ಸುರಪುರ: ತಾಲೂಕಿನ ಅನೇಕ ಬ್ಯಾಂಕ್‌ಗಳಲ್ಲಿ ಕೇಂದ್ರ ಸರಕಾರದ ಮಹಾತ್ವಕಾಂಕ್ಷಿ ಯೋಜನೆಯಲ್ಲೊ ಒಂದಾದ ಪಿಎಮ್‌ಇಜಿಪಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಅನೇಕರಿಗೆ ಬ್ಯಾಂಕ್‌ಗಳಲ್ಲಿ ಸಾಲ ನೀಡದೆ ವಂಚನೆ ಮಾಡಲಾಗುತ್ತಿದೆ,ಅಂತಹ ಬ್ಯಾಂಕ್‌ಗಳ ಮೇಲೆ ಕ್ರಮ ಕೈಗೊಳ್ಳುವಂತೆ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ವೆಂಕೋಬ ದೊರೆ ಆಗ್ರಹಿಸಿದರು.
ನಗರದ ಬಸ್ ನಿಲ್ದಾಣ ಬಳಿಯ ಡಾ:ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ಮಾತನಾಡಿ,ದೇವರು ವರ ಕೊಟ್ಟರು ಪೂಜಾರಿ ಕೊಡಲಿಲ್ಲ ಎನ್ನುವಂತೆ ಎಲ್ಲಾ ಬ್ಯಾಂಕ್‌ಗಳಲ್ಲಿನ ವ್ಯವಸ್ಥಾಪಕರು ಸರಕಾರದ ಯೋಜನೆಯಾದ ಪಿಎಮ್‌ಇಜಿಪಿ ಯೋಜನೆಯಡಿ ಸಾಲ ನೀಡದಿರುವುದರಿಂದ ಎಷ್ಟೋ ಜನ ನಿರುದ್ಯೋಗಿಗಳು ಇಂದು ಲಾಕ್‌ಡೌನ್ ಹೊಡೆತದಿಂದ ತತ್ತರಿಸಿದ್ದಾರೆ,ಆದರೆ ಬ್ಯಾಂಕ್‌ಗಳು ಸಾಳ ನೀಡದೆ ಆ ಯೋಜನೆಯು ಹಳ್ಳ ಹಿಡಿಯುವಂತಾಗಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ಪ್ರಮಾಣ ಸ್ಲಾಸ್ಟಿಕ್ ವಸ್ತುಗಳು ನಾಶ
ಆದರೆ ಬ್ಯಾಂಕ್‌ಗಳ ವ್ಯವಸ್ಥಾಪಕರು ಈ ಯೋಜನೆಯ ಹೆಸರಲ್ಲಿ ಭ್ರಷ್ಟಾಚಾರ ನಡೆಸಿರುವ ಅನುಮಾನ ಎಲ್ಲೆಡೆ ವ್ಯಕ್ತವಾಗುತ್ತಿದೆ.ಆದ್ದರಿಂದ ಈ ಎಲ್ಲಾ ಬ್ಯಾಂಕ್‌ಗಳಲ್ಲಿ ತನಿಖೆ ನಡೆಸಬೇಕು ಮತ್ತು ಪಿಎಮ್‌ಇಜಿಪಿ ಸಾಲಕ್ಕೆ ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಸಾಲ ಕೊಡಿಸಬೇಕೆಂದು ಆಗ್ರಹಿಸಿದರು.ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಇದೇ ತಿಂಗಳು ೫ನೇ ತರೀಖು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ ಕಚೇರಿ ಸಿರಸ್ತೆದಾರರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಉಸ್ತಾದ ವಜಹತ್ ಹುಸೇನ್ ರೈತ ಘಟಕದ ಅಧ್ಯಕ್ಷ ಗೋಪಾಲ ಬಾಗಲಕೋಟೆ ಸೇರಿದಂತೆ ಅನೇಕರಿದ್ದರು.