ಶಹಾಬಾದ: ಡಾ.ಬಿ.ಆರ್.ಅಂಬೇಡ್ಕರ್ ಗ್ರಾಮೀಣ ವಸತಿ ಯೋಜನೆಯ ೨೦೧೬-೧೭ನೇ ಸಾಲಿನ ೧೦೭ ಫಲಾನುಭವಿಗಳ ಪಟ್ಟಿಯನ್ನು ಅನುಮೋದಿಸಬೇಕು ಹಾಗೂ ಎಸ್‌ಸಿಪಿ ಯೋಜನೆಯಲ್ಲಿ ಕಾಮಗಾರಿ ಮಾಡದೇ ಹಣ ದುರ್ಬಳಕೆ ಮಾಡಿದ ಕೆಆರ್‌ಐಡಿಎಲ್ ಜೆಇ ಹಾಗೂ ನಿವೃತ್ತ ಎಇಇ ಮೇಲೆ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಕೇಸ್ ದಾಖಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ತಾಲೂಕಾ ಪಂಚಾಯತ ಕಚೇರಿಯ ಮುಂದೆ ನಡೆಯುತ್ತಿರುವ ಸರದಿ ಉಪವಾಸ ಸತ್ಯಾಗ್ರಹ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು,ನಿವೇಶನ ರಹಿತ ಮತ್ತು ವಸತಿ ರಹಿತ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜನರಿಗೆ ಸೂರು ಕಲಿಪಿಸುವುದಕ್ಕಾಗಿ ಜಾರಿಗೆ ತಂದಿರುವ ಡಾ.ಬಿ.ಆರ್.ಅಂಬೇಡ್ಕರ್ ಗ್ರಾಮೀಣ ವಸತಿ ಯೋಜನೆಯ ೨೦೧೬-೧೭ನೇ ಸಾಲಿನಲ್ಲಿ ತೊನಸನಹಳ್ಳಿ(ಎಸ್) ಗ್ರಾಪಂ ಸುಮಾರು ೧೦೭ಫಲಾನುಭವಿಗಳ ಪಟ್ಟಿ ಅನುಮೋದಿಸಬೇಕು.ಅಲ್ಲದೇ ಗೋಳಾ(ಕೆ) ಗ್ರಾಮದಲ್ಲಿ ಎಸ್‌ಸಿಪಿ ಯೋಜನೆಯಲ್ಲಿ ಕಾಮಗಾರಿ ಮಾಡದೇ ಸುಮಾರು ೩೦ ಲಕ್ಷ ರೂ, ಹಣ ದುರ್ಬಳಕೆ ಮಾಡಿದ ಕೆಆರ್‌ಐಡಿಎಲ್ ಜೆಇ ಹಾಗೂ ನಿವೃತ್ತ ಎಇಇ ಮೇಲೆ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಕೇಸ್ ದಾಖಲಿಸಬೇಕು.ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಸಕರು ಸ್ಥಳಕ್ಕೆ ಬಂದು ಭರವಸೆ ನೀಡಿದರೇ ಮಾತ್ರ ಸತ್ಯಾಗ್ರಹ ಹಿಂದಕ್ಕೆ ಪಡೆಯಲಾಗುವುದು.ಇಲ್ಲದಿದ್ದರೇ ಈ ಧರಣಿ ಮುಂದೆವರಿಯುವುದು.
ಸಂವಿಧಾನ ಈ ದೇಶದ ನಿಜವಾದ ಧರ್ಮ ಗ್ರಂಥ
ಅಲ್ಲದೇ ಕೆಲವು ಅಧಿಕಾರಿಗಳು ನಮಗೆ ಕರೆ ಮಾಡಿ ಧರಣಿಯನ್ನು ಕೈಬಿಡಬೇಕೆಂದು ಒತ್ತಡ ಹಾಕುತ್ತಿದ್ದಾರೆ.ಅಲ್ಲದೇ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ನಿರಾಕರಿಸುತ್ತಿದ್ದಾರೆ. ಅಲ್ಲದೇದುರ್ಬಳಕೆ ಮಾಡಿದ ಅಧಿಕಾರಿಗಳಿಗೆ ಸಹಕಾರ ನೀಡುತ್ತಿದ್ದಾರೆ.ಅವರ ವಿರುದ್ಧ ಕ್ರಮಕೈಗೊಳ್ಳುವವರೆಗೂ ಪ್ರತಿಭಟನೆ ಮುಂದುವರೆಯುತ್ತದೆ ಎಂದು ಹೇಳಿದರು.
ದಸಂಸ ಜಿಲ್ಲಾ ಸಂಚಾಲಕ ಕೃಷ್ಣಪ್ಪ ಕರಣಿಕ್, ದಸಂಸ ತಾಲೂಕಾ ಸಂಚಾಲಕ ಮಹಾದೇವ ತರನಳ್ಳಿ,ಲಕ್ಷ್ಮಣ ಕೊಲ್ಲೂರ್, ತಿಪ್ಪಣ್ಣ ಧನ್ನೇಕರ್,ಶರಣು ಧನ್ನೇಕರ್,ತೇಜಸ್ ಧನ್ನಾ, ಕವಿತಾ.ಎಸ್.ಜಂಬಗಿ, ನಾಗೇಂದ್ರಪ್ಪ ಹುಗ್ಗಿ , ಜೈಬೀಮ ರಸ್ತಾಪೂರ,ಮೀನಾಕ್ಷಿ ಹೆಬ್ಬಾಳಕರ್ ಸೇರಿದಂತೆ ಅನೇಕ ಮಹಿಳೆಯರು ಹಾಜರಿದ್ದರು.
ಸೇಡಂ: ಜಗತ್ತಿನಲ್ಲಿ ಎರಡು ಸುರಕ್ಷಿತ ಸ್ಥಳ ಅಪ್ಪನ ಹೆಗಲು, ಅಮ್ಮನ ಮಡಿಲು ಹಾಗಾಗಿ ತಾಯಿ, ತಂದೆಯರ ಹೆಸರಿನಲ್ಲಿ ನೀಡುವ ಪ್ರಶಸ್ತಿ…
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…