ಬಿಸಿ ಬಿಸಿ ಸುದ್ದಿ

ಹಿರಿಯ ನಾಗರಿಕರಿಗೆ ಕೋವಿಡ್‌ ಲಸಿಕೆ: ಡಿ.ಸಿ. ವಿ.ವಿ.ಜ್ಯೋತ್ಸ್ನಾ

ಕಲಬುರಗಿ: ಆರೋಗ್ಯ ಸಿಬ್ಬಂದಿ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಈಗಾಗಲೆ‌ ಎರಡು ಹಂತದಲ್ಲಿ ಕೋವಿಡ್ ಲಸಿಕೆ ನೀಡಿಕೆಗೆ ಚಾಲನೆ‌ ನೀಡಿದ್ದು, ಇವರೊಂದಿಗೆ ಮಾರ್ಚ್ 1 ರಿಂದ ಮೂರನೇ‌ ಹಂತದ ಅಂಗವಾಗಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ 45 ರಿಂದ 59 ವರ್ಷದೊಳಗಿನ ಧೀರ್ಘ ಕಾಯಿಲೆಯಿಂದ ಬಳಲುತ್ತಿರುವವರೆಗೆ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡಲು ಚಾಲನೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಜಿಲ್ಲಾ‌ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಉಚಿತವಾಗಿ ‌ಲಸಿಕೆ‌ ನೀಡಲಾಗುವುದು. ಕಲಬುರಗಿ ನಗರದ ಬಸವೇಶ್ವರ ಮತ್ತು ಕೆ.ಬಿ.ಎನ್.ಆಸ್ಪತ್ರೆಗಳಲ್ಲಿ 250 ರೂ. ಪಾವತಿ ಮಾಡಿ ಕೋವಿಡ್ ಲಸಿಕೆ ಪಡೆಯಬಹುದಾಗಿದೆ ಎಂದಿದ್ದಾರೆ.

ಡಾ.ಹಾಲಸ್ವಾಮಿ ಕೆ.ಜಿಗೆ ವಿದ್ಯಾರ್ಥಿಗಳು, ಹಿರಿಯ ಪತ್ರಕರ್ತರಿಂದ ಸನ್ಮಾನ

ಕೋವಿಡ್ ಲಸಿಕೆ ಪಡೆಯಬೇಕಾದರೆ ಧೀರ್ಘಕಾಯಿಲೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ವೈದ್ಯಾಧಿಕಾರಿಗಳಿಂದ‌ ಕಾಯಿಲೆಯ ಬಗ್ಗೆ ದೃಢೀಕರಣ ಪತ್ರದ ಜೊತೆಗೆ cowin.gov.in ಅಥವಾ ಅರೋಗ್ಯ ಸೇತು ಆಪ್ ಮೂಲಕ ಅನ್ ಲೈನ್ ಅಥವಾ ಆಫ್ ಲೈನ್ ಮೂಲಕ ನೊಂದಾಯಿಸಬೇಕು. ನೋಂದಣಿಗೆ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಡ್ರೈವಿಂಗ್‌ ಲೈಸೆನ್ಸ್, ಉದ್ಯೋಗ ಪ್ರಮಾಣ ಪತ್ರ, ಕಚೇರಿಯಿಂದ ನೀಡಲಾದ ಗುರುಚಿನ ಚೀಟಿ ಅವಶ್ಯಕವಾಗಿರುತ್ತದೆ.

ಮುಂದಿನ‌ ದಿನದಲ್ಲಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ನೊಂದಾಯಿತ ಖಾಸಗಿ ಅಸ್ಪತ್ರೆಗಳಲ್ಲಿಯೂ‌ ಲಸಿಕೆ‌ ನೀಡಲಾಗುತ್ತಿದ್ದು, ಸಾರ್ವಜನಿಕರು ಲಸಿಕೆ ಪಡೆಯಬಹುದಾಗಿದೆ ಎಂದು ಡಿ.ಸಿ. ವಿ.ವಿ.ಜ್ಯೋತ್ಸ್ನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

sajidpress

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

24 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago