ಕವಿತಾಳ : ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲಾ ಕಾಲೇಜುಗಳಿಗೆ ಹಾಗೂ ಪಟ್ಟಣದ ವಿವಿಧ ವಾರ್ಡ್ ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮತ್ತು ಇತರೆ ಬೇಡಿಕೆಗಳ ಈಡೇರಿಕೆಗಾಗಿ ಭಾರತ ವಿದ್ಯಾರ್ಥಿ ಫೆಡರೇಷನ್ ( SFI ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ( DYFI ) ನಗರ ಘಟಕದ ವತಿಯಿಂದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗೆ ಸಂಘಟನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಪಟ್ಟಣದಲ್ಲಿರುವ ನಾಲ್ಕು ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಮೂರು ಪ್ರೌಢಶಾಲೆ, ಒಂದು ಪಿಯು ಕಾಲೇಜು ಹಾಗೂ ಪದವಿ ಕಾಲೇಜು ಗಳ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ಇಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತು ಸ್ವಚ್ಚತೆಯ ಸಮಸ್ಯೆ ಇದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿ ವಿದ್ಯಾಭ್ಯಾಸಕ್ಕೆ ಅಡಚಣೆಯಾಗುತ್ತಿದೆ ಜೊತೆಗೆ ಪಟ್ಟಣದಲ್ಲಿರುವ ಬಹುತೇಕ ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಇಡೀ ಪಟ್ಟಣದ ಜನತೆ ಮೂಲಭೂತ ಸೌಕರ್ಯಗಳಿಂದ ವಂಚಿವಾಗಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಬಸವ ಪುರಸ್ಕಾರ” ಕ್ಕೆ ಪುಸ್ತಕಗಳ ಆಹ್ವಾನ
ಪಟ್ಟಣದಲ್ಲಿ 5&6 ನೆ ವಾರ್ಡ್ ನಲ್ಲಿ ಅವೈಜ್ಞಾನಿಕ ವಾಗಿ ಕಳಪೆ ಗುಣಮಟ್ಟದಲ್ಲಿ ಮಾಡಿರುವ ಪೈಪ್ ಲೈನ್ ಕಾಮಗಾರಿಯನ್ನು ಪರಿಶೀಲಿಸಿ ಕ್ರಮಕ್ಕೆ ಮುಂದಾಗಬೇಕು ಮತ್ತು ಹಳೆಯ ಬಸ್ ನಿಲ್ದಾಣ ( ಶಿವಪ್ಪ ಮಠ ) ಹತ್ತಿರ ಸಾರ್ವಜನಿಕ ಶೌಚಾಲಯ ವನ್ನು ನಿರ್ಮಿಸಬೇಕು, ಬಾಕಿ ಇರುವ. ವಸತಿ ಯೋಜನೆಯ, ವೈಯಕ್ತಿಕ ಶೌಚಾಲಯದ ಬಿಲ್ ಬಿಡುಗಡೆ ಮಾಡಬೇಕು, ಹಕ್ಕುಪತ್ರ ವಿತರಣೆಯ ಕಾರ್ಯವನ್ನು ಸುಗಮಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಿ.ಸಿ ರಸ್ತೆ, ಚರಂಡಿ, ವಿದ್ಯುತ್ ದ್ವೀಪ, ಸ್ವಚ್ಚತೆ ಸೇರಿ, ಸೊಳ್ಳೆಗಳ ನಿಯಂತ್ರಣ ಕ್ಕಾಗಿ ಫಾಗಿಂಗ್ ಮಾಡಿಸಬೇಕು, ScST ವಿದ್ಯಾರ್ಥಿ ಪಠ್ಯ ಪುಸ್ತಕ ಖರೀದಿಗೆ ನೀಡುವ ಪ್ರೋತ್ಸಾಹ ಧನವನ್ನು ಕೂಡಲೇ ವಿತರಿಸಬೇಕು, ಆಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಒಳಗೊಂಡಿರುವ ಮನವಿಯನ್ನು ಮುಖ್ಯಾಧಿಕಾರಿ ಹನುಮಂತಮ್ಮನ ಸ್ವೀಕರಿಸಿ ಬೇಡಿಕೆಗಳ ಈಡೇರಿಸುವ ಭರವಸೆ ನೀಡಿದ್ದಾರೆಂದು SFI ರಾಜ್ಯ ಉಪಾಧ್ಯಕ್ಷರು ಶಿವಕುಮಾರ ಮ್ಯಾಗಳಮನಿ ತಿಳಿಸಿದ್ದಾರೆ.
ಹಿರಿಯ ನಾಗರಿಕರಿಗೆ ಕೋವಿಡ್ ಲಸಿಕೆ: ಡಿ.ಸಿ. ವಿ.ವಿ.ಜ್ಯೋತ್ಸ್ನಾ
ಈ ಸಂದರ್ಭದಲ್ಲಿ SFI ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್, DYFI ಅಧ್ಯಕ್ಷರಾದ ಮಹಮ್ಮದ್ ರಫೀ, SFI ಕವಿತಾಳ ಘಟಕದ ಅಧ್ಯಕ್ಷರಾದ ಮೌನೇಶ ಬುಳ್ಳಾಪುರ, ಕಾರ್ಯದರ್ಶಿ ವೆಂಕಟೇಶ, ಮುಖಂಡರಾದ ನಾಗಮೋಹನ್ ಸಿಂಗ್, ಮಲ್ಲಿಕಾರ್ಜುನ, ಕುಪ್ಪಣ್ಣ, ಪಾಷ ಜೆ.ಇ ಮಲ್ಲಣ ಸೇರಿದಂತೆ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…