ಬಿಸಿ ಬಿಸಿ ಸುದ್ದಿ

ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಪ್ರತಿಭಟನೆ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಕಲಬುರಗಿ: ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಾಲಬಾಧೆಯಿಂದ ನಿನ್ನೆ ದಿನ ಆತ್ಮಹತ್ಯೆ ಮಾಡಿಕೊಂಡ ವಿಶ್ವಗಂಗಾ ಶಿಕ್ಷಣ ಸಂಸ್ಥೆಯ ಶಂಕರ ಬಿರಾದಾರ ಕುಟುಂಬಕ್ಕೆ 50,00, 000 ರೂ ನೀಡಬೇಕು ಎಂದು ಅವರ ಭಾವಚಿತ್ರ ಮತ್ತು ಸಂಸ್ಥೆಯ ಬ್ಯಾನರ್ ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಖಾಸಗಿ ಶಾಲಾ ವಾಹನದ ಕಂತು ಮತ್ತು ಇತರೆ ಕಂತುಗಳನ್ನು ಬ್ಯಾಂಕಿಗೆ ಕಟ್ಟಲಾಗುತ್ತಿಲ್ಲ. ಕಾರಣ ಮುಂದಿನ ಶೈಕ್ಷಣಿಕ ವರ್ಷ ಆರಂಭದವರೆಗೆ ಕಂತು ಕಟ್ಟಲು ಕಾಲಾವಕಾಶ ನೀಡುವಂತೆ ಸರ್ಕಾರ ಮಧ್ಯಸ್ತಿಕೆ ವಹಿಸಬೇಕು ಎಂದು ಆಗ್ರಹಿಸಿದರು.

ಶಿಕ್ಷಣ ಇಲಾಖೆ ಶೀಘ್ರವಾಗಿ ಶಾಲೆಗಳ ನವೀಕರಣಕ್ಕೆ ವಿಧಿಸಿದ ನಿಯಮಾವಳಿ ಕೈ ಬಿಡಬೇಕು, ಪ್ರಸಕ್ತ ಸಾಲಿನ ಆರ್.ಟಿ.ಇ. ಹಣ ಕೂಡಲೇ ಬಿಡುಗಡೆ ಮಾಡಬೇಕು, 1ನೇ ತರಗತಿಯಿಂದ 10ನೇ ತರಗತಿವರೆಗೆ ಶಾಲೆಗಳನ್ನು ತೆರೆಯಲು ಅನುಮತಿ ನೀಡಬೇಕು, ಸರ್ಕಾರ ಕೂಡಲೇ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿದರು.

ಅಭಿವೃದ್ಧಿಗಾಗಿ ಒಬ್ಬರಿಗೆ ಒಂದೇ ಅಧಿಕಾರ ಸಾಕು

ಒಕ್ಕೂಟದ ವಿಭಾಗೀಯ ಅಧ್ಯಕ್ಷ ಸುನಿಲ್ ಹುಡಗಿ ಜಿಲ್ಲಾ ಸಂಚಾಲಕ ಅರುಣಕುಮಾರ ಪೋಜಾಲ, ಸಾಹೇಬಗೌಡ ಪುರದಾಳ ಮತ್ತಿತರರು ಭಾಗವಹಿಸಿದ್ದರು.

ಆತ್ಮಹತ್ಯೆಗೆ ಯತ್ನ: ಈ ಮಧ್ಯೆ ಜೇವರ್ಗಿ ತಾಲ್ಲೂಕಿನ ಸುಂಬಡದ ಪ್ರಕಾಶ ಎಂಬುವರು ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದರು. ಇದರಿಂದಾಗಿ ಕೆಲಹೊತ್ತು ಶಿಕ್ಷಕರ ಮಧ್ಯೆ ಆತಂಕವುಂಟಾಯಿತು. ಅಲ್ಲಿಯೇ ಇದ್ದ ಪೊಲೀಸ್ ವಾಹನಸಲ್ಲಿ ಅಸ್ವಸ್ತಗೊಂಡ ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ಪ್ರಕಾಶ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.

ಅಭಿವೃದ್ಧಿಗಾಗಿ ಒಬ್ಬರಿಗೆ ಒಂದೇ ಅಧಿಕಾರ ಸಾಕು

ನೈತಿಕ ಧೈರ್ಯ ಅಗತ್ಯ: ಖಾಸಗಿ ಶಿಕ್ಷಣ ಸಂಸ್ಥೆಯವರು ನಡೆಸುವ ಹೋರಾಟ ನ್ಯಾಯಯುತವಾಗಿದೆ. ಆದರೆ ಕೋವಿಡ್ ಕಾರಣದಿಂದ ಸರ್ಕಾರದಿಂದ ಅವರಿಗೆ ನೆರವು ನೀಡಲು ಆಗುತ್ತಿಲ್ಲ. ಇನ್ಮೆರಡು ತಿಂಗಳಲ್ಲಿ ಸಮಸ್ಯೆಗೆ ಪರಿಹಾರ ದೊರಕಲಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಯವರು ಹತಾಷೆರಾಗದೆ ನೈತಿಕಧೈರ್ಯ ತಂದುಕೊಳ್ಳಬೇಕು ಎಂದರು. ಬಿಸಿಲಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಅವರಿಗೂ ಸಹ ತಲೆಸುತ್ತಿದಂತಾಗಿ ಕೊಂಚ ಹೊತ್ತು ಅವರು ಸಹ ವಿಶ್ರಾಂತಿ ಪಡೆದ ಘಟನೆ ನಡೆಯಿತು.

ಕೆ.ಕೆ.ಆರ್.ಡಿ.ಬಿ: ನಾಲ್ಕನೇ ಕಂತಿನ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಕೆ

ನಾಳೆಯಿಂದ ಜನಪ್ರತಿನಿಧಿಗಳ ಮನೆ ಎದುರು ಬೊಬ್ಬೆ ಹೊಡೆಯುವ ಕಾರ್ಯಕ್ರಮ: ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕಡಗಳನ್ನು ಈಡೇಎಇಸುವಂತೆ ಆಗ್ರಹಿಸಿ ಶನಿವಾರದಿಂದ ಜನಪ್ರತಿನಿಧಿಗಳ ಮನೆ ಎದುರು ಬೊಬ್ಬೆ ಹಾಕುವ ಕಾರ್ಯಕ್ರಮ ರೂಪಿಸಲಾಗುವುದು ಎಂದು ಒಕ್ಕೂಟದ ವಿಭಾಗೀಯ ಅಧ್ಯಕ್ಷ. ಸುನಿಲ ಹುಡಗಿ ಇ-ಮೀಡಿಯಾ ಜೊತೆ ಮಾತನಾಡಿ ತಿಳಿಸಿದರು.

sajidpress

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

19 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago