ಶಹಾಬಾದ: ಭಾರತೀಯ ಜನತಾ ಪಕ್ಷವು ದೇಶ ಭಕ್ತರನ್ನು ಮತ್ತು ರಾಷ್ಟ್ರಪ್ರೇಮಿಗಳನ್ನು ಕಟ್ಟಿದ ಪಕ್ಷವಾಗಿದ್ದು, ಇಂದು ಹೆಮ್ಮರವಾಗಿ ಬೆಳೆಯುತ್ತಿದೆ ಎಂದರೆ ಅದು ಪಕ್ಷದ ಕಾರ್ಯಕರ್ತರಿಂದಲೇ ಎಂಬುದನ್ನು ನಾವು ತಿಳಿದುಕೊಳ್ಳಬೇಕೆಂದು ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ಅವರು ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಶಹಾಬಾದ ಬಿಜೆಪಿ ಮಂಡಲದಿಂದ ಆಯೋಜಿಸಲಾದ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಭಾರತ ದೇಶಕ್ಕೆ ವಿಶ್ವಮಟ್ಟದಲ್ಲಿ ಹೆಸರನ್ನು ತಂದುಕೊಟ್ಟವರು ಪ್ರಧಾನಿ ನರೆಂದ್ರ ಮೋದಿಯವರು. ಅವರ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ಬಿಜೆಪಿ ಕಾರ್ಯಕರ್ತರು ಶಿಸ್ತು ಮತ್ತು ಬದ್ಧತೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಮುಖಿಯಾಗಿ ಮುನ್ನಡೆಯಬೇಕು.ಮುಂಬರುವ ತಾಪಂ,ಜಿಪಂ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಪಕ್ಷದ ಸಂಘಟನೆಯನ್ನು ಬಲಿಷ್ಠಗೊಳಿಸಬೇಕೆಂದು ಹೇಳಿದರು.
ಪೊಗರು ಸಿನಿಮಾದಲ್ಲಿ ಬ್ರಾಹ್ಮಣರಿಗೆ ಅಪಮಾನ: ದೃಶ್ಯ ತೆಗೆದು ಹಾಕಲು ಆಗ್ರಹ
ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಮಾತನಾಡಿ, ನಿಷ್ಠಾವಂತ ಕಾರ್ಯಕರ್ತರೇ ಬಿಜೆಪಿ ಪಕ್ಷಕ್ಕೆ ಆಸ್ತಿ. ಆದ್ದರಿಂದ ನಾವು ಯಾವದೇ ಪಕ್ಷಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ ಆರೋಗ್ಯವಂತ ಸಮಾಜ ಹಾಗೂ ಸದೃಢ ಭಾರತ ಕಟ್ಟಲು ನಮ್ಮನ್ನು ನಾವು ಸಮರ್ಪಿಸಿಕೊಂಡು ಕೆಲಸ ಮಾಡಬೇಕೆಂದರು. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರು ಹಾಗೂ ಚಹಾ ಮಾರುವವ ಸಾಮಾನ್ಯ ಕಾರ್ಯಕರ್ತನು ಪ್ರಧಾನ ಮಂತ್ರಿಯಾಗಲು ಸಾಧ್ಯ. ಬೆರಳೆಣಿಕೆಯ ಸ್ಥಾನ ಗಳಿಸುತ್ತಿದ್ದ ಬಿಜೆಪಿ ಪಕ್ಷ ತತ್ವ ಸಿದ್ಧಾಂತಗಳ ನೆಲೆಗಟ್ಟಿನಲ್ಲಿ ಈ ಮಟ್ಟಕ್ಕೆ ದೊಡ್ಡದಾಗಿ ಬೆಳೆದಿದೆ ಎಂದು ಹೇಳಿದರು.
ಸ್ಮಾರ್ಟ್ ಕ್ಲಾಸ್ ಆರಂಭಕ್ಕೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಸಂಘ ನೆರವು
ಪ್ರಶಿಕ್ಷಣ ವರ್ಗದ ರಾಜ್ಯ ಸಂಚಾಲಕ ಶ್ರೀಕಾಂತ ಕುಲಕರ್ಣಿ, ವಿಭಾಗೀಯ ಸಹ ಸಂಚಾಲಕ ಈಶ್ವರಸಿಂಗ್ ಠಾಕೂರ, ವಿಭಾಗಿಯ ಪ್ರಭಾರಿ ಸಂಜಯ ಮಿಸ್ಕಿನ,ಮಂಡಲ ಉಸ್ತುವಾರಿಯಾದ ಲಿಂಗರಾಜ ಬಿರಾದಾರ, ಮಂಡಲ ಸಂಚಾಲಕ ಅರುಣ ಪಟ್ಟಣ್ಣಕರ, ಸಹ ಸಂಚಾಲಕ ನಿಂಗಣ್ಣ ಹುಳಗೋಳಕರ,ಶಿಬಿರದ ಪ್ರಬಂಧಕರು, ಪ್ರತಿನಿಧಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.
ಸದಾನಂದ ಕುಂಬಾರ ನಿರೂಪಿಸಿದರು, ಸಿದ್ರಾಮ ಕುಸಾಳೆ ಸ್ವಾಗತಿಸಿದರು, ಬಸವರಾಜ ಬಿರಾದಾರ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…