ಸುರಪುರ: ತಾಲೂಕಿನ ಅನೇಕ ಗ್ರಾಮಗಳಲ್ಲಿ ಸರಿಯಾದ ವಿದ್ಯುತ್ ಸರಬರಾಜು ಇಲ್ಲದ ಕಾರಣ ರೈತರ ಬೆಳೆಗಳಿಗೆ ನೀರಿನ ತೊಂದರೆಯುಂಟಾಗಿ ಬೆಳೆಗಳು ಒಳಗಲಾರಂಭಿಸಿವೆ ಎಂದು ಆರೋಪಿಸಿ ನಗರದ ರಂಗಂಪೇಟೆಯ ಜೆಸ್ಕಾಂ ಕಚೇರಿ ಮುಂದೆ ಜಾಲಿಬೆಂಚಿ ಗ್ರಾಮದ ರೈತರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ ಮಾತನಾಡಿದ ರೈತರು,ಪೇಠ ಅಮ್ಮಾಪುರ ವಿದ್ಯುತ್ ಸರಬರಾಜು ಶಾಖಾ ಕಚೇರಿ ವ್ಯಾಪ್ತಿಯ ಜಾಲಿಬೆಂಚಿ ಗ್ರಾಮಕ್ಕೆ ಸರಿಯಾದ ವಿದ್ಯುತ್ ಸರಬರಾಜು ಇಲ್ಲದ ಕಾರಣ ರೈತರ ಬೆಳೆಗಳು ಒಣಗುತ್ತಿವೆ.ಅಲ್ಲದೆ ಇನ್ನು ಕೆಲ ದಿನಗಳು ವಿದ್ಯುತ್ ಹೀಗೆ ಮುಂದುವರೆದರೆ ರೈತರು ಎಲ್ಲಾ ಬೆಳೆಗಳನ್ನು ಕಳೆದುಕೊಂಡು ತೀವ್ರ ಸಂಕಷ್ಟಕ್ಕೀಡಾಗಬೇಕಾಗುತ್ತದೆ.
ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಸಲು ನಗರಸಭೆ ಅಧ್ಯಕ್ಷರಿಗೆ ಮನವಿ
ಇದಕ್ಕೆ ಕಾರಣ ಲೈನಮ್ಯಾನ್‌ಗಳ ನಿರ್ಲಕ್ಷ್ಯ ಕಾರಣವಾಗಿದೆ.ಆದ್ದರಿಂದ ನಮಗೆ ಸರಿಯಾಗಿ ವಿದ್ಯುತ್ ಸರಬರಾಜಿಗೆ ಕ್ರಮ ಕೈಗೊಳ್ಳಬೇಕು ಇಲ್ಲದೆ ಹೋದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ತಮ್ಮ ಕಚೇರಿ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ರಸ್ತೆ ಅಗಲಿಕರಣದಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ: ರಾಜಾ ಪಿಡ್ಡನಾಯಕ ಆರೋಪ
ನಂತರ ಜೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಮುಖಂಡರಾದ ಬಸವರಾಜ ಸಾಹು ಅಂಬ್ರೇಶ ಮರಾಠ ಸುಭಾಸ್ ಸಾಹುಕಾರ ಅಂಬ್ರೇಶ ಹಚ್ಚರಡ್ಡಿ ಚಂದ್ರಶೇಖರ ಕುಂಬಾರ ಜಾವೀದ್ ಹುಸೇನ್ ವಿರೇಶ ಕುಂಬಾರ ಮೌನೇಶ ಪಡದಳ್ಳಿ ರವಿ ಕಾಮತ್ ರಾಮು ಬೂದನೂರ ಸೇರಿದಂತೆ ಅನೇಕರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…