ಮೊಬೈಲ್‍ನಲ್ಲಿ ಮತದಾರರ ಗುರುತಿನ ಚೀಟಿ ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ 

2
82

ಕಲಬುರಗಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (2020ರ ನವೆಂಬರ್ 18 ರಿಂದ ಡಿಸೆಂಬರ್ 17ರವರೆಗೆ) ಸಂದರ್ಭದಲ್ಲಿ ಹೊಸದಾಗಿ ಮತದಾರರ ಯಾದಿಯಲ್ಲಿ ನೋಂದಣಿಯಾದ 18-19 ವರ್ಷದ ಯುವ ಮತದಾರರು ತಮ್ಮ ಮತದಾರರ ಗುರುತಿನ ಚೀಟಿಯನ್ನು ಆಂಡ್ರಾಯ್ಡ್ ಮೊಬೈಲ್ (Android Mobile) ನಲ್ಲಿ ಡೌನ್‍ಲೋಡ್  ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಮತದಾರರು ಇದರ ಸದುಪಯೋಗ ಪಡೆಯಬೇಕೆಂದು ಗುಲಬರ್ಗಾ ಉತ್ತರ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೇ www.nvsp.in ವೆಬ್‍ಸೈಟ್‍ನಲ್ಲಿಯೂ ಸಹ ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತದಾರರ ಗುರುತಿನ ಚೀಟಿಯನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.
ಮತದಾರರ ಗುರುತಿನ ಚೀಟಿಯನ್ನು ಡೌನ್‍ಲೋಡ್ ಮಾಡುವ ಕುರಿತು ತಮ್ಮ ಮತಗಟ್ಟೆ ವ್ಯಾಪ್ತಿಯ ಯುವ ಮತದಾರರಿಗೆ ಮತಗಟ್ಟೆ ಹಂತದ ಅಧಿಕಾರಿಗಳು(BLO)  ಇದೇ ಮಾರ್ಚ್ 6 ಹಾಗೂ 7 ರಂದು ಎಲ್ಲಾ ಮತಗಟ್ಟೆಗಳಲ್ಲಿ    É ಮಾಹಿತಿ ನೀಡಲಿದ್ದಾರೆ.

Contact Your\'s Advertisement; 9902492681

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನಗರ ವ್ಯಾಪ್ತಿಯೊಳಪಡುವ ಯುವ ಮತದಾರರು ಕಲಬುರಗಿ ಮಹಾನಗರಪಾಲಿಕೆಯ ಚುನಾವಣೆ ಶಾಖೆಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here