ಕಲಬುರಗಿ: ನಿನ್ನೆ ರಾತ್ರಿ ಹತ್ತು ಗಂಟೆಗೆ ಕಮಲಾಪುರ ತಾಲ್ಲೂಕಿನ ಹೆದ್ದಾರಿಯಲ್ಲಿ ಎರಡು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದ್ದು, ಮತ್ತೊಂದು ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಬೀದರ್ ಜಿಲ್ಲೆಯ ಜಲಸಂಗಿ ನಿವಾಸಿ ಪ್ರಭಾಕರ್ (28) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದ್ದು, ಕಲಬುರಗಿ ನಗರದ ಆಸೀಫ್ (22) ಅಪಘಾತದಲ್ಲಿ ಗಾಯಗೊಂಡಿದ್ದು, ಆಸೀಫ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.
ಕರ್ತವ್ಯಲೋಪ ಇಬ್ಬರು ಅಧಿಕಾರಿಗಳು ಅಮಾನತು
ನಿನ್ನೆ ರಾತ್ರಿ ವೇಳೆಯಲ್ಲಿ ಪ್ರಭಾಕರ ಕಮಲಾಪುರದಲ್ಲಿರುವ ತನ್ನ ರೂಮಿಗೆ ಮರಳುವ ವೇಳೆ ಅಪಘಾತ ಸಂಭವಿಸಿದೆ.ಘಟನೆಯ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆ ನಡೆಸುತ್ತಿದ್ದಾರೆ.