ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಕರೆ

0
40

ಕಲಬುರಗಿ: ಬಾಲಕಾರ್ಮಿಕ ಪದ್ಧತಿ ಮುಕ್ತ ಕಲಬುರಗಿ ಜಿಲ್ಲೆಯನ್ನಾಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಕಾರ್ಮಿಕ ಇಲಾಖೆಯ ಆಯುಕ್ತ ಅಕ್ರಂ ಪಾಶಾ ಅವರು ಕರೆ ನೀಡಿದರು.

ಗುರುವಾರ ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘಗಳ ಸಂಯುಕ್ತಾಶ್ರಯದಲ್ಲಿ ನಡೆದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನೇಮಕಾತಿ ವಿರುದ್ಧದ ಜಾಗೃತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

Contact Your\'s Advertisement; 9902492681

ಕೆ.ಕೆ.ಆರ್.ಡಿ.ಬಿ: ನಾಲ್ಕನೇ ಕಂತಿನ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಕೆ

ಕೋವಿಡ್ ಸಮಯದಲ್ಲಿ ಅನೇಕ ಮಕ್ಕಳು ಶಾಲೆ ಬಿಟ್ಟು ಹೋಟೆಲ್, ಅಂಗಡಿ ಸೇರಿದಂತೆ ಮುಂತಾದ ಕೆಲಸಗಳನ್ನು ಮಾಡುತ್ತಿದ್ದಾರೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಈ ಜಾಗೃತಿ ರಥ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಜನರಲ್ಲಿ ಅರಿವು ಮೂಡಿಸುವ ಮೂಲಕ ಬಾಲಾಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಧಿಕಾರಿಗಳು ಹೆಚ್ಚಿನ ರೀತಿಯಲ್ಲಿ ಶ್ರಮ ವಹಿಸಬೇಕು ಎಂದು ಅವರು ಕರೆ ನೀಡಿದರು.

ಜಾಗೃತಿ ರಥವು ಕಲಬುರಗಿ ಜಿಲ್ಲೆಯಾದ್ಯಂತ 30 ದಿನಗಳ ಕಾಲ ಸಂಚರಿಸಿ ಸಾರ್ವಜನಿಕರಲ್ಲಿ ಬಾಲಕಾರ್ಮಿಕ ಪದ್ಧತಿ ಹಾಗೂ ಅನುμÁ್ಠನದ ಬಗ್ಗೆ ತಿಳುವಳಿಕೆ ಮೂಡಿಸಲಿದೆ ಎಂದರು.

ವಚನ ಹಸ್ತಪ್ರತಿಗಳು ಆರಾಧನೆ ವಸ್ತುಗಳಾಗಿದ್ದು ವಿಷಾದನೀಯ: ಹಿರಿಯ ಸಾಹಿತಿ ಮ.ಗು.ಬಿರಾದಾರ

ಇದೇ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಕಾರ್ಮಿಕರ ಅವಲಂಬಿತರಾದ ಸೀಮಾ ಗಂಡ ರಮೇಶ ಹಾಗೂ ಸುನೀತಾ ಗಂಡ ಪ್ರಕಾಶ ಅವರಿಗೆ ಅಪಘಾತ ಮರಣ ಪರಿಹಾರ ಧನ ಯೋಜನೆಯಡಿ ತಲಾ 5 ಲಕ್ಷ ರೂ.ಗಳ ಚೆಕ್‍ಗಳನ್ನು ನೀಡಲಾಯಿತು. ಕಾರ್ಮಿಕರ ಮಕ್ಕಳಿಗೆ ಮದುವೆ ಸಹಾಯಧನ ಯೋಜನೆಯಡಿ ತೇಜಮ್ಮ ಹಾಗೂ ಸತೀಶ್ ವಡ್ಡರ್ ಅವರಿಗೆ 50 ಸಾವಿರ ರೂ.ಗಳ ಚೆಕ್ ಹಾಗೂ ಶಿಕ್ಷಣ ಸಹಾಯಧನ ಕಾರ್ಯಕ್ರಮದಡಿ ವಿವಿಧ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶೋಭಾ, ಶರಣಮ್ಮ, ದೀಪಾ ಗುತ್ತೇದಾರ ಅವರಿಗೆ ಸಹಾಯಧನದ ಚೆಕ್ ವಿತರಿಸಲಾಯಿತು.

ಗುಲಬರ್ಗಾ ವಿಶ್ವವಿದ್ಯಾಲಯ ಅಕ್ಯಾಡೆಮಿಕ್ ಕೌನ್ಸಿಲ್‌ಗೆ ಹಿರೇಮಠ್ ನಾಮನಿರ್ದೇಶನ

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಆರ್. ಶೆಟ್ಟರ್, ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಿ.ಜಿ ನಾಗೇಶ, ಕಲಬುರಗಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ಆರತಿ ಪೂಜಾರಿ, ಕಲಬುರಗಿ ಉಪವಿಭಾಗದ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ, ಕಾರ್ಮಿಕ ಅಧಿಕಾರಿ(ಪೆÇ್ರೀ) ಡಾ. ದತ್ತಾತ್ರೇಯ ಗಾದಾ, 3ನೇ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ರವೀಂದ್ರಕುಮಾರ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಹಾಗೂ ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆಯ ಜಿಲ್ಲೆಯ ಅಧಿಕಾರಿಗಳು-ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here