ಸುರಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಾವಯವ ಕೃಷಿ ಬಗ್ಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಸಂವಾದಕರಾಗಿ ಆಗಮಿಸಿರುವ ಮಾನವ ಸಂಪನ್ಮೂಲ ವ್ಯಕ್ತಿಗಳಾದ ಬಸ್ಸಯ್ಯ ಹಿರೇಮಠ ಇವರು ಸಾವಯವ ಕೃಷಿ ಪದ್ಧತಿ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಮಾಹತಿಯನ್ನು ನೀಡಿದರು ಮತ್ತು ಸಾವಯವ ಕೃಷಿ ಪದ್ಧತಿ ಬಗ್ಗೆ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಸಾವಯವ ಕೃಷಿಯಿಂದ ಭೂಮಿಯು ಹೆಚ್ಚು ಇಳುವರಿಯನ್ನು ಕೊಡುವ ಮೂಲಕ ಆಧುನಿಕ ಜಗತ್ತಿನಲ್ಲಿ ಹಲವು ಕಾಯಿಲೆಗಳು ನಿವಾರಣೆಗೆ ಮತ್ತು ಈಗಿನ ಮಕ್ಕಳ ಆರೋಗ್ಯ ದೃಷ್ಠಿಯಿಂದ ಸಾವಯವ ಕೃಷಿ ಪದ್ದತಿಯು ಪೂರಕವಾಗಿದೆ ಹೇಳಿದರು.
ಮುಖ್ಯ ಅತಿಥಿಗಳಾಗಿದ್ದ ಡಾ.ರವೀಂದ್ರಕುಮಾರ ಗುಂಡಪ್ಪಗೋಡ ಕೃಷಿ ವಿಜ್ಞಾನಿಗಳು ಕೃಷಿ ವಿಜ್ಞಾನ ಕೇಂದ್ರ ಕಲಬುರಗಿ ಇವರು ಮಾತನಾಡಿ, ನುಗ್ಗೆ ಗಿಡದ ತಪ್ಪಲು ಸೇವಿಸುವುದರಿಂದ ಹಲವು ಕಾಯಿಲೆಗಳಿಗೆ ಉತ್ತಮ ಔಷಧವಾಗಿದೆ. ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ನುಗ್ಗೆಯ ಪೌಡರ ಅವಶ್ಯಕವಾಗಿದೆ ಎಂದು ಹೇಳಿದರು. ನುಗ್ಗೆ ಕಾಯಿ ಊಟದಲ್ಲಿ ಬಳಸುವುದರಿಂದ ಕೀಲು ಸಂಬಂದಿತ ಕಾಯಿಲೆಗಳು ಮತ್ತು ಕ್ಯಾನಸರ್‌ನಂತ ಮಾರಕ ಕಾಯಿಲೆಗಳಿಂದ ಗುಣಮುಖರಾಗುತ್ತಾರೆ ಎಂದು ಹೇಳಿದರು.
ಇನ್ನೊರ್ವ ಮುಖ್ಯ ಅತಿಥಿಗಳಾಗಿ ಚನ್ನಬಸವ ಹಿರೇಮಠ ವೇದಿಕೆ ಮೇಲಿದ್ದರು. ದೊಡ್ಡಪ್ಪ ಎಸ್ ನಿಷ್ಠಿ ಅಧ್ಯಕ್ಷತೆ ವಹಿಸಿದ್ದರು, ಮೋಹನ ರೆಡ್ಡಿ ದೇಸಾಯಿ ನಿರೂಪಿಸಿದರು,ಪ್ರಾಂಶುಪಾಲ ಡಾ. ರವೀಂದ್ರಕುಮಾರ ನಾಗರಾಳೆ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಭೋಧಕ ಮತ್ತು ಭೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…