ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಫರತಾಬಾದ್ ಮತಕ್ಷೇತ್ರಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಮಾಜಿ ಎಪಿಎಂಸಿ ಅಧ್ಯಕ್ಷ ಅವ್ವಣ್ಣ ಮ್ಯಾಕೇರಿ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಫಜಲಪುರ ಮತಕ್ಷೇತ್ರದ ಕಟ್ಟಕಡೆಯ ಕುಗ್ರಾಮವಾದ ಹೇರೂರು ಬಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಸಾರ್ವಜನಿಕರ ಹಿತದೃಷ್ಟಿಯಿಂದ ವಾಸ್ತವ್ಯ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ. ಆದರೆ ಈ ಒಂದು ವಾಸ್ತವವನ್ನು ಕೇವಲ ರಾಜಕೀಯಕ್ಕಾಗಿ ಸೀಮಿತಗೊಳಿಸದೆ ಸಾರ್ವಜನಿಕರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವೇದಿಕೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಹೇರೂರ ಬಿ ಗ್ರಾಮ ಗ್ರಾಮವು ಪಂಚಾಯಿತಿ ಕೇಂದ್ರ ಸ್ಥಾನವಾಗಿದ್ದು ಬೆಳಗುಂಪಾ ಮತ್ತು ಮೈನಾಳ ಗ್ರಾಮವು ಸೇರಿಕೊಂಡಿದೆ ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹಲವಾರು ಮೂಲ ಸೌಕರ್ಯಗಳಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ವಿಜೇತ್ ವಾಪ್ತಿಯಲ್ಲಿ ಹದಗೆಟ್ಟ ರಸ್ತೆಗಳಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಆಸ್ಪತ್ರೆ ಇಲ್ಲದೆ ಜನರು ಆರೋಗ್ಯ ಸಮಸ್ಯೆಗಳಿಂದ ತೊಂದರೆಗೀಡಾಗುತ್ತಿದ್ದಾರೆ ಅಷ್ಟೇ ಅಲ್ಲದೆ ಸಣ್ಣ ನೀರಾವರಿ ಇಲಾಖೆಯಿಂದ ಕೋಟ್ಯಂತರ ಅನುದಾನ ಖರ್ಚು ಮಾಡಿದರೂ ಸಹ ಈ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪೂರೈಸಲು ಆಗಿಲ್ಲ ಹಾಗೂ ಸಾರ್ವಜನಿಕರಿಗೆ ಹಣಕಾಸಿನ ವ್ಯವಹಾರಕ್ಕಾಗಿ ಬ್ಯಾಂಕ್ ವ್ಯವಸ್ಥೆ ಇಲ್ಲ, ರಕ್ಷಣೆಗಾಗಿ ಪೊಲೀಸ್ ಠಾಣೆ ವ್ಯವಸ್ಥೆ ಇಲ್ಲ ಮಕ್ಕಳಿಗೆ ಕಾಲೇಜು ವ್ಯವಸ್ಥೆ ಇಲ್ಲ ಇತರ ಹತ್ತು ಹಲವಾರು ಸಮಸ್ಯೆಗಳಿಂದ ಈ ಹೇರೂರ ಬಿ ಗ್ರಾಪಂ ಜನರು ಸಮಸ್ಯೆಯಲ್ಲಿದ್ದಾರೆ ಎಂದರು.
ಹೇರೂರ ಬಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಬೇಕು ಮಕ್ಕಳಿಗೆ ಕಾಲೇಜು ವ್ಯವಸ್ಥೆ ಮಾಡಬೇಕು.ಹೇರೂರು ಬಿ ಹಾಗೂ ಹರವಾಳ ಗ್ರಾಮದ ಭೀಮಾ ನದಿಗೆ ಅಡ್ಡಲಾಗಿ ಬ್ರಿಜ್ ಕಮ್ ಬ್ಯಾರೇಜ್ ನಿರ್ಮಿಸುವುದು ಸುಸಜ್ಜಿತ ರಸ್ತೆ ನಿರ್ಮಾಣ ಮಾಡುವುದು. ಬಸ್ಸಿನ ವ್ಯವಸ್ಥೆ ಮಾಡುವುದು.ಐವತ್ತು ಬೆಡ್ಗಳ ಆಸ್ಪತ್ರೆ ನಿರ್ಮಾಣ ಮಾಡುವುದು ನೂತನ ಪಂಚಾಯತ್ ಕಟ್ಟಡ ನಿರ್ಮಾಣ ಮಾಡಬೇಕು ಅಕ್ರಮ ಮರಳುಗಾರಿಕೆ ನಿಲ್ಲಿಸಬೇಕು ಎಂಬುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಸಿಎಂ ಕುಮಾರಸ್ವಾಮಿಯವರು ಈಡೇರಿಸಬೇಕೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಸೂರ್ಯಕಾಂತ ನಾಕೇದಾರ, ಸಂತೋಷ್ ಕೋಲಿ, ವಿಶ್ವನಾಥ್, ವಿಜಯ ಕುಮಾರ್ ದೇಸಾಯಿ, ಪ್ರೇಮಕುಮಾರ್ ರಾಠೋಡ್, ಕಲ್ಯಾಣರಾವ್, ಸಿದ್ರಾಮ ಸಾಲಿಮನಿ ಸೇರಿದಂತೆ ಇನ್ನಿತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…