ಕಲಬುರಗಿ: ದೇಶದ ಬೆನ್ನೆಲುಬು ಎನಿಸಿಕೊಂಡ ರೈತರಿರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ಅವರಿಗೆ ಏನೇ ಕಷ್ಟಬಂದರೂ ಅವರ ಸಮಸ್ಯೆ ಪರಿಹರಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಹೇಳಿದರು.
ಜಯ ಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾ ಘಟಕದ ವತಿಯಿಂದ ಭಾನುವಾರ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅನ್ನದಾತರ ರೈತರ ಹಬ್ಬ ಹಾಗೂ ರೈತರಿಗೆ ನೆಗಿಲ ಯೋಗಿ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಸೇರ್ಪಡೆ
ರೈತರು ಕಷ್ಟಗಳಿಗೆ ಎದೆಕೊಟ್ಟು ಜೀವಿಸಬೇಕು. ಯಾವುದೇ ಕಾರಣಕ್ಕೂ ಅತ್ಮಹತ್ಯೆ ಅಂತಹ ಕೆಲಸಕ್ಕೆ ಕೈ ಹಾಕಬಾರದು. ಸಮಸ್ಯೆಗೆ ಸಾವು ಒಂದೇ ದಾರಿ ಆಗಲಾರದು. ಹೀಗಾಗಿ ರೈತರು ಸಹನೆಯಿಂದ ಇರಬೇಕು. ನಿಮ್ಮ ಸಮಸ್ಯೆ ಪರಿಹಾರಕ್ಕೆ ನಾವಿದ್ದೇವೆ ಎಂದು ಹೇಳಿದರು.
ಶ್ರೀನಿವಾಸ ಸರಡಗಿಯ ಮಹಾಲಕ್ಷ್ಮಿ ಶಕ್ತಿ ಪೀಠದ ಪೀಠಾಧಿಪತಿ ಡಾ. ಅಪ್ಪಾರಾವ ದೇವಿ ಮುತ್ಯಾ ಮಾತನಾಡಿ, ಜಯ ಕರ್ನಾಟಕ ರಕ್ಷಣಾ ಸೇನೆ ಸಂಘಟನೆಕಾರರು ರೈತರಿಗೆ ಸನ್ಮಾನಿಸಿ ಗೌರವಿಸುತ್ತಿರುವುದು ದೇಶದಲ್ಲಿಯೇ ಹೆಮ್ಮೆಯ ಕೆಲಸವಾಗಿದೆ. ರೈತರೊಂದಿಗೆ ದೇಶದ ಗಡಿ ಕಾಯುವ ವೀರ ಯೋಧರಿಗೂ ಗೌರವಿಸುವ ಕೆಲಸವಾಗಬೇಕು. ಅಂದಾಗ ಮಾತ್ರ ಕಾರ್ಯಕ್ರಮಕ್ಕೆ ನಿಜವಾದ ಅರ್ಥ ಬರುತ್ತದೆ ಎಂದರು.
ಶಾಸಕರು ರೈತರ ಸಮಸ್ಯೆಗೆ ಪರಿಹರಿಸುವತ್ತ ಗಮನ ಹರಿಸಬೇಕು. ಆ ನಿಟ್ಟಿನಲ್ಲಿ ಶಾಸಕರಾದ ಬಸವರಾಜ ಮತ್ತಿಮೂಡ ಅವರು ಪತ್ರಿಯೊಬ್ಬರ ಸಮಸ್ಯೆಗೂ ಸ್ಪಂಧಿಸುವ ಗುಣ ಹೊಂದಿದ್ದಾರೆ. ಅವರ ಕಳಕಳಿ ಇತರರಿಗೂ ಮಾದರಿಯಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರೈತರಿಗೆ ನೇಗಿಲಯೋಗಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮತ್ತು ಮಾಜಿ ವೀರ ಯೋಧರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಹಾಸ್ಯ ಮನರಂಜನಾ ಕಾರ್ಯಕ್ರಮಗಳು ನಡೆದವು.
ಸರಕಾರಿ ನಿವೃತ್ತ ನೌಕರರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ
ಜಯ ಕರ್ನಾಟಕ ರಕ್ಷಣಾ ಸೇನೆಯ ರಾಜ್ಯಾಧ್ಯಕ್ಷ ಕೆ.ಸಿ.ರಾಜಪ್ಪ, ಗೌರವಾಧ್ಯಕ್ಷ ಮಂಜೇಗೌಡ್ರು, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕ ಸುರೇಶ ತಂಗಾ, ಜೆಡಿಎಸ್ ಯುವ ಮುಖಂಡರಾದ ನಜ್ಮಾ ನಜೀರ್ ಚಿಕ್ಕನೇರಳೆ, ವಿದ್ಯುತ್ ಪ್ರಥಮ ದರ್ಜೆ ಗುತ್ತಿಗೆದಾರರಾದ ಶಿವಕುಮಾರ ಎಸ್.ಕಿಳ್ಳಿ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಸ್.ಕಿಳ್ಳಿ, ಕಾಂಗ್ರೆಸ್ ಮುಖಂಡ ರವಿ ಚವಾಣ, ಆನಂದ ಎಸ್, ಪಾಟೀಲ್, ವಿನೋದ ಆರ್.ಪಾಟೀಲ್ ಹಾಗೂ ಜಯ ಕರ್ನಾಟಕ ರಕ್ಷಣಾ ಸೇನೆಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…