ಬೀದರ್: ವಿದ್ಯಾರ್ಥಿಗಳು ಜನೋಪಯೋಗಿ ಸಂಶೋಧನೆಗಳನ್ನು ಕೈಗೊಳ್ಳಬೇಕು ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ್ ದೇಶಮುಖ್ ಅವರು ಇಲ್ಲಿ ಸಲಹೆ ಮಾಡಿದರು.
ನಗರದ ಗೋರನಳ್ಳಿಯ ಲಿಂಗರಾಜ್ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರೊಜೆಕ್ಟ್ (ಯೋಜನೆ) ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ದೀರ್ಘ ಕಾಲದವರೆಗೆ ಬಾಳಿಕೆಗೆ ಬರುವ, ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ತಯಾರಿಸಬೇಕು ಎಂದರು. ಪಠ್ಯಕ್ರಮ ಹಾಗೂ ಪ್ರಯೋಗ ಎರಡೂ ಪ್ರಮುಖವಾದವುಗಳೇ. ವಿದ್ಯಾರ್ಥಿಗಳು ಮೊದಲು ಪಠ್ಯ ಓದಿ ವಿಷಯದ ಪರಿಕಲ್ಪನೆಯನ್ನು ಅರ್ಥ ಮಾಡಿಕೊಳ್ಳಬೇಕು. ನಂತರ ಅದನ್ನು ಪ್ರಯೋಗರೂಪಕ್ಕೆ ಇಳಿಸಬೇಕು ಎಂದು ಅವರು ತಿಳಿಸಿದರು.
ಶರಣಬಸವೇಶ್ವರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ ಅವರು ಗುಣಮಟ್ಟದ ಶಿಕ್ಷಣದ ಮೂಲಕ ಈ ಭಾಗದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ನಿರಂತರ ಶ್ರಮಿಸುತ್ತಿದ್ದಾರೆ. ಸಂಸ್ಥೆಯ ಅಡಿ ವಿಶ್ವವಿದ್ಯಾಲಯವನ್ನೇ ಆರಂಭಿಸಿ ವಿದ್ಯಾರ್ಥಿಗಳಿಗೆ ಹಲವು ಬಗೆಯ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡಲು ಅನುವು ಮಾಡಿಕೊಟ್ಟಿದ್ದಾರೆ ಎಂದು ಅವರು ಹೇಳಿದರು.
ಸಂಸ್ಥೆಯು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತ ಬಂದಿದೆ. ಪ್ರತಿ ವರ್ಷ ಪ್ರೊಜೆಕ್ಟ್ ಪ್ರದರ್ಶನ ಆಯೋಜಿಸಿ ಯೋಜನಗಳ ಪ್ರದರ್ಶನಕ್ಕೆ ವೇದಿಕೆ ಒದಗಿಸುತ್ತಿದೆ. ಅತ್ಯುತ್ತಮ ಯೋಜನೆಗಳಿಗೆ ನಗದು ಬಹುಮಾನ ಕೊಟ್ಟು ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನೂ ನೀಡುತ್ತಿದೆ ಎಂದು ತಿಳಿಸಿದ ಅವರು, ಹಳೆಯ ವಿದ್ಯಾರ್ಥಿಗಳ ಮಾರ್ಗದರ್ಶನದಲ್ಲಿಕಾಲೇಜು ವಿದ್ಯಾರ್ಥಿಗಳು ಸೌರ ವಿದ್ಯುತ್ ಘಟಕ ಸ್ಥಾಪಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಿನ್ಸಿಪಾಲ್ ಡಾ. ಸಂಜೀವರೆಡ್ಡಿ ಕೆ. ಹುಡಗಿಕರ್ ಅವರು ಮಾತನಾಡಿ, ಮುಂದಿನ ಮೂರು ವರ್ಷಗಳಲ್ಲಿ ಕಾಲೇಜನ್ನು ಸಂಪೂರ್ಣ ವಿದ್ಯುತ್ ಸ್ವಾವಲಂಬಿಯಾಗಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಕಾಲೇಜಿನಲ್ಲಿ ಈಗಾಗಲೇ ಸೌರ ವಿದ್ಯುತ್ ಘಟಕ ಸ್ಥಾಪಿಸಿದ್ದು, ನಿತ್ಯ ೧೦ ಕಿಲೋ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಬರುವ ವರ್ಷಗಳಲ್ಲಿ ಘಟಕದ ಸಾಮರ್ಥ್ಯ ವೃದ್ಧಿಸಿ ಪ್ರತಿ ದಿನ ೩೦ ಕಿಲೋ ವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆ ಇದೆ ಎಂದು ಅವರು ತಿಳಿಸಿದರು.
ಜನರ ಅವಶ್ಯಕತೆಯನ್ನು ಗಮನದಲ್ಲಿಇಟ್ಟುಕೊಂಡು ಯೋಜನೆ ಸಿದ್ಧಪಡಿಸಬೇಕು. ಹಾಗಾದಲ್ಲಿ ಮಾತ್ರಅದು ಸಫಲವಾಗಲು ಸಾಧ್ಯವಿದೆ ಎಂದು ಅವರು ಹೇಳಿದರು. ಪ್ಲಾಸ್ಟಿಕ್, ಎಗ್ ಸೆಲ್ ಹಾಗೂ ಬಿಳಿ ಸಿಮೆಂಟ್ ಬಳಸಿ ತಯಾರಿಸಿದ ಟೈಲ್ಸ್ ಯೋಜನೆ ಪ್ರಥಮ, ವಿದ್ಯಾರ್ಥಿಗಳ ಹಾಜರಾತಿ ವ್ಯವಸ್ಥೆಯ ಆಪ್ ಯೋಜನೆ ದ್ವಿತೀಯ ಹಾಗೂ ಗಾಳಿಯಿಂದ ವಿದ್ಯುತ್ ಉತ್ಪಾದನೆ ಯೋಜನೆ ತೃತೀಯ ಬಹುಮಾನ ಪಡೆದುಕೊಂಡಿತು.
ಇದೇ ವೇಳೆ ಸೌರ ವಿದ್ಯುತ್ ಘಟಕವನ್ನು ಉದ್ಘಾಟಿಸಲಾಯಿತು. ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬಸವಲಿಂಗ್ ಶಾಸ್ತ್ರಿ ಅವರು ಕಾರ್ಯಕ್ರಮ ನಿರೂಪಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…