ಕಲಬುರಗಿ: ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಜನರಿಗೆ ಉಪಯೋಗವಾಗಬೇಕಿದ್ದ ೧೦೮ ಅಂಬುಲೆನ್ಸ್‌ಗಳು ಕೆಟ್ಟು ನಿಂತಿದ್ದು,ಇವುಗಳನ್ನು ದುರಸ್ಥಿಗೊಳಿಸಿ ಕೂಡಲೇ ಸಾರ್ವಜನಿಕರ ಅನುಕೂಲಕ್ಕೆ ಬಳಸಬೇಕು ಎಂದು ಆಗ್ರಹಿಸಿ ಜೈ ಕನ್ನಡಿಗರ ರಕ್ಷಣಾ ವೇದಿಕೆ ಪದಾಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಿದರು.
ಹಲವು ವರ್ಷಗಳಿಂದ ಈ ವಾಹನಗಳು ನಿಂತಲ್ಲೆ ನಿಲ್ಲಿಸಿದ್ದರಿಂದ ಉಪಯೋಗಕ್ಕೆ ಬಾರದಂತೆ ಆಗಿವೆ. ಇದರಿಂದ ಸರಕಾರಕ್ಕೆ ನಷ್ಟವಾಗುತ್ತಿದೆ. ಅಲ್ಲದೇ ಸಾರ್ವಜನಿಕರಿಗೂ ಈ ವಾಹನಗಳ ಸೇವೆ ಸಮರ್ಪಕವಾಗಿ ಸಿಗುತ್ತಿಲ್ಲ. ಈ ಕುರಿತು ಶೀಘ್ರವೇ ಟೆಂಡರ್ ಕರೆದು ವಾಹನಗಳನ್ನು ರಿಪೇರಿಗೊಳಿಸಿ ಸಾರ್ವಜನಿಕರಿಗೆ ಉಪಯೋಗವಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಬೆಲೆ ಏರಿಕೆ ಖಂಡಿಸಿ ಮಾ.೪ ರಂದು ಜನಾಂದೋಲನ
ಈ ಕುರಿತು ವಿಳಂಬ ಧೋರಣೆ ತಾಳಿದರೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ವೇದಿಕೆ ರಾಜ್ಯಾಧ್ಯಕ್ಷ ಸಚೀನ್ ಫರಹತಾಬಾದ್, ಸುರೇಶ್ ಹನಗುಡಿ, ಅಂಬು ಮಸ್ಕಿ, ಅಕ್ಷಯ್, ರಾಹುಲ್ ಫರಹತಾಬಾದ್,ಅರ್ಜುನ್ ಸಿಂಗೆ, ಸುನೀಲ್ ಜಾಧವ್, ಪ್ರವೀಣ ಸಜ್ಜನ್, ಲಕ್ಷ್ಮಿಕಾಂತ, ಉದಯಕುಮಾರ, ರಾಹುಲ್ ಆಶ್ರಯ ಕಾಲೊನಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…