ಬಿಸಿ ಬಿಸಿ ಸುದ್ದಿ

ಬಿಜೆಪಿ ಮಂಡಲದಿಂದ ಎರಡು ದಿನಗಳ ಪ್ರಶಿಕ್ಷಣ ವರ್ಗ ಕಾರ್ಯಕ್ರಮ

ಶಹಾಬಾದ: ಪಕ್ಷದ ಸಂಘಟನೆ, ಪಕ್ಷ ನಿಷ್ಠೆ ನೋಡಿ ಕಾರ್ಯಕರ್ತರಿಗೆ ಸ್ಥಾನ ಮಾನಗಳನ್ನು ನೀಡುತ್ತದೆ.ಆದ್ದರಿಂದ ಪಕ್ಷಕ್ಕೆ ಯಾವಾಗಲೂ ಪ್ರಾಮಾಣೀಕತೆಯಿಂದ ಸೇವೆ ಸಲ್ಲಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕೆಂದು ಮಾಜಿ ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ ಹೇಳಿದರು.

ಅವರು ಶನಿವಾರ ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಶಹಾಬಾದ ಬಿಜೆಪಿ ಮಂಡಲದಿಂದ ಆಯೋಜಿಸಲಾದ ಎರಡು ದಿನಗಳ ಪ್ರಶಿಕ್ಷಣ ವರ್ಗದ ಪದಾಧಿಕಾರಿಗಳ ಮತ್ತು ಚುನಾಯಿತ ಪ್ರತಿನಿಧಿಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ತಹಸೀಲ್ದಾರ ನೇತೃತ್ವದಲ್ಲಿ  ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮದಲ್ಲಿ ವಾಸ್ತವ್ಯ

ಬಿಜೆಪಿಯಲ್ಲಿ ಕೆಲಸ ಮಾಡುವ ಸಾಮನ್ಯ ಕಾರ್ಯಕರ್ತನಿಗೂ ಉನ್ನತವಾದ ಸ್ಥಾನಮಾನಗಳನ್ನು ನೀಡಿದೆ.ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸುವ ಏಕೈಕ ಪಕ್ಷವೆಂದರೆ ಬಿಜೆಪಿ ಎಂದರು.ಪಕ್ಷಕ್ಕಾಗಿ ದೀನ ದಯಾಳ ಶರ್ಮಾ, ಶಾಮ ಮುಖರ್ಜಿ ಅವರ ಸೇವೆ ಅನನ್ಯ. ಅವರ ದಾರಿಯಲ್ಲಿ ನಾವು ನಡೆಯಬೇಕಿದೆ.ಅಲ್ಲದೇ ಪಕ್ಷದ ಧ್ಯೇಯ ಉದ್ದೇಶಗಳಿಗೆ ಬದ್ಧರಾಗಿ ಪಕ್ಷದ ಸಂಘಟನೆ ಕೈಗೊಳ್ಳಬೇಕು. ಸುಸಂಕೃತರಾಗಬೇಕು.ಸಮಾಜಕ್ಕೆ ಹಾಗೂ ದೇಶಕ್ಕೆ ಮಾದರಿಯಾಗುವ ವೈಯಕ್ತಿಕ ವರ್ಷಸ್ಸನ್ನು ಬೆಳೆಸಿಕೊಳ್ಳುವುದರ ಜತೆಗೆ ಸಮಾಜಕ್ಕೆ ಕೊಡುಗೆ ನೀಡಿದರೇ, ಪಕ್ಷಕ್ಕೆ ಹೆಸರು ಬರುವಂತಾಗುತ್ತದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಬಿರಾದಾರ ಮಾತನಾಡಿ,ಪಕ್ಷ ನೀಡಿದ ಸ್ಥಾನಮಾನಗಳು ಸರಿಯಾಗಿ ಬಳಸಿಕೊಳ್ಳುವ ಜತೆಗೆ ಪಕ್ಷದ ಸಂಘಟನೆಯಲ್ಲಿ ತೊಡಗಬೇಕು. ಹಿರಿಯ ಕಾರ್ಯಕರ್ತರ ಜತೆಗೆ ಯುವ ಹಾಗೂ ಉತ್ಸಾಹಿ ಕಾರ್ಯಕರ್ತರು ಸೇರಿ ಪಕ್ಷವನ್ನು ಮುನ್ನಡೆಸಬೇಕು.ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಬದುಕಬೇಕೆಂದು ಹೇಳಿದರು.

ರಟಕಲ್ ಗ್ರಾಮದಲ್ಲಿ ಖಾನವಳಿ ಚನ್ನವ್ವಾ ಅಭೂತಪೂರ್ವ ನಾಟಕ ಪ್ರದರ್ಶನ

ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು, ಜಿಲ್ಲಾ ಅಭ್ಯಾಸ ವರ್ಗದ ಸಂಚಾಲಕ ಸಂಜಯ್ ಮಿಸ್ಕಿನ್, ಮಂಡಲ ಸಂಚಾಲಕ ಅರುಣ ಪಟ್ಟಣ್ಣಕರ, ಮಂಡಲ ಅಧ್ಯಕ್ಷ ಅಣ್ಣವೀರ ಇಂಗಿನಶೆಟ್ಟಿ,
ಶಿಬಿರದ ಪ್ರಬಂಧಕರು, ಪ್ರತಿನಿಧಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.

ಸದಾನಂದ ಕುಂಬಾರ ನಿರೂಪಿಸಿದರು, ಸಿದ್ರಾಮ ಕುಸಾಳೆ ಸ್ವಾಗತಿಸಿದರು, ಶ್ರೀಧರ ಜೋಶಿ ವಂದಿಸಿದರು.

ಎರಡು ದಿನಗಳ ಕಾಲ ನಡೆಯುವ ಪ್ರಶಿಕ್ಷಣ ವರ್ಗದಲ್ಲಿ ಸಮಯ ಪಾಲನೆಯನ್ನು ಕಟ್ಟು ನಿಟ್ಟಾಗಿ ಪಾಲಿಸಿ. ನಿಮ್ಮ ಜವಾಬ್ದಾರಿಗಳನ್ನು ನಿಭಾಯಿಸಬೇಕು.ಈ ವರ್ಗದಲ್ಲಿ ನಿಮ್ಮ ವ್ಯಕ್ತಿತ್ವ ವಿಕಸನಗೊಳ್ಳಬೇಕು.ನಿಮ್ಮ ಭವಿಷ್ಯಕ್ಕೆ ಹಾಗೂ ಪಕ್ಷಕ್ಕೆ ಈ ಶಿಕ್ಷಣ ಮಾರ್ಗಸೂಚಿಯಾಗಬೇಕು-ಬಸವರಾಜ ಮತ್ತಿಮಡು ಶಾಸಕರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

4 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

5 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

5 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

5 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

5 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

5 hours ago