ರಾಯೂಚುರು: ಸರಿಯಾದ ಸಮಯಕ್ಕೆ ಬಸ್ ಬಾರದೇ ಇರುವುದು ಮತ್ತು ಬರುವ ಬಸ್ ಗಳು ನಿಲ್ಲಿಸದೇ ಇರುವುದನ್ನು ಖಂಡಿಸಿ ಇಂದು ಕುಪ್ಪಿಗುಡ್ಡದಲ್ಲಿ 2 ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ರಸ್ತೆತಡೆದು ಎಸ್ಎಫ್ಐ ಪ್ರತಿಭಟನೆ ನಡೆಸಿದರು.
ಈ ವೇಳೆ ಸಂಪೂರ್ಣವಾಗಿ ರಸ್ತೆ ಜಾಮ್ ಆಗಿ ಸುಮಾರು 70-80 ಬಸ್ ಗಳು ನಿಂತುಕೊಂಡಿದ್ದವು. ಪರಿಸ್ಥಿಯ ಗಂಭೀರತೆಯನ್ನು ಅರಿತ ಡಿಪೋ ಮ್ಯಾನೇಜರ್ ಹಾಗೂ ಪೊಲೀಸರು ಆಗಮಿಸಿದರು. ಎಸ್ಎಫ್ಐ ಮುಖಂಡರು, ಡಿಪೋ ಮ್ಯಾನೇಜರ್ ಹಾಗೂ ಪೊಲೀಸ್ ರ ನಡುವೆ ಮಾತಿನ ಚಕಮಕಿ ನಡೆಯಿತು.
ನಂತರ ಡಿಪೋ ಮ್ಯಾನೇಜರ್ ಸರಿಯಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಗಳನ್ನು ಬಿಡುತ್ತೇವೆಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈ ಬಿಡಲಾಯಿತು ಎಂದು ಪ್ರತಿಭಟನೆಯ ನೇತೃತ್ವವಹಿಸಿದ ಸಂಘಟನೆಯ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ತಿಪ್ಪಣ್ಣ ನಿಲೋಗಲ್, ಮುಖಂಡರಾದ ಬಸಲಿಂಗ, ಅಮರೇಗೌಡ, ಡಿವೈಎಫ್ಐ ನ ಶಿವು ಕಪಗಲ್ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…