ಕಲಬುರಗಿ: ಜೆಡಿಎಸ್ ಜಿಲ್ಲಾ ಯುವ ಘಟಕದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ದಶವಂತ ಬಿ.ಕಣಮಸ್ಕರ್ ರಾಜೀನಾಮೆ ನೀಡಿದ್ದಾರೆ.
ಕಳೆದ ಕಾಂಗ್ರೆಸ್ ಜೆಡಿಎಸ್ ಸಮ್ಮಿಸ್ರ ಸರಕಾರದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ. ಅಲ್ಲದೆ ಜೆಡಿಎಸ್ ಪಕ್ಷವು ಅಧಿಕಾರದ ಆಸೆಗೆ ಯಾರ ಜೋತೆಗೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರು ಗುಂಪುಗಾರಿಕೆ ಮಾಡುತ್ತಿದ್ದಾರೆ.
ಈ ಎಲ್ಲ ಕಾರಣಗಳಿಂದ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಜಿಲ್ಲಾ ಯುವ ಘಟಕದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ