ಸುರಪುರ: ರಾಜ್ಯದಲ್ಲಿ ಸತತ ಬರಗಾಲದಿಂದ ಗ್ರಾಮೀಣ ಭಾಗದ ರೈತರು ಮತ್ತು ಬಡ ಜನತೆ ತತ್ತರಿಸಿದ್ದು ಬಡ ಕುಟುಂಬಗಳ ವಿದ್ಯಾರ್ಥಿಗಳು ಶಾಲೆ ಕಾಲೇಜಿಗೆ ಹೋಗಲು ತುಂಬಾ ತೊಂದರೆಯಾಗುತ್ತಿದೆ,ಆದ್ದರಿಂದ ಸರಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವಿಭಾಗಿಯ ಸಂಚಾಲಕ ನಾಗರಾಜ ಮಕಾಶಿ ಸರಕಾರಕ್ಕೆ ಒತ್ತಾಯಿಸಿ.
ನಗರದ ತಹಸೀಲ್ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಮುಖ್ಯಮಂತ್ರಿಗಳು ಹಿಂದೆ ೨೦೧೮-೧೯ರ ಬಜೆಟಲ್ಲಿ ಉಚಿತ ಬಸ್ ಪಾಸ್ ನೀಡುವುದಾಗಿ ಹೇಳಿದ್ದರು, ಆದರೆ ಈಗ ಆ ಮಾತನ್ನು ಮರೆತಂತಿದೆ,ಬರಗಾಲದಿಂದ ವಿದ್ಯಾರ್ಥಿಗಳು ದುಬಾರಿ ಶುಲ್ಕ ನೀಡುವಲ್ಲಿ ಹೈರಾಣಾಗಿದ್ದಾರೆ, ಇಂತಹ ಸಂದರ್ಭದಲ್ಲಿ ಸರಕಾರ ಬಡ ವಿದ್ಯಾರ್ಥಿಗಳಿಗೆ ಬಸ್ ಪಾಸಿಗು ದರ ವಿಧಿಸಿದರೆ ಮತ್ತಷ್ಟು ಸಂಕಷ್ಟ ಹೆದರಿಸಬೇಕಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿಗಳು ಬಡ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತು ಕೂಡಲೆ ಉಚಿತ ಬಸ್ ಪಾಸ್ ನೀಡುವಂತೆ ಎಬಿವಿಪಿ ಒತ್ತಾಯಿಸುತ್ತದೆ ಎಂದು ಸರಕಾರಕ್ಕೆ ಆಗ್ರಹಿಸಿ,ಜೊತೆಗೆ ತಾಲ್ಲೂಕಿನಲ್ಲಿರುವ ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ ಹಾಗು ಗ್ರಂಥಾಲಯದ ವ್ಯವಸ್ಥೆ ಕಲ್ಪಿಸಬೇಕು ಮತ್ತು ವಿದ್ಯಾರ್ಥಿನಿಯರ ವಸತಿ ನಿಲಯಗಳ ಮುಂದೆ ಪೊಲೀಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ ಕಚೇರಿ ಸಿಬ್ಬಂದಿ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ರಮೇಶ ಯಾದವ,ಕ್ಯಾತಪ್ಪ ಮೇದಾ,ಪರಶುರಾಮ ಬೈಲಕುಂಟಿ,ಅಯ್ಯಪ್ಪ ಅಮ್ಮಾಪುರ,ಸುನೀಲ್,ಹಣಮಂತ ಮಂಜಲಾಪುರ,ಅಶೋಕ ಚಂದ್ಲಾಪುರ,ವಿಷ್ಣು ಸುರಪುರ,ಮಂಜುನಾಥ ಬಾದ್ಯಾಪುರ,ಆಕಾಶ ಸುರಪುರಕರ್,ಬಸವರಾಜ ಕುಂಬಾರಪೇಟೆ,ನಿಂಗಯ್ಯ ಅಮ್ಮಾಪುರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…