ಬೆಂಗಳೂರು: ರಾಜ್ಯದಲ್ಲಿನ ಮಹಿಳಾ ಸ್ವ-ಸಹಾಯ ಗುಂಪುಗಳ ಬಲವರ್ಧನೆಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕ ಸಬಲೀಕರಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
ಅವರು ಇಂದು ವಿಧಾನಪರಿಷತ್ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಪಿ.ಆರ್.ರಮೇಶ್ ಅವರ ಪ್ರಶ್ನೆಗೆ ಉತ್ತರ ನೀಡಿ ಮಾತನಾಡುತ್ತಾ, ಸ್ತ್ರೀ ಶಕ್ತಿ ಯೋಜನೆಯಡಿ 25 ಸಾವಿರದಿಂದ 1 ಲಕ್ಷ ರೂ.ಗಳವರೆಗೆ ಸಾಲವನ್ನು ಪಡೆಯುವ ಸ್ತ್ರೀಶಕ್ತಿ ಗುಂಪುಗಳಿಗೆ ಸಾಲದ ಮೇಲಿನ ಬಡ್ಡಿ ದರಕ್ಕೆ ಶೇ.6ರ ಸಹಾಯ ಧನವನ್ನು ಒದಗಿಸಲಾಗಿದೆ.
ಟನ್ ಕಬ್ಬಿಗೆ ರೂ 3500 ನಿಗದಿಗೆ ಕನ್ನಡ ಭೂಮಿ ಆಗ್ರಹ
ಗುಂಪಿನ ಉಳಿತಾಯಕ್ಕೆ ಅನುಗುಣವಾಗಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಸ್ತ್ರೀಶಕ್ತಿ ಸಂಘಗಳಿಗೆ ಗರಿಷ್ಠ 3 ಲಕ್ಷ ರೂ.ಗಳವರೆಗೆ ಹಾಗೂ ಇತರೆ ವರ್ಗದ ಸ್ತ್ರೀಶಕ್ತಿ ಸಂಘಗಳಿಗೆ 2 ಲಕ್ಷ ರೂ.ಗಳ ಬಡ್ಡಿರಹಿತ ಸಾಲವನ್ನು ಒದಗಿಸಲಾಗುತ್ತಿದೆ.
ಸ್ತ್ರೀಶಕ್ತಿ ಯೋಜನೆಯಡಿ ರಚಿಸಲಾದ ಮಹಿಳಾ ಸ್ವ-ಸಹಾಯ ಗುಂಪುಗಳ ಸ್ಥಿತಿಗತಿಗಳ ಬಗ್ಗೆ ಈವರೆಗೆ ಮೌಲ್ಯಮಾಪನ ಸಮೀಕ್ಷೆ ನಡೆಸಿರುವುದಿಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಸದನದಲ್ಲಿ ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…