ಬಿಸಿ ಬಿಸಿ ಸುದ್ದಿ

ಬಡ್ತಿಯಲ್ಲಿ 371(ಜೆ) ದುರ್ಬಳಕೆ ವಿರೋಧಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ಕಲಬುರಗಿ: ಬಡ್ತಿ ವಂಚಿತ ಹೈದ್ರಾಬಾದ್ ಕರ್ನಾಟಕ ಭಾಗದ ಪೋಲಿಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ೩೭೧(ಜೆ) ಕಲಂ ದುರುಪಯೋಗ ಮಾಡಿಕೊಂಡು ಹೈದ್ರಾಬಾದ್ ಕರ್ನಾಟಕ ಹೊರತುಪಡಿಸಿದ ಪೋಲಿಸ್ ಅಧಿಕಾರಿಗಳನ್ನು ತೆಗೆದುಹಾಕಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸಿದರು.

ಸಮಿತಿಯ ಅಧ್ಯಕ್ಷ ಎಂ.ಎಸ್. ಪಾಟೀಲ್ ನರಿಬೋಳ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂದೀಪ್ ಭರಣಿ, ಲಕ್ಷ್ಮೀಕಾಂತ್ ಸ್ವಾದಿ, ಶರಣಗೌಡ ಪಾಟೀಲ್ ಹರಸೂರ್, ಎಸ್. ರಾಘವೇಂದ್ರ, ಬಿ.ಎಸ್. ಮಾಲಿಪಾಟೀಲ್, ರಾಜಶೇಖರ್ ಬಂಡೆ, ಶಿವಕುಮಾರ್ ನಾಸಿ, ಮಂಜುನಾಥ್ ಅಂಕಲಗಿ, ಸೂರ್ಯಕಾಂತ್, ಗೌತಮ್ ಗಾಯಕವಾಡ್, ಶ್ರೀಧರ್ ಒಂಟಿ, ವಿಶ್ವ, ಅಭಿಷೇಕ್ ದರ್ಗಿ, ಬಾನು, ಶರಣು ಹಾವನೂರ್ ಮುಂತಾದವರು ಪಾಲ್ಗೊಂಡಿದ್ದರು.

ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ, ಅನ್ಯಾಯ ಸರಿಪಡಿಸುವವರೆಗೂ ಜಿಲ್ಲೆಗೆ ಬರಬೇಡಿ ಎಂದು ಒತ್ತಾಯಿಸಿದರು. ಹಲವಾರು ವರ್ಷಗಳ ನಿರಂತರ ಹೋರಟದ ಫಲವಾಗಿ 371(ಜೆ) ತಿದ್ದುಪಡಿಯಾಗಿದೆ. ಅದರ ಪ್ರತಿಫಲ ಸಿಗಬೇಕಾದವರಿಗೆ ಸಿಗದೆ ಇನ್ಯಾರಿಗೋ ಸಿಗುತ್ತಿದೆ. ಇದಕ್ಕೆ ಕಾರಣ ರಾಜ್ಯ ಸರ್ಕಾರದ ಮಲತಾಯಿ ಧೋರಣೆ ಎಂದು ಅವರು ಅರೋಪಿಸಿದರು.

ಹೈದ್ರಾಬಾದ್ ಕರ್ನಾಟಕ ಭಾಗದ ಪೋಲಿಸ ಇಲಾಖೆಗಳಲ್ಲಿ ಬಡ್ತಿಯಲ್ಲಿ ಅನ್ಯಾಯವಾಗಿದೆ. ಸೂಕ್ತ ಧಾಖಲೆ ಮತ್ತು ಅರ್ಹಥೆ ಇಲ್ಲದವರಿಗೆ ಸಂವಿಧಾನ 371(ಜೆ) ಅಡಿ ಹತ್ತು ಜನರಿಗೆ ಡಿವೈಎಸ್‌ಪಿ ಮತ್ತು ಇನ್ಸಪೆಕ್ಟರ್‌ಗಳಾಗಿ ಬಡ್ತಿ ನೀಡಲಾಗಿದೆ. ಇದರಿಂದ ಈ ಭಾಗದ ಪೋಲಿಸ ಅಧಿಕಾರಿಗಳಿಗೆ ಸಿಗಬೇಕಾಗಿದ್ದ ಬಡ್ತಿ ಮೀಸಲಾತಿ ಇನ್ನುವರೆಗೂ ಸಿಕ್ಕಿಲ್ಲ ಇದರಿಂದ ಮುಂದಿನ ದಿನಗಳಲ್ಲಿ ಬಡ್ತಿ ವಂಚಿತರಾದವರಿಗೆ ಮತ್ತು ಈ ಭಾಗದ ಪೋಲಿಸ ಅಧಿಕಾರಿಗಳಿಗೆ ಬಡ್ತಿ ಸಿಗುವುದು ವಿಳಂಬವಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಈ ಕುರಿತು ಬಡ್ತಿ ವಂಚಿತ ಅಧಿಕಾರಿಗಳೆ ಖುದ್ದಾಗಿ ಪೋಲಿಸ ಹಿರಿಯ ಅಧಿಕಾರಿಗಳಿಗೆ, ಗೃಹ ಸಚಿವರಿಗೆ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನೆ ಆಗಿಲ್ಲ. ರಾಜ್ಯ ಪೋಲಿಸ್ ಮಹಾನಿರ್ದೇಶಕರಿಗೆ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಜಿಲ್ಲಾ ಅಧಿಕಾರಿಗಳ ಕಛೇರಿ ಎದುರು ಧರಣಿ ನಡೆಸಿ ಹೈದ್ರಾಬಾದ್ ಕರ್ನಾಟಕ ಪೋಲಿಸ್ ಅಧಿಕಾರಿಗಳಿಗೆ ನ್ಯಾಯ ವದಗಿಸಿ ಎಂದು ಹೋರಾಟ ಮಾಡಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಮಸ್ಯೆ ಭಗೆಹರಿಸುವದಾಗಿ ಜಿಲ್ಲಾಧಿಕಾರಿಗಳು ಹೇಳಿದ್ದರೂ ಹಾಗೂ ಎಡಿಜಿಪಿ ಅವರೂ ಕೂಡ ಸೂಕ್ತ ಕ್ರಮ ಕೈಗೊಳ್ಳವುದಾಗಿ ಭರವಸೆ ನೀಡಿದ್ದರು. ಆದಾಗ್ಯೂ, ಒಂದು ವರ್ಷ ವಾಗುತ್ತ ಬಂದರೂ ನ್ಯಾಯ ಸಿಕ್ಕಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಬೇಕಾದರೆ ಹೈದ್ರಾಬಾದ್ ಕರ್ನಾಟಕ ಪೋಲಿಸ್ ಅಧಿಕಾರಿಗಳಿಗೆ ಬಡ್ತಿ ನೀಡಿ 371(ಜೆ) ದುರುಪಯೋಗ ಪಡಿಸಿಕೊಂಡ ಹೈದ್ರಾಬಾದ್ ಕರ್ನಾಟಕ ಹೊರತು ಪಡಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡು ಬಂದರೆ ಸ್ವಾಗತಿಸುತ್ತೇವೆ. ಇಲ್ಲದಿದ್ದರೆ ಮುಖ್ಯಮಂತ್ರಿಗಳ ವಿರುದ್ದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಆ ಸಂದರ್ಭದಲ್ಲಿ ಏನಾದರೂ ಹೆಚ್ಚುಕಡಿಮೆ ಆದರೆ ಅದಕ್ಕೆ ಜಿಲ್ಲಾಡಿಳಿತ ಜವಾಬ್ದಾರಿಯಾಗಿರುತ್ತದೆ ಎಂದು ಅವರು ಎಚ್ಚರಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago