ಮಹಿಳಾ ಸ್ವ-ಸಹಾಯ ಗುಂಪುಗಳ ಬಲವರ್ಧನೆಗೆ ಯೋಜನೆಗಳು ಜಾರಿ: ಶಶಿಕಲಾ ಜೊಲ್ಲೆ

2
27

ಬೆಂಗಳೂರು: ರಾಜ್ಯದಲ್ಲಿನ ಮಹಿಳಾ ಸ್ವ-ಸಹಾಯ ಗುಂಪುಗಳ ಬಲವರ್ಧನೆಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ  ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕ ಸಬಲೀಕರಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಅವರು ಇಂದು ವಿಧಾನಪರಿಷತ್ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಪಿ.ಆರ್.ರಮೇಶ್ ಅವರ ಪ್ರಶ್ನೆಗೆ ಉತ್ತರ ನೀಡಿ ಮಾತನಾಡುತ್ತಾ, ಸ್ತ್ರೀ ಶಕ್ತಿ ಯೋಜನೆಯಡಿ 25 ಸಾವಿರದಿಂದ 1 ಲಕ್ಷ ರೂ.ಗಳವರೆಗೆ ಸಾಲವನ್ನು ಪಡೆಯುವ ಸ್ತ್ರೀಶಕ್ತಿ ಗುಂಪುಗಳಿಗೆ ಸಾಲದ ಮೇಲಿನ ಬಡ್ಡಿ ದರಕ್ಕೆ ಶೇ.6ರ ಸಹಾಯ ಧನವನ್ನು ಒದಗಿಸಲಾಗಿದೆ.

Contact Your\'s Advertisement; 9902492681

ಟನ್ ಕಬ್ಬಿಗೆ ರೂ 3500 ನಿಗದಿಗೆ ಕನ್ನಡ ಭೂಮಿ ಆಗ್ರಹ

ಗುಂಪಿನ ಉಳಿತಾಯಕ್ಕೆ ಅನುಗುಣವಾಗಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಸ್ತ್ರೀಶಕ್ತಿ ಸಂಘಗಳಿಗೆ ಗರಿಷ್ಠ 3 ಲಕ್ಷ ರೂ.ಗಳವರೆಗೆ ಹಾಗೂ ಇತರೆ ವರ್ಗದ ಸ್ತ್ರೀಶಕ್ತಿ ಸಂಘಗಳಿಗೆ 2 ಲಕ್ಷ ರೂ.ಗಳ ಬಡ್ಡಿರಹಿತ  ಸಾಲವನ್ನು ಒದಗಿಸಲಾಗುತ್ತಿದೆ.

ಸ್ತ್ರೀಶಕ್ತಿ ಯೋಜನೆಯಡಿ ರಚಿಸಲಾದ ಮಹಿಳಾ ಸ್ವ-ಸಹಾಯ ಗುಂಪುಗಳ ಸ್ಥಿತಿಗತಿಗಳ ಬಗ್ಗೆ ಈವರೆಗೆ ಮೌಲ್ಯಮಾಪನ ಸಮೀಕ್ಷೆ ನಡೆಸಿರುವುದಿಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಸದನದಲ್ಲಿ ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here