ಕಲಬುರಗಿ: ಚಲನಚಿತ್ರದ ಕಲಾವಿದರು ಇನ್ನೊಬ್ಬರ ಅಣತಿಯಂತೆ ಕಾರ್ಯನಿರ್ವಹಿಸಿದರೆ ರಂಗ ಕಲಾವಿದರು ಸ್ವಾತಂತ್ರ್ಯವಾಗಿ ಅಭಿನಯಿಸುವ ಕಲಾವಿದರಾಗಿದ್ದಾರೆ. ದೇಶದ ತಳ ಸಮುದಾಯದ ಆಚಾರ-ವಿಚಾರ ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಇಂತಹ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ದೇವಿಂದ್ರಪ್ಪ ಕಪನೂರ ಹೇಳಿದರು.
ಕಲಬುರಗಿ ರಂಗಾಯಣದಿಂದ ಶನಿವಾರ ಡಾ. ಸಿದ್ದಯ್ಯ ಪುರಾಣಿಕ್ ಸಾಂಸ್ಕೃತಿಕ ಸಮುಚ್ಛಯ ಆವರಣದಲ್ಲಿ 2020-21ನೇ ಸಾಲಿನ ವಿಶೇಷ ಘಟಕ ಯೋಜನೆಯಡಿಯಲ್ಲಿ ಸಾಮಾಜಿಕ ಅರಿವು ಸಂಸ್ಕೃತಿ ಉತ್ಸವದ ಅಂಗವಾಗಿ ಆಯೋಜಿಸಿದ ಜನಪರ-ಜಾನಪದ- ನೃತ್ಯ- ಕಲಾಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ITI ವಿದ್ಯಾರ್ಥಿಗಳಿಗೆ ದ್ವಿತೀಯ ವರ್ಷಕ್ಕೆ ವಿನಾಯಿತಿಗೆ ಆಗ್ರಹಿಸಿ ಪ್ರತಿಭಟನೆ
ನಿರ್ಮಾಪಕ ಮತ್ತು ನಿರ್ದೇಶಕ ಹೇಳಿದಂತೆ ವಾಣಿಜ್ಯ ಚಲನಚಿತ್ರದಲ್ಲಿ ನಟಿಸುವ ಕಲಾವಿದರಿಗೂ ಹಾಗೂ ಗ್ರಾಮೀಣ ಜನರ ಧ್ವನಿಯಾಗಿ ಜಾನಪದ ಸಂಸ್ಕೃತಿ ಉಳಿಸುವ ರಂಗಾಯಣದ ಕಲಾವಿದರಿಗೂ ಅಜಗಜಾಂತರದ ವ್ಯತ್ಯಾಸವಿದೆ ಎಂದು ಹೇಳಿ ತಳ ಸಮುದಾಯದ ಸಂಸ್ಕೃತಿ ಬಗ್ಗೆ ಮಾತಾಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಜಾನಪದ ಕಲಾವಿದೆ ಶಿಲ್ಪಾ ಮುಡಬಿ ಅವರು ಮಾತನಾಡಿ, ಜಾನಪದ ಎನ್ನುವುದು ಸಮಕಾಲಿನ ಸಂಸ್ಕೃತಿಯ ಪ್ರತೀಕ ಎಂದರು.
ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಸಚಿವರಿಗೆ ಮನವಿ
ರಂಗಾಯಣದ ನಿರ್ದೇಶಕ ಪ್ರಭಾಕರ ಜೋಷಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯುವ ಸಾಹಿತಿ ಎಚ್.ಎಸ್.ಬೇನಾಳ, ಹಿರಿಯ ಚಿತ್ರಕಲಾವಿದ ಬಸವರಾಜ ಎಲ್. ಜಾನೆ, ರಂಗಾಯಣದ ಆಡಳಿತಾಧಿಕಾರಿ ದತ್ತಪ್ಪ ಸಾಗನೂರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…