ಶಹಾಪುರ : ಶಾಲೆಯ ಸಮಗ್ರ ಅಭಿವೃದ್ಧಿಗಾಗಿ ಎಸ್ ಡಿ ಎಂ ಸಿ ಸದಸ್ಯರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಆದ್ದರಿಂದ ಎಲ್ಲ ಸದಸ್ಯರು ಕಡ್ಡಾಯವಾಗಿ ತರಬೇತಿಯಲ್ಲಿ ಪಾಲ್ಗೊಂಡು ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಕುಂತಲಾ ಸ್ವಾಮಿ ಹಿರೇಮಠ ಹೇಳಿದರು.
ತಾಲ್ಲೂಕಿನ ಸಿರವಾಳ ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ದಿನದ ಎಸ್ ಡಿ ಎಂ ಸಿ ಸದಸ್ಯರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕವಾಗಿ ಪ್ರಗತಿಯಲ್ಲಿ ಸಾಗಬೇಕು ಎಂಬ ಹಿತದೃಷ್ಟಿಯಿಂದ ಎಸ್ಡಿಎಂಸಿ ಯನ್ನು ಸರ್ಕಾರ ರಚಿಸಲಾಗಿದೆ ಎಂದು ತಿಳಿಸಿದರು.
ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಲ್ಲಣ್ಣ ಹೊಸಮನಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಅದು ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಮಕ್ಕಳು ಶಾಲೆ ಕಲಿಯುತ್ತಿದ್ದು ಇಂತಹ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಪ್ರತಿಯೊಬ್ಬ ಸದಸ್ಯರು ಜೋಡಿಸುವುದರ ಜೊತೆಗೆ ಸಲಹೆ ಸಹಕಾರ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಡಿವಾಳಪ್ಪ ಮುದನೂರು’ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಮಸ್ವಾಮಿ ಕುರಕುಂದಿ,ಎಸ್ ಡಿ ಎಂ ಸಿ ಅಧ್ಯಕ್ಷ ದೇವಿಂದ್ರಪ್ಪ ಅಯ್ಯಾಳ,ಶಬ್ಬೀರ್, ರಮೇಶ್,ಮುಖ್ಯಗುರುಗಳಾದ ಭೀಮಣ್ಣ ಬೇವಿನಳ್ಳಿ,ಸಿ ಆರ್ ಪಿ ಸೋಮಯ್ಯ,ವೆಂಕಟೇಶ ದೊರೆ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.