ಶಹಾಬಾದ: ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಬಗ್ಗೆ ಸರಕಾರ ಅನುಸರಿಸುತ್ತಿರುವ ಧೋರಣೆಯನ್ನು ಬಿಟ್ಟು ಅವರ ಸ್ಪಂದಿಸುವತ್ತ ಮುಂದಾಗಬೇಕೆಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರ ಪೀರಪಾಶಾ ಹೊನಗುಂಟಾ ತಿಳಿಸಿದರು.
ಅವರು ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್-೧೯ದಿಂದ ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರೂ ಸರ್ಕಾರ ಮಾತ್ರ ಇವರಿಗೆ ಸ್ಪಂದಿಸುವಲ್ಲಿ ಎಡವುತ್ತಿದೆ.ಇದರಿಂದ ಶಿಕ್ಷಕರು ಮತ್ತು ಖಾಸಗಿ ಆಡಳಿತ ಮಂಡಳಿಯವರು ಆತ್ಮಹತ್ಯ ಮಾಡಿಕೊಳ್ಳು ಮುಂದಾಗುತ್ತಿರುವುದು ದುರ್ದೈವದ ಸಂಗತಿ.ಅಲ್ಲದೇ ರಾಜ್ಯ ಎಲ್ಲಾ ಖಾಸಗಿ ಶಾಲಾ-ಕಾಲೇಜಿನ ಶಿಕ್ಷಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಗರುಡಾದ್ರಿ ಕಲಾ ಮಂದಿರದಲ್ಲಿ ಸಿದ್ದಿವಿನಾಯಕ ಮಹಿಳಾ ಮಂಡಳಿ ಲೋಕಾರ್ಪಣೆ
ಈಗಾಗಲೇ ಖಾಸಗಿ ಶಾಲಾ ಕಾಲೆಜು ಅಭಿವೃದ್ಧಿಗಾಗಿ ಮತ್ತು ೧೫೦೦ ಕೋಟಿ ರೂ. ಅನುದಾನ ಮೀಸಲಿದ್ದರೂ ಸರಕಾರ ಅದನ್ನು ಅಭಿವೃದ್ಧಿಗಾಗಿ ಬಳಸದೇ ನಿರಾಸಕ್ತಿಯನ್ನು ತೊರುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯ ಪರಿಣಾಮ ಆಡಳಿತ ಮಂಡಳಿಯವರ ಹಾಗೂ ಶಿಕ್ಷಕರ ಆತ್ಮಹತ್ಯೆಗೆ ಸರ್ಕಾರವೇ ಕಾರಣ. ಕೂಡಲೇ ಸರಕಾರ ಖಾಸಗಿ ಶಾಲಾ-ಕಾಲೇಜಿನ ಹಾಗೂ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕು.ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಲಾಗುವುದೆಂದು ಪಿರಪಾಶಾ ಹೊನಗುಂಟಾ ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…