ಕಲಬುರಗಿ: ದೇಶದಲ್ಲಿ ರೈತರ ಹೋರಾಟ ನಡೆಯುತ್ತಿದೆ ದೇಶದ ಪ್ರಧಾನ ಮಂತ್ರಿಗಳು ರೈತರಿಗೆ ಮೂರು ಕೃಷಿ ಕಾನೂನುಗಳು ಉಡುಗೊರೆಯಾಗಿ ನೀಡುತ್ತಿದ್ದೇನೆ ರೈತರೆಲ್ಲರ ಆದಾಯ ದ್ವೀಗುಣ ಆಗುತ್ತೆ ಅಂತ ಬುರುಡೆ ಬಿಡುತ್ತಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರಾದ ಹಾಗೂ ಖ್ಯಾತ ಹೋರಾಟಗಾರರಾದ ಯೋಗೇಂದ್ರ ಯಾದವ್ ಹೇಳಿದರು.
ಅವರು ನಗರದ ಗಂಜ್ ಪ್ರದೇಶದ ಎಪಿಎಂಸಿ ಆವರಣದಲ್ಲಿ ಶುಕ್ರವಾರ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ದಲಿತ, ರೈತರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಮಹಿಳಾ ಸಂಘಟನೆಯ ಸಮನ್ವ ಸಮಿತಿಯ ವತಿಯಿಂದ ಆಯೋಜಿಸಿದ ‘ಬೆಂಬಲ ಬೆಲೆ ಕೊಡಿ ಆಂದೋಲನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಟನ್ ಕಬ್ಬಿಗೆ ರೂ 3500 ನಿಗದಿಗೆ ಕನ್ನಡ ಭೂಮಿ ಆಗ್ರಹ
ರೈತರಿಗೆ ಬೆಂಬಲ ಬೆಲೆ ಕೊಡಿ ಎಂಬ ಹಕ್ಕಿನ ಹೋರಾಟ ಪ್ರಾರಂಭವಾಗಿದೆ. ಈ ಹೋರಾಟ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಾಗೂ ಕೃಷಿ ಭೂಮಿ ಉಳಿವಿಗಾಗಿ ಅವಶ್ಯಕವಾಗಿದೆ. ಪ್ರೊಫೆಸರ್ ನಂಜುಂಡಸ್ವಾಮಿ ಕಟ್ಟಿದ ರೈತ ಸಂಘಟನೆ ಇದೆ ಕರ್ನಾಟಕದ ಕಲಬುರಗಿಯಿಂದಲ್ಲೆ ಬೆಂಬಲ ಬೆಲೆ ಕೊಡಿಸಿ ಅಭಿಯಾನ ಆರಂಭಿಸಿದ್ದೇವೆ ಎಂದು ತಿಳಿಸಿದರು.
ಮೂರು ಕಪ್ಪು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ನಾಲ್ಕು ದಿಕ್ಕುಗಳಲ್ಲಿ ರೈತರು ಕುಳಿತಿದ್ದಾರೆ. ನೂರು ದಿನಗಳು ಕಳೆದಿವೆ ಆದರೂ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದರು.
ಕಡಲೆಗೆ 5,100 ರೂ. ಬೆಂಬಲ ಸಿಗಬೇಕು. ಆದರೆ, ಇಲ್ಲಿ ಈಗ 4,800 ರೂ.ಗೆ ಕಡಲೆ ಮಾರಾಟವಾಗುತ್ತದೆ ಮೋದಿ ಅವರೇ ಬೆಂಬಲ ಬೆಲೆ ಕೊಡಿಸಿ ರೈತರು ಬೆಳೆದ ಬೆಳಗ್ಗೆ ಸರಿಯಾದ ಬೆಂಬಲ ಬೆಲೆ ಸಿಗುತ್ತಿಲ್ಲ. ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಆಗಿದ್ದಾಗ ಡಾ.ಮನಮೋಹನ್ ಸಿಂಗ್ ಗೆ ಬೆಂಬಲ ಬೆಲೆ ಕಾನೂನು ಮಾಡಿ ಎಂದು ಪತ್ರ ಬರೆದಿದ್ದೀರಿ. ಆ ಮಾತನ್ನೇ ಇಂದು ನಾವು ಕೇಳುತ್ತಿದ್ದೇವೆ ಕಾನೂನು ಮಾಡಿ ಎಂದು ಪ್ರಧಾನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕರಾದ ಬಿಆರ್ ಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು. ಶೌಕತ್ ಅಲಿ ಆಲೂರ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಹಾರದ ದೀಪಕ್ ಲಂಬಾ, ಪಂಜಾಬ್ ನ ಸದ್ದಾಂ ಸಿಂಗ್ , ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಎಚ್ ಕೆಸಿಸಿಐ ಮಾಜಿ ಅಧ್ಯಕ್ಷ ಅಮರನಾಥ ಪಾಟೀಲ್, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಜನವಾದಿ ಮಹಿಳಾ ಸಂಘಟನೆಯ ಕೆ ನೀಲಾ, ಚಾಮರಾಜ ಪಾಟೀಲ್, ಶರಣಬಸಪ್ಪ ಮಮಶೆಟ್ಟಿ , ಮೌಲಾ ಮುಲ್ಲಾ, ಮಹಿಳೆಯರು ಸೇರಿದಂತೆ ಮುಂತಾದವರು ಭಾಗವಹಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…