀಟಿ ವೃದ್ಯಾಪ ವೇತನ ಸಂಧ್ಯಾ ಸುರಕ್ಷಾ ಸೇರಿದಂತೆ ವಿವಿಧ ಯೋಜನೆಗಳ ಪ್ರಮಾಣಪತ್ರಗಳನ್ನು ಕೂಡ ವಿತರಿಸಲಾಯಿತು ಹಾಗೂ ಖಾನಾಪುರ ಗ್ರಾಮದ ಸಮಸ್ಯೆಗಳ ಕುರಿತು ನಿವೃತ್ತ ಎಸ್ಪಿ ಚಂದ್ರಕಾಂತ್ ಭಂಡಾರಿಯವರು ಮಾತನಾಡಿ ಖಾನಾಪುರ ಎಸ್.ಹೆಚ್ ಗ್ರಾಮದಲ್ಲಿ ಅನೇಕ ಸಮಸ್ಯೆಗಳ ಕುರಿತು ಅಧಿಕಾರಿಗಳ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿ ಕಂದಾಯ ಇಲಾಖೆ ಶಿಕ್ಷಣ ಆರೋಗ್ಯ ಮತ್ತು ಕುಡಿಯುವ ನೀರು ವಿದ್ಯೂತ್ ರಸ್ತೆ ಹೀಗೆ ಅನೇಕ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.ಕಾರ್ಯಕ್ರಮದ ಆವರಣದಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ಸರಕಾರದ ಯೋಜನೆಗಳ ಕುರಿತು ಮಾಹಿತಿಯುಳ್ಳ ಮಳಿಗೆಗಳನ್ನು ತೆರೆಯುವ ಮೂಲಕ ಕಾರ್ಯಕ್ರಮದ ಮೆರಗು ಹೆಚ್ಚಿಸಲಾಗಿತ್ತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here