ಕಲಬುರಗಿ: ಸಾಲದ ಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಸಾವಿಗೀಡಾದ ಘಟನೆ ಇಲ್ಲಿನ ರಾಮ ಮಂದಿರ ಹತ್ತಿರ ಇಂದು ಬೆಳಿಗ್ಗೆ ಸಂಭವಿಸಿದೆ.
ಶoಕರ ಬಿರಾದಾರ ಸಾವಿಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ವಿಷ ಸೇವೆಸಿ ರಸ್ತೆ ಮೇಲೆ ಬಿದ್ದಾಗ ಸಾರ್ವಜನಿಕರು ಆಸ್ಪತ್ರೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಸಾಲದ ಕಾಟ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದು ವಿಷ ಸೇವಿಸಿದ್ದಾರೆಂದು ಮೃತ ವ್ಯಕ್ತಿಯ ಪತ್ನಿ ಶೈಲಜಾ ನಗರದ ವಿಶ್ವ ವಿದ್ಯಾಲಯ ಪೋಲಿಸ್ ಠಾಣೆಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.
ಗುಲ್ಬರ್ಗಾ ವಿವಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.