ಕೊಪ್ಪಳ : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಪ್ರತಿನಿಧಿ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ರಾಜ್ಯಾಧ್ಯಕ್ಷರಾದ ಅಥಾವುಲ್ಲಾ ಪುಂಜಾಲಕಟ್ಟೆ, ರಾಜ್ಯ ಕಾರ್ಯದರ್ಶಿ ಅಲ್ತಾಪ್ ಹೊಸಪೇಟೆ , ರಾಜ್ಯ ಮಾಜಿ ಕಾರ್ಯದರ್ಶಿ ಅಷ್ವಾನ್ ಸಾಧಿಕ್ ಅವರಿಗೆ ಅಭಿನಂದನಾ ಸಭೆಯು ಇಂದು ನಡೆಯಿತು.
ರಿಹಾಬಿಲೇಷನ್ ಸೇಂಟರ್ ಪ್ರಾರಂಭಕ್ಕೆ ಆಗ್ರಹ
ಕಾರ್ಯಕರ್ತರನ್ನುದ್ದೇಶಿಸಿ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಮಾತನಾಡಿ ಪ್ರಸಕ್ತ ಸನ್ನಿವೇಶದಲ್ಲಿ ದೇಶಕ್ಕೆ ವಿದ್ಯಾರ್ಥಿ ಹೋರಾಟದ ಅಗತ್ಯತೆಯಿದ್ದು ವಿದ್ಯಾರ್ಥಿಗಳನ್ನು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಂಘಟಿಸಬೇಕಾದ ಜವಾಬ್ದಾರಿಯಿದೆ ಅಲ್ಲದೆ ಫ್ಯಾಶಿಸ್ಟ್ ಶಕ್ತಿಯನ್ನು ಪ್ರಜಾಪ್ರಭುತ್ವವಾಗಿ ಎದುರಿಸಲು ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕು ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಜನಪ್ರತಿನಿಧಿಗಳ ಅಸಡ್ಡೆ: ದಸ್ತಿ
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಸಮಿತಿಯ ಸದಸ್ಯರು ಮತ್ತು ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.