ರಾಯಚೂರು: ಕಲ್ಮಲಾ ಗ್ರಾಮಕ್ಕೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಹಾಗೂ ಎಲ್ಲಾ ಬಸ್ ಗಳ ನಿಲುಗಡೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ನೇತೃತ್ವದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೇ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ತಾಲೂಕಿನ ಕಲ್ಮಲ ಗ್ರಾಮಕ್ಕೆ ಸುಮಾರು 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾಯಚೂರಿಗೆ ಅಬ್ಯಾಸ ಮಾಢಲು ಬರುತ್ತಾರೆ.ದಿನನಿತ್ಯ ಬಸ್ಸಿಗಾಗಿ ಅಲೆಯುವ ಪರಿಸ್ಥಿತಿ ಎದುರಾಗಿದೆ ದೇವದುರ್ಗ ಲಿಂಗಸುಗೂರು ಕಡೆಯಿಂದ ಬರುವ ಬಸ್ಸುಗಳು ತುಂಬಿ ಬರೋದ್ರಿಂದ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ದಿನಾಲೂ 2ತರಗತಿಗಳು ಮಿಸ್ ಆಗಿ ಕಾಲೇಜು ಶಾಲಾ ಕಾಲೇಜುಗಳಿಗೆ ಹೋಗುವ ಪರಿಸ್ಥಿತಿ ಎದುರಾಗಿದೆ.
ಪಿಂಜಾರ್ ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆ ಆಗ್ರಹಿಸಿ ಧರಣಿ
ಕೂಡಲೇ ಕಲ್ಮಲಾ ಗ್ರಾಮಕ್ಕೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಲು ಹಾಗೂ ಹಾಗೂ ಗ್ರಾಮದ ಮೂಲಕ ಹಾದು ಹೋಗುವ ಎಲ್ಲಾ ಬಸ್ಸುಗಳನ್ನು ನಿಲುಗಡೆ ಮಾಡಲು ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿ ಸಾರಿಗೆ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ ಮಾಡಲಾಯಿತು 2 ದಿನದೊಳಗೆ ಸಮಸ್ಯೆ ಬಗೆಹರಿಸದೇ ಇದ್ದರೆ ಕಲ್ಮಾಲಾದಲ್ಲಿ ರಸ್ತೆ ತಡೆ ಮಾಡುವುದರ ಮೂಲಕ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಈ ಮೂಲಕ ಎಚ್ಚರಿಕೆ ನೀಡಿ ಸಾರಿಗೆ ನಿಗಮದ ವಿಭಾಗೀಯ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪಿಂಜಾರ್ ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆ ಆಗ್ರಹಿಸಿ ಧರಣಿ
ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್ ಎಸ್ ಎಫ್ ಐ ಜಿಲ್ಲಾ ಉಪಾಧ್ಯಕ್ಷ ಬಸವರಾಜ ದೀನಸಮುದ್ರ ಜಿಲ್ಲಾ ಮುಖಂಡ ಮೌನೇಶ ಬುಳ್ಳಾಪುರ ಹಾಗೂ ವಿದ್ಯಾರ್ಥಿಗಳ ಪ್ರಜ್ವಲ್, ನರಸಿಂಹ,ಬಸವಪ್ರಭು ವಿನೋದ್, ಜ್ಞಾನ, ಚೈತ್ರಾ, ಸ್ವಾತಿ, ಸೇರಿದಂತೆ ಅನೇಕ ವಿದ್ಯಾರ್ಥಿಗಳು ಸೇರಿದಂತೆ ಪಾಲಕರು ಉಪಸ್ಥಿತರಿದ್ದರು.