ಬಿಸಿ ಬಿಸಿ ಸುದ್ದಿ

ಗುಲಬರ್ಗಾ ವಿಶ್ವವಿದ್ಯಾಲಯ ಅಕ್ಯಾಡೆಮಿಕ್ ಕೌನ್ಸಿಲ್‌ಗೆ ಹಿರೇಮಠ್ ನಾಮನಿರ್ದೇಶನ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ವಿದ್ಯಾ ವಿಧೇಯಕ ಪರಿಷತ್ (ಅಕ್ಯಾಡೆಮಿಕ್ ಕೌನ್ಸಿಲ್)ಗೆ ನಗರದ ಪ್ರತಿಷ್ಠಿತ ಜ್ಞಾನಜ್ಯೋತಿ ಕರಿಯರ್ ಅಕ್ಯಾಡೆಮಿಯ ಸಂಸ್ಥಾಪಕರು ಹಾಗೂ ನಿರ್ದೇಶಕ ಎನ್.ಎಸ್. ಹಿರೇಮಠ್ ಅವರನ್ನು ನಾಮನಿರ್ದೇಶನ ಮಾಡಿ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯಗಳು-೨) ಅಧೀನ ಕಾರ್ಯದರ್ಶಿ ಮಹೇಶ್ ಆರ್. ಅವರು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಆದೇಶ ಹೊರಡಿಸಿದ್ದಾರೆ.

ಮೂರು ವರ್ಷಗಳನ್ನು ಮೀರದ ಅವಧಿಗಾಗಿ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಕೂಡಲೇ ಜಾರಿಗೆ ಬರುವಂತೆ ಸರ್ಕಾರವು ನಾಮನಿರ್ದೇಶನ ಮಾಡಿದೆ.

ಗುಲಬರ್ಗಾವ ವಿಶ್ವವಿದ್ಯಾಲಯದ ವಿದ್ಯಾ ವಿಧೇಯಕ ಪರಿಷತ್‌ಗೆ ನಾಮನಿರ್ದೇಶನಗೊಂಡ ಎನ್.ಎಸ್. ಹಿರೇಮಠ್ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಅವಿಸ್ಮರಣೀಯ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ನಗರದಲ್ಲಿಯೇ ಜ್ಞಾನಜ್ಯೋತಿ ಕರಿಯರ್ ಅಕ್ಯಾಡೆಮಿಯನ್ನು ಕಳೆದ ೨೦೧೦ರಿಂದ ಆರಂಭಿಸುವ ಮೂಲಕ ಹಿಂದುಳಿದ ಕಲ್ಯಾಣ ಕರ್ನಾಟಕದ ಪದವೀಧರರು ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಲು ಗುಣಮಟ್ಟದ ತರಬೇತಿಯನ್ನು ನೀಡುತ್ತಿದ್ದಾರೆ.

ಆಸ್ಪತ್ರೆ ವೈದ್ಯನ ವಿರುಧ್ಧ ಜಯ ಕರ್ನಾಟಕ ಪ್ರತಿಭಟನೆ

ಈಗಾಗಲೇ ಅಕ್ಯಾಡೆಮಿಯಿಂದ ಸಾವಿರಾರು ವಿದ್ಯಾರ್ಥಿಗಳು ತರಬೇತಿಯನ್ನು ಪಡೆದು ಸರ್ಕಾರಿ ಇಲಾಖೆಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಅರಿವು ಮೂಡಿಸುವ ದಿಸೆಯಲ್ಲಿ ಹಾಗೂ ಸ್ಪರ್ಧಾತ್ಮಕತೆ ಮನೋಭಾವನೆ ಮೂಡಿಸಲು ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ಯ ವಿವೇಕ ಜ್ಯೋತಿ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು ಮೂರು ಪ್ರಶಸ್ತಿಗಳನ್ನು ಹಿರೇಮಠ್ ಅವರು ಕೊಡಮಾಡಿದ್ದಾರೆ.

ಎನ್.ಎಸ್. ಹಿರೇಮಠ್ ಅವರು ಬೋಧನೆಯಲ್ಲಿ ವಿಶಿಷ್ಟ ಸಾಧನೆಯನ್ನು ಮಾಡಿದ್ದಾರೆ. ಈ ಹಿಂದೆ ಸೆಪ್ಟೆಂಬರ್ ೫ರಂದು ಶಿಕ್ಷಕರ ದಿನಾಚರಣೆ ನಿಮಿತ್ಯ ೨೪ ಗಂಟೆಗಳ ಕಾಲ ನಿರಂತರವಾಗಿ ಹಗಲು ರಾತ್ರಿ ಉಪನ್ಯಾಸ ನೀಡಿದ ಶ್ರೇಯಸ್ಸು ಹಿರೇಮಠ್ ಅವರಿಗಿದೆ. ನಾಗನಹಳ್ಳಿ ಪೋಲಿಸ್ ತರಬೇತಿ ಕೇಂದ್ರದಲ್ಲಿ ಪಿಎಸ್‌ಐ ಪ್ರಶಿಕ್ಷಣಾರ್ಥಿಗಳಿಗೆ ತರಬೇತಿಯನ್ನು ನೀಡಿದ್ದಾರೆ.

ಹಜರತ್ ಸಯ್ಯದ್ ಬುರ‍್ಹಾನುದ್ದಿನ್ ಶಹಾ ಖಾದ್ರಿ ದರ್ಗಾ ಉರುಸ್: ಧರ್ಮ ಸಮ್ಮೇಳನ

ಕಲ್ಯಾಣ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ದ್ವಿತೀಯ ವರ್ಷದಲ್ಲಿ ವಿದ್ಯಾರ್ಥಿಗಳ ವೈಫಲ್ಯದ ಕಾರಣಗಳನ್ನು ಪತ್ತೆ ಹಚ್ಚಿರುವ ಹಿರೇಮಠ್ ಅವರು, ಆ ಹಿನ್ನೆಲೆಯಲ್ಲಿ ಅಗತ್ಯ ಜ್ಞಾನದ ಬುನಾದಿಯನ್ನು ತರಬೇತಿಯಲ್ಲಿ ಕೊಡುವ ಮೂಲಕ ಹೆಚ್ಚಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಹೊಂದುವಂತೆ ಪ್ರಯತ್ನ ಮಾಡುತ್ತಿದ್ದು, ಅದರಲ್ಲಿ ಸಫಲರಾಗುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಹಿರೇಮಠ್ ಅವರ ನಾಮನಿರ್ದೇಶನವು ಕಲ್ಯಾಣ ಕರ್ನಾಟಕದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಕುರಿತು ಎನ್.ಎಸ್. ಹಿರೇಮಠ್ ಅವರು ಪ್ರತಿಕ್ರಿಯಿಸಿ, ಇಷ್ಟು ವರ್ಷ ನನ್ನ ಸೇವೆಯನ್ನು ಪರಿಗಣಿಸಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ್ ಪಾಟೀಲ್ ರೇವೂರ್ ಹಾಗೂ ಮಾಜಿ ಶಾಸಕಿ ಶ್ರೀಮತಿ ಅರುಣಾದೇವಿ ಚಂ. ಪಾಟೀಲ್ ರೇವೂರ್ ಮತ್ತು ಅವರ ಇಡೀ ಕುಟುಂಬ ವರ್ಗವು ಈ ಭಾಗಕ್ಕೆ ಶೈಕ್ಷಣಿಕವಾಗಿ ಇನ್ನೂ ಹೆಚ್ಚಿನ ಸೇವೆಯನ್ನು ಸಲ್ಲಿಸುವಂತಾಗಲು ಗುಲಬರ್ಗಾ ವಿಶ್ವವಿದ್ಯಾಲಯದ ವಿದ್ಯಾ ವಿಧೇಯಕ ಪರಿಷತ್‌ಗೆ ನಾಮನಿರ್ದೇಶನ ಮಾಡಿಸುವಲ್ಲಿ ಕಾರಣಕರ್ತೃರಾಗಿದ್ದು, ಅವರೆಲ್ಲರಿಗೂ ಅಭಿನಂದಿಸುವುದಾಗಿ ತಿಳಿಸಿದರು.

ಕಲಬುರಗಿ: ವಿಷ ಸೇವಿಸಿ ರೈತ ಆತ್ಮಹತ್ಯೆ

ನಾಮನಿರ್ದೇಶನಕ್ಕೆ ಸಹಕರಿಸಿದ ಎಲ್ಲ ಜನಪ್ರತಿನಿಧಿಗಳಿಗೂ ಹಾಗೂ ಕುಲಪತಿ ಪ್ರೊ. ದಯಾನಂದ್ ಅಗಸರ್ ಅವರಿಗೂ ಅಭಿನಂದಿಸುವುದಾಗಿ ಹೇಳಿದ ಅವರು, ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ರೀತಿಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ತಿಳಿಸಿದರು.

sajidpress

Recent Posts

ಸಚಿವ ಪ್ರೀಯಾಂಕ್ ಖರ್ಗೆ ಹುಟ್ಟುಹಬ್ಬ ನಿಮಿತ್ತ ಬಾಲಕಿಯರ ಕ್ರಿಕೇಟ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…

15 mins ago

ಯತ್ನಾಳ ಹೋರಾಟಕ್ಕೆ ಬೆಂಬಲವಿಲ್ಲ : ಆನಂದ ಕಣಸೂರ

ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…

18 mins ago

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

29 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago