ಬಿಸಿ ಬಿಸಿ ಸುದ್ದಿ

ಮೆಗಾ ಉದ್ಯೋಗ ಮೇಳ: 200 ಉದ್ಯೋಗ ಆಕಾಂಕ್ಷಿಗಳಿಗೆ ಒಲಿದ ಉದ್ಯೋಗಗಳು

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯ ಸೇರಿದಂತೆ ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಅನೇಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಅದರಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು), ಹಾಗೂ ಇತರ ಖಾಸಗಿ ವಿಶ್ವವಿದ್ಯಾಲಯ ಮತ್ತು ಶಿಕ್ಷಣ ಸಂಸ್ಥೆಗಳು ಒಳಗೊಂಡಿದ್ದು ಇದರಲ್ಲಿ ಸುಮಾರು ೧೯೭ ವಿದ್ಯಾರ್ಥಿಗಳು ಶರಣಬಸವ ವಿಶ್ವವಿದ್ಯಾಲಯವು ಏರ್ಪಡಿಸಿದ್ದ ಉದ್ಯೋಗ ಮೇಳದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಸಫಲರಾಗಿದ್ದಾರೆ.

ವಿಶ್ವವಿದ್ಯಾಲಯದ ಡೀನ್ ಡಾ.ಲಕ್ಷ್ಮಿ ಪಾಟೀಲ್ ಮಾಕಾ ಅವರು ಹೇಳಿದಂತೆ, ಮಂಗಳವಾರ ನಡೆದ ಒಂದು ದಿನದ ಉದ್ಯೋಗ ಮೇಳದಲ್ಲಿ ೩೦ ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಮತ್ತು ಕೈಗಾರಿಕೆಗಳು ಭಾಗವಹಿಸಿದ್ದವು ಮತ್ತು ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಶರಣಬಸವ ವಿಶ್ವವಿದ್ಯಾಲಯ ಮತ್ತು ಇತರ ಸಂಸ್ಥೆಗಳ ೧೫೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳ ಪ್ರತಿನಿಧಿಗಳು ನಡೆಸಿದ ಆರಂಭಿಕ ಸಂದರ್ಶನಗಳಲ್ಲಿ ಒಟ್ಟು ೩೬೬ ವಿದ್ಯಾರ್ಥಿಗಳ ಕಿರುಪಟ್ಟಿ ಮಾಡಲಾಯಿತು ಮತ್ತು ಅಂತಿಮವಾಗಿ ೧೯೭ ವಿದ್ಯಾರ್ಥಿಗಳನ್ನು ವಿವಿಧ ಕಂಪನಿಗಳು ಮತ್ತು ಕೈಗಾರಿಕೆಗಳಲ್ಲಿ ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡಲಾಯಿತು.

ಕಿವಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಲಹೆ

ಉದ್ಯೋಗ ಮೇಳದಲ್ಲಿ ಉದ್ಯೋಗ ಗಳಿಸಿದ ಒಟ್ಟು ೧೯೭ ವಿದ್ಯಾರ್ಥಿಗಳ ಪೈಕಿ ೧೨೮ ವಿದ್ಯಾರ್ಥಿಗಳು ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಾಗಿದ್ದಾರೆ. ಉದ್ಯೋಗ ಮೇಳದಲ್ಲಿ ಯಶಸ್ವಿಯಾದ ಇತರ ವಿದ್ಯಾರ್ಥಿಗಳು ಗುಲ್ಬರ್ಗ ವಿಶ್ವವಿದ್ಯಾಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು), ಪಿಇಎಸ್ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಇತರ ಸಂಸ್ಥೆಗಳ ವಿದ್ಯಾರ್ಥಿಗಳಾಗಿರುವರು.

ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿರುವ ಕೆಲವು ಕಂಪನಿಗಳು ತಮ್ಮ ಫಲಿತಾಂಶಗಳನ್ನು ತಡೆಹಿಡಿದಿರುವುದರಿಂದ ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಡಾ.ಲಕ್ಷ್ಮೀ ಪಾಟೀಲ ಮಾಕಾ ತಿಳಿಸಿದರು.

ರಂಜಣಗಿ- ಹಾಲಘತ್ತರಗಾ- ತೆರಗಬಾಳ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ಕಾರ್ವಿ ಕಂಪನಿ ಅತಿ ಹೆಚ್ಚು ೩೩ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದ್ದರೆ, ಉಳಿದ ಫ್ಯೂಚರ್ ಫೋಕಸ್ ೨೭, ಯುರೇಕಾ ಫೋರ್ಬ್ಸ್ ೨೬, ಆದಿತ್ಯ ಸೊಲ್ಯೂ?ನ್ಸ್ ೧೬, ಟೀಮ್ ಲೀಸ್ ೧೭, ಕೆಎಸ್ ಬೇಕರ್ಸ್ ೧೧, ಶಂಡಿಡರ್ ಎಲೆಕ್ಟ್ರಿಕಲ್ಸ್ ೦೩, ಇನ್ಫೋ ಸೋರ‍್ಸ್ ಕಾರ್ಪೋರೇಷನ್ ೦೪, ಮತ್ತು ಐಸಿಸಿಎಸ್ ೦೧ ವಿದ್ಯಾರ್ಥಿಗಳಿಗೆ ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡಿರುತ್ತಾರೆ.

emedialine

Recent Posts

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

9 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

9 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

9 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

20 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

20 hours ago