ಬಿಸಿ ಬಿಸಿ ಸುದ್ದಿ

ವಸತಿ ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ : ಶ್ರೀಮಂತ ಪಾಟೀಲ್

ಬೆಂಗಳೂರು: ಅಲ್ಪಸಂಖ್ಯಾತರ  ಕಲ್ಯಾಣ ಇಲಾಖೆಯಡಿಯಲ್ಲಿ 113 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ವಸತಿ ಶಾಲೆಗಳಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಅವಶ್ಯಕತೆಗೆ ಅನುಗುಣವಾಗಿ ಕಲ್ಪಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಬಾಳಸಾಹೇಬ ಪಾಟೀಲ್ ತಿಳಿಸಿದರು.

ಅವರು ಇಂದು ವಿಧಾನಪರಿಷತ್ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಉತ್ತರ ನೀಡಿ ಮಾತನಾಡುತ್ತಾ, ಶಿಕ್ಷಣ ಇಲಾಖೆಯಿಂದ ವರ್ಗಾವಣೆಗೊಂಡ ಐದು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಲ್ಲಿನ ಬೋಧಕ-ಬೋಧಕೇತರ ಸಿಬ್ಬಂದಿಗಳಿಗೆ ವೇತನ ಬಡ್ತಿ ನೀಡದಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಮಹಿಳಾ ಸ್ವ-ಸಹಾಯ ಗುಂಪುಗಳ ಬಲವರ್ಧನೆಗೆ ಯೋಜನೆಗಳು ಜಾರಿ: ಶಶಿಕಲಾ ಜೊಲ್ಲೆ

ಸಿಬ್ಬಂದಿಗಳನ್ನು ಸರ್ಕಾರಿ ಸೇವೆಯಲ್ಲಿ ವಿಲೀನಾತಿಗೊಳಿಸದಿರುವುದರಿಂದ ಇವರು ಕರ್ನಾಟಕ ನಾಗರೀಕಾ ಸೇವಾ ನಿಯಮಗಳ ವ್ಯಾಪ್ತಿಯೊಳಗೆ ಪರಿಗಣಿಸಲ್ಪಡದ ಕಾರಣ ಸದರಿ ಸಿಬ್ಬಂದಿಗಳಿಗೆ ಕಾಲಬದ್ಧ ಮುಂಬಡ್ತಿ ಮಂಜೂರು ಮಾಡಲು ಕರ್ನಾಟಕ ನಾಗರೀಕ ಸೇವಾ ನಿಯಮ 1983 ರಲ್ಲಿ ಅವಕಾಶವಿರುವುದಿಲ್ಲ.

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ-ಕಾಲೇಜು ಮತ್ತು ಮಾದರಿ  ವಸತಿ ಶಾಲೆಗಳಲ್ಲಿನ ಬೋಧಕ-ಬೋಧಕೇತರ ಸಿಬ್ಬಂದಿಗಳು 2016-17ನೇ ಸಾಲಿನಿಂದ ನೇರ ನೇಮಕಾತಿ ಮೂಲಕ ನೇಮಕಾತಿ ಹೊಂದಿದ್ದು, ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ವಯ ಸದರಿ ನೌಕರರು ನೇಮಕಗೊಂಡ ಹುದ್ದೆಯಲ್ಲಿ ಯಾವುದೇ ಮುಂಬಡ್ತಿ ಹೊಂದದೆ 10 ವರ್ಷಗಳ ಸೇವೆಯನ್ನು ಪೂರೈಸಿದ್ದಲ್ಲಿ ಅವರಿಗೆ ಕಾಲಮಿತಿ ವೇತನ ಬಡ್ತಿಯನ್ನು ನೀಡಬಹುದು.

ಮಸ್ಜಿದ್ ಮೌಲಾನಾ, ಮೌಜನ್ ಗಳ ಖಾತಗೆ ಹಣ ಪಾವತಿಗೆ ಆಗ್ರಹ

ಈ ಹಿನ್ನೆಲೆಯಲ್ಲಿ ಸದರಿ ನೌಕರರು 10 ವರ್ಷಗಳ ಸೇವೆಯನ್ನು ಪೂರೈಸದಿರುವುದರಿಂದ ಕಾಲಮಿತಿ ವೇತನ ಬಡ್ತಿಗೆ ಅರ್ಹರಿರುವುದಿಲ್ಲ ಎಂದು ಸದನಕ್ಕೆ ಮಾಹಿತಿ ನೀಡಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

24 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago