ಬಿಸಿ ಬಿಸಿ ಸುದ್ದಿ

ವಿದ್ಯಾರ್ಥಿಗಳು ಎಸ್.ಎಸ್.ಪಿ. ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಕಡ್ಡಾಯ

ಕಲಬುರಗಿ: ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಈಗಾಗಲೇ ಶಿಕ್ಷಣ ಇಲಾಖೆಯಿಂದ ಎನ್.ಎಸ್.ಪಿ. ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ ೨೦೨೧ರ ಮಾರ್ಚ್ ೩೧ ರೊಳಗಾಗಿ ಎಲ್ಲಾ ಅವಶ್ಯಕ ದಾಖಲಾತಿಗಳೊಂದಿಗೆ ಎಸ್.ಎಸ್.ಪಿ. ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕೆಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಮಹಿಮೂದ್ ಅವರು ತಿಳಿಸಿದ್ದಾರೆ.

ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಭಾರತ ಸರ್ಕಾರದ ಎನ್.ಎಸ್.ಪಿ. ಅಡಿಯಲ್ಲಿ ಈಗಾಗಲೇ ಹೊಸದಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಪಿ. ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ https://ssp.karnataka.gov.in ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.

ನಾಳೆ ಖ್ಯಾತ ಹೋರಾಟಗಾರರ ಯೋಗೇಂದ್ರ ಯಾದವ್ ಕಲಬುರಗಿಗೆ

ಅದೇ ರೀತಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ವಿದ್ಯಾರ್ಥಿಗಳು ಭಾರತ ಸರ್ಕಾರದ ಎನ್.ಎಸ್.ಪಿ. ಅಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ ಮತ್ತು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಪಿ. ರಾಜ್ಯ ವಿದ್ಯಾರ್ಥಿವೇತನ https://ssp.postmatirc.karnataka.gov.in ಪೋರ್ಟಲ್‌ದಲ್ಲಿ ಮೇಲ್ಕಂಡ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.

ಶಾಸಕಿ ಕನೀಜ್ ಫಾತೀಮಾ 1.60 ಕೋಟಿ ನೀರಿನ ಟ್ಯಾಂಕ್‌ನ ಕಾಮಗಾರಿಗೆ ಚಾಲನೆ

ವಿದ್ಯಾರ್ಥಿ ವೇತನಕ್ಕಾಗಿ ಎನ್.ಎಸ್.ಪಿ. ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಪಿ. ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಆದ್ದರಿಂದ ಎಲ್ಲಾ ಅರ್ಹ ವಿದ್ಯಾರ್ಥಿಗಳು ಅನ್‌ಲೈನಲ್ಲಿ ಅವಶ್ಯಕ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-247260ಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

3 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

5 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

12 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

12 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

12 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

23 hours ago