ಬಿಸಿ ಬಿಸಿ ಸುದ್ದಿ

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾಯಿತಿ ನೀಡಿ: ಸಿದ್ದಣ್ಣಗೌಡ

ಅಫಜಲಪುರ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರಕಾರದ ೨ಎ ಮೀಸಲಾತಿ ಹಾಗೂ ಲಿಂಗಾಯತ ಬಡ ಸಮಾಜದವರಿಗೆ ಕೇಂದ್ರದ ಓ.ಬಿ.ಸಿ. ಮೀಸಲಾತಿಗಾಗಿ ಸರಕಾಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಅಫಜಲಪುರ ತಾಲೂಕಾ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಯುವ ಘಟಕದ ವತಿಯಿಂದ ತಹಸೀಲ್ದಾರರ ಮೂಲಕ ರಾಜ್ಯದ ಮುಖ್ಯಮಂತ್ರಿಯವರಿಗೆ ಮನವಿಪತ್ರ ಸಲ್ಲಸಿದರು.

ಮನವಿ ಪತ್ರ ನೀಡಿ ಮಾತನಾಡಿದ ತಾಲೂಕಾ ಪಂಚಮಸಾಲಿ ಯುವ ಘಟಕ ಅಧ್ಯಕ್ಷರಾದ ಸಿದ್ದಣ್ಣಗೌಡ ಮಾಲಿಪಾಟೀಲ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ಕೃಷಿಯನ್ನು ಕುಲಕಸಬುನ್ನಾಗಿಸಿಕೊಂಡು ಹಾಗೂ ಕೃಷಿ ಕೂಲಿಕಾರರಾಗಿರುವ ಪಂಚಮಸಾಲಿ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಹಾಗೂ ಔದೋಗಿಕವಾಗಿ, ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ತಿಳಿಸಿದ ಅವರು ೨೬ ವರ್ಷಗಳಿಂದಲೂ ಸರಕಾರಕ್ಕೆ ಮನವಿ ಮಾಡುತ್ತ ಬಂದಿದ್ದರು ಸಹ ಯಾವುದೇ ಯಾವುದೇ ಸರಕಾರಗಳು ಸ್ಪಂದಿಸಿಲ್ಲ ಎಂದು ಅಸಮಾಧಾನ ಹೊರಹಾಕಿದ ಅವರು ಆದಷ್ಟು ಬೇಗ ಈ ಹಿಂದುಳಿದ ಸಮುದಾಯಕ್ಕೆ ೨ ಎ ಮೀಸಲಾತಿ ನೀಡಿ ನ್ಯಾಯ ನೀಡಬೇಕು ಎಂದು ಸರಕಾರಕ್ಕೆ ಮನವಿ ಮಾಡಿದರು.

ಕಾಮಗಾರಿ ಮಾಡದೇ ಹಣ ದುರ್ಬಳಕೆ ಆರೋಪ: ಕ್ರಮಕ್ಕೆ ಒತ್ತಾಯಿಸಿ ಸರದಿ ಉಪವಾಸ ಸತ್ಯಾಗ್ರಹ

ಈ ಸಂದರ್ಭದಲ್ಲಿ ತಾಲೂಕಾ ಲಿಂಗಾಯತ ಪಂಚಮಸಾಲಿ ಸಮಾಜ ಅಧ್ಯಕ್ಷರಾದ ಚಂದು ದೇಸಾಯಿ, ಮುಖಂಡರಾದ ಮಲ್ಲು ಸೋಲಾಪುರ, ಕಾಂತು ಮ್ಯಾಳೇಶಿ, ಬಸವರಾಜಗೌಡ ಪಾಟೀಲ, ನಾಗರಾಜ ಬುಜರಿ, ಸುರೇಶ ಮಳ್ಳಿ, ಬಸವರಾಜ, ಸಿದ್ದರಾಮ ಕಲಕೇರಿ, ರೇವಣಸಿದ್ದ ಮಲ್ಲಬಾದ, ಮಹಾಂತೇಶ, ಗುರುಪಾದಗೌಡ, ಯಶ್ವರಾಯ ಅಳ್ಳಗಿ, ಶಿವರಾಯ ರಟಕಲ್, ಭೀಮರಾವ, ಸಿದ್ದಪ್ಪ ರಾಂಪೂರೆ, ಬಾಬುಗೌಡ ಪಾಟೀಲ, ದಾದಗೌಡ ಜವಳಿ, ಸುರೇಶ ಮಾಲಿ ಪಾಟೀಲ, ಶಿವಾನಂದಗೌಡ, ಸಂತೋಷ ಮಾಲೀಪಾಟೀಲ, ಸೇರಿದಂತೆ ಅನೇಕರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

8 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

15 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago