ಕಲಬುರಗಿ: ಸರ್ಕಾರೇತರ ಸಂಸ್ಥೆಗಳು(ಎನ್‌ಜಿಓ) ಶೈಕ್ಷಣಿಕ, ಆರ್ಥಿಕ ಸಹಾಯ, ಪರಿಸರ, ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನಜಾಗೃತಿ, ವೈಜ್ಞಾನಿಕ ಮನೋಭಾವನೆ ಬೆಳೆಸುವುದು, ಸ್ವಚ್ಛತೆ, ಸರ್ಕಾರದ ಯೋಜನೆಯಗಳ ಬಗ್ಗೆ ವ್ಯಾಪಕ ಪ್ರಚಾರ ಹಾಗೂ ಅನುಷ್ಠಾನ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಮಾಡುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಅಮೋಘವಾದ ಕೊಡುಗೆಯನ್ನು ನೀಡುತ್ತಿವೆಯೆಂದು ಜಿಲ್ಲಾ ಎನ್‌ಜಿಓ ಒಕ್ಕೂಟ(ಫೆವಾರ್ಡ್) ಕಾರ್ಯದರ್ಶಿ ರಾಮಚಂದ್ರ ಕಾರಭೋಸಗಾ ಅಭಿಮತ ವ್ಯಕ್ತಪಡಿಸಿದರು.
ನಗರದಲ್ಲಿ ’ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ’ ಮತ್ತು ’ಬಸವೇಶ್ವರ ಸಮಾಜ ಸೇವಾ ಬಳಗ’ ಇವುಗಳ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ’ವಿಶ್ವ ಎನ್‌ಜಿಓ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
“ಮೇ ಆಜಾದ್ ತಾ. ಆಜಾದ್ ಹೊಂಔ ಆಜಾದ್ ಹೀ ರಹೊಂಗಾ “
ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಅಧ್ಯಕ್ಷ ಸುನೀಲುಮಾರ ವಂಟಿ ಮಾತನಾಡಿ, ಅನೇಕ ಎನ್‌ಜಿಓಗಳು ಸರ್ಕಾರದ ಅನುದಾನವನ್ನು ಪಡೆದು ಉತ್ತಮವಾದ ಕಾರ್ಯವನ್ನು ಮಾಡುತ್ತಿವೆ. ಅನುದಾನವನ್ನು ಸರಿಯಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳ ಪ್ರಮಾಣ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜರುಗಬೇಕಾಗಿದೆ. ಯಾವುದೇ ಕಾರಣಕ್ಕೂ ಸರ್ಕಾರದ ಅನುದಾನವನ್ನು ದುರುಪಯೋಗವಾಗದಂತೆ ಎಚ್ಚರ ವಹಿಸಬೇಕು. ಸಾರ್ವಜನಿಕರು ಕೂಡಾ ಇದರ ಬಗ್ಗೆ ಕಾಳಜಿ ವಹಸಿ, ಕೆಲಸ ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಎಂ.ಬಿ.ನಿಂಗಪ್ಪ, ಎಚ್.ಬಿ.ಪಾಟೀಲ, ಶಿವಶಂಕರ ಬಿ., ಎಂ.ಎನ್.ಸುಗಂಧಿ, ಬಸಯ್ಯಸ್ವಾಮಿ ಹೊದಲೂರ, ಬಸವರಾಜ ಎಸ್.ಪುರಾಣೆ, ದೇವೇಂದ್ರಪ್ಪ ಗಣಮುಖಿ, ತುಕಾರಾಮ ವರ್ಮಾ, ವಿಜಯಕುಮಾರ ಬೊಮ್ಮಾ, ಇರಗಪ್ಪ ಬರಗಲಿ, ಶಿವಪುತ್ರ ಗೊಬ್ಬೂರಕರ್, ಶಿವಕುಮಾರ ಹೊನಗೇರಾ, ಮನೋಹರ ಗಾಯಕವಾಡ್ ಸೇರಿದಂತೆ ಹಲವರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…