ಶಹಾಬಾದ: ಕೋವಿಡ್-೧೯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಉದ್ಯೋಗ ಖಾತ್ರಿ ಯೋಜನೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವುದು ಕೂಲಿ ಕಾರ್ಮಿಕರಿಗೆ ಎಲ್ಲಿಲ್ಲದ ಅನುಕೂಲವಾಗಿದೆ ಎಂದು ಮರತೂರ ಗ್ರಾಪಂ ಅಧ್ಯಕ್ಷ ಗುರುನಾಥ ಕಂಬಾ ಹೇಳಿದರು.
ಅವರು ಮರತೂರ ಗ್ರಾಪಂ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹಳ್ಳ ಹೂಳೆತ್ತುವ ಹಾಗೂ ಬದು ನಿರ್ಮಾಣ ಕೆಲಸಕ್ಕೆ ಚಾಲನೆ ನೀಡಿ ಮಾತನಾಡಿದರು.
ಆಸ್ಪತ್ರೆ ವೈದ್ಯನ ವಿರುಧ್ಧ ಜಯ ಕರ್ನಾಟಕ ಪ್ರತಿಭಟನೆ
ನರೇಗಾ ಯೋಜನೆಯಡಿ ಹಳ್ಳ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಕೋವಿಡ್-೧೯ ಹಿನ್ನೆಲೆಯಲ್ಲಿ ವಿಧಿಸಿದ್ದ ನಿಬಂಧವನ್ನು ಉದ್ಯೋಗ ಖಾತ್ರಿ ಯೋಜನೆಗೆ ವಿನಾಯಿತಿ ನೀಡಿದ್ದರಿಂದ ಕೆಲಸ ಪ್ರಾರಂಭಿಸಲಾಗಿದೆ. ನರೇಗಾ ಕಾಮಗಾರಿ ಕೈಗೊಳ್ಳಲು ರೈತರು, ಕೂಲಿ ಕಾರ್ಮಿಕರು ಮುಂದೆ ಬರುತ್ತಿದ್ದು ಬಹುತೇಕ ಪಂಚಾಯತ್‌ಗಳಲ್ಲಿ ಕೆಲಸ ಪುನರಾರಂಭವಾಗಿದೆ. ರೈತರು ತಮ್ಮ ಜಮೀನಿನಲ್ಲಿ ಕೃಷಿ ಕಾಮಗಾರಿ ಮಾಡಿಕೊಳ್ಳಲು ಅವಕಾಶವಿದೆ. ಜಮೀನಿನಲ್ಲಿ ಬದು ನಿರ್ಮಾಣ, ಕೃಷಿ ಹೊಂಡ, ಒಳಗಟ್ಟಿ, ಎರೆಹುಳು ತೊಟ್ಟಿ ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದೆ ಎಂದರು.
ಮಲ್ಲಿಕಾರ್ಜುನ ದೊಡ್ಡಿ ಮಾತನಾಡಿ, ಸದ್ಯ ಕೋವಿಡ್-೧೯ ಎರಡನೇ ಅಲೆ ಪ್ರಾರಂಭವಾಗುವ ಲಕ್ಷಣಗಳು ಕಂಡು ಬರುತ್ತಿದ್ದು, ಕೂಲಿ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಬೇಕು. ಕಾಮಗಾರಿ ಸಂದರ್ಭದಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸಿಕೊಂಡು ಬರುವುದು ಕಡ್ಡಾಯವಾಗಿ ಧರಿಸಬೇಕು. ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಯಶಸ್ವಿ ಅನು?ನಕ್ಕೆ ರೈತರು, ಕೂಲಿ ಕಾರ್ಮಿಕರ ಸಹಕಾರ ನೀಡಬೇಕೆಂದು ಹೇಳಿದರು.
ಪ್ರಧಾನಿ ಮೋದಿ, ಷಾ ಪ್ರತಿಕೃತಿ ದಹಿಸಿ ಪ್ರತಿಭಟನೆ
ಗ್ರಾಪಂ ಸದಸ್ಯರಾದ ಸಿದ್ಧರಾಮ ಮಾಲಿ ಪಾಟೀಲ,ಶ್ಯಾಮರಾಯ ನಾಟೀಕಾರ,ಶೌಕತ್ ಅಲಿ ಮುಲ್ಲಾ,ಗೌರಿಶಂಕರ ಪಾಟೀಲ, ಹುಣಚಪ್ಪ ಮಸಗಲ್, ಗಂಗಾಧರ ಮಸಗಲ್ ಇತರರು ಇದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…