ವಾಡಿ: ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷರು, ನಿವೃತ್ತ ಕೃಷಿ ಅಧಿಕಾರಿಗಳು, ವೀರಶೈವ ಸಮಾಜದ ಹಿರಿಯ ಮುಖಂಡ ಕಲ್ಯಾಣರಾವ ಶೆಳ್ಳಗಿ (೭೨) ಶುಕ್ರವಾರ ನಿಧನರಾದರು. ಮೃತರಿಗೆ ಪತ್ನಿ, ಪುತ್ರಿ, ನಾಲ್ವರು ಪುತ್ರರು ಹಾಗೂ ಅಪಾರ ಬಂಧು ಬಳಗ ಇದ್ದಾರೆ. ಶನಿವಾರ ಮದ್ಯಾಹ್ನ ೨:೦೦ ಗಂಟೆಗೆ ವಾಡಿ ನಗರದ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮೃತರ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಸಂತಾಪ: ರಾವೂರ ಮಠದ ಶ್ರೀಸಿದ್ಧಲಿಂಗ ದೇವರು, ಹಳಕರ್ಟಿ ಮಠದ ಶ್ರೀಮುನೀಂದ್ರ ಸ್ವಾಮೀಜಿ, ಶಾಸಕ ಪ್ರಿಯಾಂಕ್ ಖರ್ಗೆ, ಮಾಜಿ ಶಾಸಕ ವಾಲ್ಮೀಕಿ ನಾಯಕ, ಬಿಜೆಪಿ ಅಧ್ಯಕ್ಷ ಬಸವರಾಜ ಪಂಚಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೆಮೂದ್ ಸಾಹೇಬ, ಜಂಗಮ ಸಮಾಜದ ತಾಲೂಕು ಅಧ್ಯಕ್ಷ ನೀಲಯ್ಯಸ್ವಾಮಿ ಮಠಪತಿ, ವೀರಶೈವ ಸಮಾಜದ ಅಧ್ಯಕ್ಷ ಸಿದ್ದಣ್ಣ ಕಲಶೆಟ್ಟಿ, ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ, ಶಿಕ್ಷಣ ಉಳಿಸಿ ಸಮಿತಿ ಜಿಲ್ಲಾ ಸಂಚಾಲಕ ವೀರಭದ್ರಪ್ಪ ಆರ್.ಕೆ, ಎಪಿಎಂಸಿ ಮಾಜಿ ಅಧ್ಯಕ್ಷ ಶಂಕ್ರಯ್ಯಸ್ವಾಮಿ ಮದರಿ, ಪುರಸಭೆ ವಿರೋಧ ಪಕ್ಷದ ನಾಯಕ ಭೀಮಶಾ ಜಿರೊಳ್ಳಿ, ಶ್ರೀಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಶ್ರೀಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಸರ್ವ ಪದಾಧಿಕಾರಿಗಳು, ಶಿಕ್ಷಕರು, ಸಿಬ್ಬಂದಿಗಳು ಸೇರಿದಂತೆ ವಿವಿಧ ಸಮಾಜದ ಮುಖಂಡರು ಮೃತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.