ಕಲಬುರಗಿ: ಇಂದಿನ ದಿನಮಾನದಲ್ಲಿ ಡಾಕ್ಟರೇಟ್ ಪದವಿ ಪಡೆದರು ಕೆಲಸ ಸಿಗುತ್ತಿಲ್ಲ, ಇಂತಹ ಸಮಯದಲ್ಲಿ ಯುವಪೀಳಿಗೆÀ ಟಿ.ವಿ ಮತ್ತು ಮೊಬೈಲ್‍ಗಳಿಗೆ ಅಂಟಿಕೊಳ್ಳದೆ ಉದ್ಯೋಗ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕೈಗಾರಿಕಾ ಮತ್ತು ತರಬೇತಿಯ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರನಾಥ ಬಾಳಿ ಅವರು ತಿಳಿಸಿದರು.
ಬುಧವಾರ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಫಾಟಿಸಿ ಅವರು ಮಾತನಾಡಿದರು.
ಕಾಗಿಣಾ ನದಿಗೆ ಹಾರಿದ ವೃದ್ಧೆಯನ್ನು ರಕ್ಷಿಸಿದ ಯುವಕರು
ವಿದ್ಯಾರ್ಥಿಗಳು ಓದಿಕೊಂಡು ತಮ್ಮ ವೃತ್ತಿ ಜೀವನವನ್ನು ಚೆನ್ನಾಗಿ ರೂಪಿಸಿ ತಮ್ಮದೆಯಾದ ಸೇವೆ ಸಮಾಜಕ್ಕೆ ನೀಡಿದಲ್ಲಿ ಅದು ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ. ಈಗಿನ ವಿದ್ಯಾರ್ಥಿಗಳು ಮೊಬೈಲ್, ಟಿವಿ ಮುಂತಾದ ಮಾಧ್ಯಮಗಳಿಗೆ ದಾಸರಾಗದೇ ತ್ಯಾಗ ಮಾಡಿ ಶ್ರದ್ದೆಯಿಂದ ಓದಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಬೇಕು ಎಂದು ಅವರು ವಿದ್ಯಾರ್ಥಿ ಸಮೂಹಕ್ಕೆ ಕರೆ ನೀಡಿದರು.
ಹಿಂದೆ 60, 80ರ ದಶಕದಲ್ಲಿ ಉದ್ಯೋಗ ವಿನಿಮಯ ಕಚೇರಿಯವರು ಸರಕಾರಿ ನೌಕರಿ ನೀಡುತ್ತಿದ್ದರು. ಆದರೆ ಪ್ರಸ್ತುತದಲ್ಲಿ ಐ.ಎ.ಎಸ್., ಕೆ.ಎ.ಎಸ್., ಎಫ್.ಡಿ.ಎ., ಎಸ್.ಡಿ.ಎ. ಸೇರಿದಂತೆ ಅನೇಕ ಸರ್ಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳುತ್ತಿದ್ದು, ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕೆಂದು ಅವರು ಪುನರುಚ್ಚಿಸಿದರು.
ವಾಡಿ-ಚಿತ್ತಾಪುರ ಬಸ್ ಸೌಲಭ್ಯ ಒದಗಿಸಲು ವಿದ್ಯಾರ್ಥಿಗಳ ಪ್ರತಿಭಟನೆ
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉದ್ಯೋಗ ಮತ್ತು ತರಬೇತಿ ಇಲಾಖೆ ವಿಭಾಗೀಯ ಕಚೇರಿಯ ಸಹಾಯಕ ನಿರ್ದೇಶಕ ಶರಣಪ್ಪ ಮಾತನಾಡಿ, ಕೋವಿಡ್-19 ಸಂದರ್ಭದಲ್ಲಿ ಇಷ್ಟು ದಿನ ಉದ್ಯೋಗ ಮೇಳ ಆಯೋಜಿಸಿರಲಿಲ್ಲ ಎಂದರು.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕಿ ಭಾರತಿ ಅವರು ಮಾತನಾಡಿ, ಉದ್ಯೋಗ ಎಂದ ಕೂಡಲೆ ಸರ್ಕಾರಿ ಕೆಲಸ ಎಂಬ ಮಾತಂತಿದೆ. 24 ವರ್ಷಗಳ ಹಿಂದೆ ನೇರವಾಗಿ ಉದ್ಯೋಗ ವಿನಿಮಯ ಕಚೇರಿಯಿಂದ ಸರ್ಕಾರಿ ಕೆಲಸವನ್ನು ಪಡೆಯಬಹುದಾಗಿತ್ತು. ಆದರೆ ಇಂದಿನ ದಿನಗಳಲ್ಲಿ ಎಲ್ಲವು ಸಿ.ಇ.ಟಿ ಪರೀಕ್ಷೆಯ ಮೂಲಕ ನೇಮಕಗೊಳ್ಳುತ್ತಿವೆ. ಇದಕ್ಕಾಗಿ ನಿರುದ್ಯೋಗಿಗಳು ಪರೀಕ್ಷೆ ಬರೆಯಲು ಸಿದ್ಧರಿರಬೇಕು ಎಂದರು.
ಸಾರಿಗೆ ಬಸ್ ಡಿಕ್ಕಿ: ಮೃತ ಕುಟುಂಬಕ್ಕೆ ಪರಿಹಾರಕ್ಕೆ ಒತ್ತಾಯಿಸಿ ರಸ್ತೆ ತಡೆದು ಪ್ರತಿಭಟನೆ
244 ಜನರಿಗೆ ಲಭಿಸಿತು ಉದ್ಯೋಗ: ಇಂದು ನಡೆದ ಉದ್ಯೋಗ ಮೇಳದಲ್ಲಿ 12 ಕಂಪನಿಗಳು ಭಾಗವಹಿಸಿದ್ದು, 244 ಜನರು ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಉದ್ಯೋಗ ಪಡೆದುಕೊಂಡರ ಪೈಕಿ 196 ಯುವಕರಿದ್ದರೆ 48 ಜನ ಮಹಿಳೆಯರಿದ್ದಾರೆ. ಇನ್ನೂ 84 ವಿದ್ಯಾರ್ಥಿಗಳು ಅಪ್ರೆಂಟಿಸ್ ತರಬೇತಿ ಪಡೆಯಲು ಆಯ್ಕೆಯಾಗಿದ್ದಾರೆ. 552 ಪರುಷ ಅಭ್ಯರ್ಥಿ ಮತ್ತು 273 ಮಹಿಳಾ ಅಭ್ಯರ್ಥಿ ಸೇರಿದಂತೆ ಒಟ್ಟಾರೆ 825 ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಭಾಕರ, ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ನಿರುದ್ಯೋಗಿಗಳು ಭಾಗವಹಿಸಿದ್ದರು. ಸತೀಶಕುಮಾರ ರಾಠೋಡ ನಿರೂಪಿಸಿದರು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…