ಬಿಸಿ ಬಿಸಿ ಸುದ್ದಿ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

ಕಲಬುರಗಿ: ಬಸವಪೀಠ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಇವುಗಳ ಸಂಯುಕ್ತಾಶ್ರಯದಲ್ಲಿ “ವಚನ ಸಾಹಿತ್ಯ: ಸಾಮಾಜಿಕ, ಸಾಂಸ್ಕøತಿಕ ಮತ್ತು ವೈಚಾರಿಕ ಅನುಸಂಧಾನ” ಕುರಿತು ಇದೇ ಫೆಬ್ರವರಿ 25 ಮತ್ತು 26 ರಂದು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ವ್ಯವಹಾರ ಅಧ್ಯಯನ ನಿಕಾಯದ ಹತ್ತಿರದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಫೆಬ್ರವರಿ 25 ರಂದು ಬೆಳಿಗ್ಗೆ 10.30 ಗಂಟೆಗೆ ಖ್ಯಾತ ಕನ್ನಡ ಸಾಹಿತಿಗಳಾದ ಪ್ರೊ. ಮ.ಗು. ಬಿರಾದಾರ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸುವರು. ಬೆಂಗಳೂರಿನ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಹಾಗೂ ಕರ್ನಾಟಕ ಲೋಕಸೇವಾ ಆಯೋಗ ಸದಸ್ಯ ಪ್ರೊ.ರಂಗರಾಜ ವನದುರ್ಗ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಾಗಿಣಾ ನದಿಗೆ ಹಾರಿದ ವೃದ್ಧೆಯನ್ನು ರಕ್ಷಿಸಿದ ಯುವಕರು

ಪ್ರಸಿದ್ದ ಲೇಖಕರು ಮತ್ತು ಚಿಂತಕರಾದ ಪ್ರೊ. ಬಸವರಾಜ ಕಲ್ಗುಡಿ ಆಶಯ ಭಾಷಣ ಮಾಡುವರು. ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಎಮ್.ವಿ. ಆಳಗವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಅಂದು ಮಧ್ಯಾಹ್ನ 2 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಿಚಾರ ಗೋಷ್ಠಿ-1 ಹಾಗೂ ಮಧ್ಯಾಹ್ನ 3.45 ರಿಂದ ಸಂಜೆ 5.15 ಗಂಟೆಯವರೆಗೆ ಗೋಷ್ಠಿ-2 ನಡೆಯಲಿದೆ. ಅದೇ ರೀತಿ ಸಂಜೆ 5.30 ರಿಂದ 6.30 ಗಂಟೆಯವರೆಗೆ ವಚನ ಗಾಯನ ಕಾರ್ಯಕ್ರಮ ಜರುಗಲಿದೆ.

ವಾಡಿ-ಚಿತ್ತಾಪುರ ಬಸ್ ಸೌಲಭ್ಯ ಒದಗಿಸಲು ವಿದ್ಯಾರ್ಥಿಗಳ ಪ್ರತಿಭಟನೆ

ಫೆಬ್ರವರಿ 26 ರಂದು ಮಧ್ಯಾಹ್ನ 3.30 ಗಂಟೆಗೆ ಎರಡನೇ ದಿನದ ಅಂತರರಾಷ್ಟ್ರೀಯ ಸಮ್ಮೇಳನದ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಬಸವ ಮಹಾಮನೆ ಸಂಸ್ಥೆಯ ಅಧ್ಯಕ್ಷ ಪೂಜ್ಯ ಶ್ರೀ ಬೆಲ್ದಾಳ ಸಿದ್ದರಾಮ ಶರಣರು ಹಾಗೂ ಕಲಬುರಗಿಯ ಹಿಂಗುಲಾಂಬಿಕಾ ಆಯುರ್ವೇದ ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಅಲ್ಲಮಪ್ರಭು ಗುಡ್ಡಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಪ್ರಸಿದ್ಧ ಲೇಖಕ ಮತ್ತು ಚಿಂತಕರಾದ ಪ್ರೊ.ಎಚ್.ಎಸ್. ರಾಘವೇಂದ್ರರಾವ್ ಅವರು ಸಮಾರೋಪ ಭಾಷಣ ಮಾಡುವರು. ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಮ್.ವಿ. ಅಳಗವಾಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಸಾರಿಗೆ ಬಸ್ ಡಿಕ್ಕಿ: ಮೃತ ಕುಟುಂಬಕ್ಕೆ ಪರಿಹಾರಕ್ಕೆ ಒತ್ತಾಯಿಸಿ ರಸ್ತೆ ತಡೆದು ಪ್ರತಿಭಟನೆ

ಅಂದು ಬೆಳಿಗ್ಗೆ 10 ರಿಂದ ಬೆಳಿಗ್ಗೆ 11.30 ಗಂಟೆಯವರೆಗೆ ಮೂರನೇ ಗೋಷ್ಠಿ, ಬೆಳಿಗ್ಗೆ 11.15 ರಿಂದ ಮಧ್ಯಾಹ್ನ 1.15 ರವರೆಗೆ ನಾಲ್ಕನೇ ಗೋಷ್ಠಿ ಹಾಗೂ ಮಧ್ಯಾಹ್ನ 2 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆÉ ಐದನೇ ಗೋಷ್ಠಿ ನಡೆಯಲಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago