ಬಿಸಿ ಬಿಸಿ ಸುದ್ದಿ

ITI ವಿದ್ಯಾರ್ಥಿಗಳಿಗೆ ದ್ವಿತೀಯ ವರ್ಷಕ್ಕೆ ವಿನಾಯಿತಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ : ITI ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ದ್ವಿತೀಯ ವರ್ಷಕ್ಕೆ ವಿನಾಯಿತಿ ನೀಡುವಂತೆ ಒತ್ತಾಯಿಸಿ AIDYO ಬ್ರಹತ್ ಪ್ರತಿಭಟನೆ.

ಡಿಜಿಟಿಎ ಹಿಂದಿನ ಆದೇಶದಂತೆ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ದ್ವಿತೀಯ ವರ್ಷಕ್ಕೆ ಉನ್ನತಿಕರಣ ಗೊಳಿಸಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ (ಎಐಡಿವೈಓ ) ಕಾರ್ಯಕರ್ತರು ಎಸ್ ವಿ ಪಿ ವೃತ್ತದಿಂದ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಮಾನ್ಯ ಜಿಲ್ಲಾಧಿಕಾರಿ ಕಲಬುರ್ಗಿ ರವರ ಮೂಲಕ ಡಿಜಿಟಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಜಿಲ್ಲಾ ಉಪಾಧ್ಯಕ್ಷ ಭೀಮಾಶಂಕರ್ ಪಾಣೇಗಾಂವ್ ಅವರ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.

ಕನ್ನಡದ ಗಜಲ್ ಪರಂಪರೆ ಶ್ರೀಮಂತವಾಗಲಿ: ಪ್ರಾಧ್ಯಾಪಕ ಡಾ. ವಿಕ್ರಮ ವಿಸಾಜಿ

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 2019 ರ ಆಗಸ್ಟ ನಲ್ಲಿ ದಾಖಲಾದ ಐಟಿಐ ತರಬೇತಿದಾರರಿಗೆ ಕೊರೋನಾ ಹಿನ್ನೆಲೆಯಲ್ಲಿ ಮೊದಲ ವರ್ಷದ ಪರೀಕ್ಷೆಯ ರದ್ದುಗೊಳಿಸಿ ಅವರನ್ನು ನೇರವಾಗಿ ದ್ವಿತೀಯ ವರ್ಷಕ್ಕೆ ಪ್ರೊಮೋಟ್ ಮಾಡಬೇಕು ಎಂದು ಡಿಜಿಟಿ ಫೆಬ್ರವರಿ 5ರಂದು ಅಧಿಸೂಚನೆ ಹೊರಡಿಸಿತ್ತು.

ಆದರೆ ಮತ್ತೆ ಅದೇ ಡಿಜಿಟಿ ಫೆಬ್ರವರಿ 11 ರಂದು ಏಕಾಏಕಿ ಪರೀಕ್ಷೆ ಶುಲ್ಕ ಕಟ್ಟಬೇಕು ಅದು ಒಂದು ದಿನದಲ್ಲಿ ಮಾತ್ರ ಮತ್ತು ಪರೀಕ್ಷೆ ದಿನಾಂಕ ಮಾರ್ಚ್ 1ರಂದು ಪರೀಕ್ಷೆ ನಡೆಸಲು ಮತ್ತೊಂದು ಆದೇಶ ಬರುತ್ತದೆ . ಹೀಗಾಗಿ ವಿದ್ಯಾರ್ಥಿಗಳ ಮಧ್ಯೆ ಗೊಂದಲ ಸೃಷ್ಟಿಯಾಗಿದೆ. ಇಂಥ ಏಕಾಏಕಿ ಆದೇಶ ಗಳಿಂದ ವಿದ್ಯಾರ್ಥಿಗಳು ತುಂಬಾ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದು ಯುವಜನ ಸಂಘಟನೆಯಿಂದ ಖಡಾಖಂಡಿತವಾಗಿ ಖಂಡಿಸುತ್ತದೆ. ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಜಗನ್ನಾಥ್ ಎಸ್. ಎಚ್. ಪ್ರತಿಭಟನಾ ಮಾತನಾಡಿದರು.

ಗ್ರಂಥಾಲಯ ನಾಡಿನ ಸುಸಂಸ್ಕೃತ ಸಮಾಜದ ಪ್ರತೀಕ: ಪ್ರೊ. ಎಚ್.ಟಿ. ಪೋತೆ

ಈ ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಸಿದ್ದು ಚೌದ್ರಿ, ಮಲ್ಲಿನಾಥ್ ಹುಂಡೇಕಲ್, ಅಜಯ ಗುತ್ತೇದಾರ್,ಸತೀಶ್ ಪಟ್ಟಣ, ಶಿವಗಣೇಶ್ ಮಾಳಾ, ಚಂದ್ರಶೇಖರ್, ಸೇರಿದಂತೆ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago