ಕಲಬುರಗಿ : ಕಲ್ಯಾಣ ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಶರಣಬಸವೇಶ್ವರ ಸಂಸ್ಥಾನ ಬಹಳ ದೊಡ್ಡ ಕೊಡುಗೆ ನೀಡುತ್ತಿದೆ ಎಂದು ಹಿರಿಯ ಖ್ಯಾತ ಸಾಹಿತಿ ಡಾ.ಮ.ಗು.ಬಿರಾದಾರ ಹೇಳಿದರು.
ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಮಾತೃಭಾಷಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಕಲಿಯುವ ಭಾಷೆ ಯಾವುದೇ ಆಗಿರಲಿ ಆದರೆ ನಮ್ಮ ಮಾತೃಭಾಷೆ ಮರೆಯಬಾರದು. ಕನ್ನಡ ಭಾಷೆಗೆ ತನ್ನದೆ ಆದ ಇತಿಹಾಸವಿದೆ, ಇಂತಹ ಕನ್ನಡದ ನೆಲದಲ್ಲಿ ಜನಿಸಿದ ನಾವು ಧನ್ಯರಾಗಿದ್ದೇವೆ. ಪೂಜ್ಯ ದೊಡ್ಡಪ್ಪ ಅಪ್ಪ ಅವರು ಕನ್ನಡ ಶಾಲೆ ಆರಂಭಿಸಿ ಈ ಭಾಗದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಬುನಾದಿ ಹಾಕಿ, ಮಹಿಳೆಯರು ಶೈಕ್ಷಣಿಕವಾಗಿ ಸಾಧನೆ ಮಾಡಲು ಕಾರಣಿಕರ್ತರಾದರು. ಅದರಂತೆ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರು ಕನ್ನಡಕ್ಕಾಗಿ, ಕನ್ನಡ ಭಾಷೆಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇಂತಹ ಕಾರ್ಯಕ್ರಮಗಳು ಮಾಡುವುದರಿಂದ ಇಂದಿನ ಮಕ್ಕಳಿಗೆ ಮಾತೃಭಾಷೆಯ ಅರಿವು ಮೂಡಿಸಿದಂತಾಗುತ್ತದೆ. ಶರಣಸಂಸ್ಥೆಯ ಮಗುವಾಗಿರುವ ನಾನು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು.
ಜನನಿ ಕಾಲೇಜಿನಲ್ಲಿ ಪ್ರವೇಶಕ್ಕೊಂದು ಸಸಿ ವಿಶೇಷ ಕಾರ್ಯಕ್ರಮ
ಕಾರ್ಯಕ್ರಮದ ಮುಖ್ಯಅತಿಥಿಯಾಗಿದ್ದ ಸಾಧನಾ ಅಕಾಡೆಮಿಯ ಅಧ್ಯಕ್ಷೆ ಡಾ.ಜ್ಯೋತಿ ಮಾತನಾಡಿ, ಸಾಧನೆಗೆ ಯಾವುದೇ ಮೀತಿಯಿಲ್ಲ, ಹಠ, ಛಲಗಳಿದ್ದಾಗ ಮಾತ್ರ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಯುವಜನತೆ ನಿರ್ದಿಷ್ಟವಾದ ಗುರಿ ಇಟ್ಟುಕೊಂಡು ಅದರ ದಾರಿಯಲ್ಲಿ ಸಾಗಬೇಕು. ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಐಎಎಸ್, ಕೆಎಎಸ್ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸಾಗಬೇಕು. ಶರಣಬಸವೇಶ್ವರ ಸಂಸ್ಥಾನ ಇಂತಹ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ವೇದಿಕೆ ಮಾಡಿಕೊಟ್ಟಿದೆ ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆಯಬೇಕು ಎಂದು ಸಲಹೆ ನೀಡಿದರು. ಬಡತನದಿಂದ ಬಂದು ತಾವು ಎದುರಿಸಿದ ಕಷ್ಟಗಳು ಅದರ ಜೊತೆಗೆ ಮಾಡಿದ ಸಾಧನೆ ಮಾಡಿರುವ ಪರಿಯನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ ಮಾತನಾಡಿ, ಶರಣಬಸವೇಶ್ವರ ಸಂಸ್ಥಾನ ಕನ್ನಡ ನಾಡು ನುಡಿ ಬೆಳವಣಿಗಾಗಿ ಬಹಳ ಕೆಲಸ ಮಾಡಿದೆ. ಶರಣಸಂಸ್ಥೆಯಲ್ಲಿ ಕಲಿತ ಎಷ್ಟೋ ವಿದ್ಯಾರ್ಥಿಗಳು ಹೆಸರಾಂತ ಸಾಹಿತಿಗಳಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬೇರೆ ಭಾಷೆಗಳ ಪ್ರಭಾವದಿಂದ ಕನ್ನಡಭಾಷೆಯ ಬಳಕೆ ಕಡಿಮೆಯಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು. ಆದರೆ ವಿದ್ಯಾರ್ಥಿಗಳು ಬೇರೆ ಭಾಷೆಗಳೊಂದಿಗೆ ಕನ್ನಡ ಭಾಷೆ ಕಡ್ಡಾಯವಾಗಿ ಕಲಿಯಬೇಕು ಎಂದು ಸಲಹೆ ನೀಡಿದರು.
ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ
ವೇದಿಕೆ ಮೇಲೆ ಮಹಾವಿದ್ಯಾಲಯದ ಐಕ್ಯೂಎಸಿ, ನ್ಯಾಕ್ ಸಂಯೋಜಕಿ ಡಾ.ಇಂದಿರಾ ಶೆಟಕಾರ, ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶ್ರೀಮತಿ ಜಾನಕಿ ಹೊಸೂರ, ಸಹ ಸಹಲೆಗಾರರಾದ ಡಾ.ಸೀಮಾ ಪಾಟೀಲ ಇದ್ದರು.
ಶ್ರೀಮತಿ ಜಾನಕಿ ಹೊಸುರ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರೆ, ಡಾ.ಪುಟ್ಟಮಣಿ ದೇವಿದಾಸ ಅತಿಥಿ ಪರಿಚಯಸಿದರು, ಶ್ರೀಮತಿ ಅನಿತಾ ಕೆ.ಗೊಬ್ಬುರ ಕಾರ್ಯಕ್ರಮ ನಿರೂಪಿಸಿದರು, ಶ್ರೀಮತಿ ಪದ್ಮಜಾ ವೀರಶೆಟ್ಟಿ ವಂದಿಸಿದರು. ಡಾ.ಸೀಮಾ ಪಾಟೀಲ ಮತ್ತು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.
ವಿಜಯಲಕ್ಷ್ಮಿ ಮಸಾಲೆ ಉತ್ಪನ್ನಗಳು ಮಾರುಕಟ್ಟೆಗೆ ಬಿಡುಗಡೆ
ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಸಂಗೀತಾ ಪಾಟೀಲ, ಕೃಪಾಸಾಗರ ಗೊಬ್ಬುರ, ಶ್ರೀಮತಿ ದೀಶಾ ಮೆಹತಾ, ಶ್ರೀಮತಿ ದಾಕ್ಷಾಯಣಿ ಜಿ.ಕಾಡಾದಿ, ಶ್ರೀಮತಿ ಗೌರಮ್ಮ, ಶ್ರೀಮತಿ ನಿರ್ಮಲಾ ಪಾರಾ ಶಿಕ್ಷಕೇತರ ಸಿಬ್ಬಂದಿ ವರ್ಗದವರಾದ ವಿನೋದಕುಮಾರ ಹಳಕಟ್ಟಿ, ಅಶೋಕ ಮೂಲಗೆ, ಅಪ್ಪಾಸಾಬ್ ಬಿರಾದಾರ, ಶ್ರೀಮತಿ ವಿದ್ಯಾ ರೇಷ್ಮಿ, ಶ್ರೀಮತಿ ಅನುಸೂಯಾ ಬಡಿಗೇರ, ಶ್ರೀಮತಿ ಶಶೀಕಲಾ ಪಾರಾ, ಶ್ರೀಮತಿ ಪ್ರಭಾವತಿ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…