ಕಲಬುರಗಿ: ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಖಾಸಗಿ ಆಸ್ಪತ್ರೆಗಳು ಸರಕಾರಕ್ಕೆ 700 ಕೋಟಿ ಬಿಲ್ ಸಲ್ಲಿಸಿವೆ. ಅದನ್ನು ನೀಡಲು ಸರಕಾರ ಕೂಡ ಸಮ್ಮತಿ ಸೂಚಿಸಿದೆ. ಆದರೆ ಲಾಕ್ ಡೌನ್ ಸಡಿಲಿಕೆ ಆದ ನಂತರ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಪೂರ್ಣ ಪ್ರಮಾಣದ ಚಿಕಿತ್ಸೆ ನೀಡುತ್ತಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಬಣ) ದ ಜಿಲ್ಲಾಧ್ಯಕ್ಷರಾದ ಆನಂದ ತೆಗನೂರ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಇಷ್ಟೊಂದು ದೊಡ್ಡ ಪ್ರಮಾಣದ ಬಿಲ್ ಸಲ್ಲಿಸಲು ಹೇಗೆ ಸಾಧ್ಯ ಅನ್ನುವ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿದೆ.ಅದರಲ್ಲೂ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ರಾಜ್ಯದಲ್ಲಿ ಕೋವಿಡ್ ಪೀಡಿತರಾಗುತ್ತಿರುವ ಸಂಖ್ಯೆ ಕಡಿಮೆಯಾಗುತ್ತಿದೆ. ಜೊತೆಗೆ ಸರ್ಕಾರದ ನಿಯಮಗಳು ಬಹುತೇಕ ಸಡಿಲ ಆಗಿದ್ದು , ರೋಗಿಗಳಿಗೆ ಹೋಂ ಐಶುಲೇಷನ್ ಗೆ ಅವಕಾಶ ನೀಡಲಾಗಿದೆ.
ಕಾಂಗ್ರೆಸ್ ಭದ್ರಕೋಟೆಯ ಇಬ್ಬರು ನಾಯಕರು ಬೇರೆ ಪಕ್ಷಕ್ಕೆ
ಆದರೆ ಖಾಸಗಿ ಆಸ್ಪತ್ರೆಗಳು ಮಾತ್ರ ತಮ್ಮ ಬಿಲ್ಲಿನ ಮೊತ್ತವನ್ನು ಬೇಕಾ ಬಿಟ್ಟಿ ಹಾಕಿ ಸಲ್ಲಿಸುತ್ತಿರುವುದು ಖಂಡನೀಯ ಎಂದರು. ಅದನ್ನು ಭರಿಸಲು ಸರಕಾರ ಮುಂದಾಗುತ್ತಿರುವುದು ಮೂರ್ಖತನದ ನಿರ್ಧಾರವಾಗಿದೆ ಎಂದು ಕಿಡಿ ಕಾರಿದರು.
ಇದರ ಬಗ್ಗೆ ಸೂಕ್ತ ತನಿಖೆ ಕೈಗೊಂಡಳ್ಳಬೇಕಾದ ತುರ್ತು ಅಗತ್ಯ ಇದೆ. ಕೊರೊನಾ ಹೆಸರಲ್ಲಿ ಸಾರ್ವಜನಿಕರ ತೆರಿಗೆ ದುಡ್ಡು ಅನಗತ್ಯ ಮತ್ತು ಅಕ್ರಮವಾಗಿ ಖರ್ಚು ಮಾಡಲಾಗುತ್ತಿದೆ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಸರ್ಕಾರದ ನಡೆಯ ಬಗ್ಗೆ ಅಸಮಾಧಾನಗೊಂಡಿರುವ ಸಾರ್ವಜನಿಕರಿಗೆ ಸರಕಾರ ಕೂಡಲೇ ಸರಿಯಾದ ಉತ್ತರ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.