ಬಿಸಿ ಬಿಸಿ ಸುದ್ದಿ

ಕುಲಪತಿಗಳ ನೇಮಕದಂತೆ ಕ.ಕ.ಕಲ್ಯಾಣಕ್ಕಾಗಿ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಲು ಆಗ್ರಹ

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲದ ಕುಲಪತಿಗಳ ನೇಮಕದಲ್ಲಿ ರಾಜಕೀಯ ಪ್ರದರ್ಶಿಸುವಂತೆ ಕಲ್ಯಾಣ ಕರ್ನಾಟಕದ ಕಲ್ಯಾಣಕ್ಕಾಗಿ ಪಕ್ಷಭೇದ ಮರೆತು ಇದೇ ಮಾದರಿಯಲ್ಲಿ ರಾಜಕೀಯ ಇಚ್ಛಾಶಕ್ತಿ ವ್ಯಕ್ತಪಡಿಸಲು ಕಲ್ಯಾಣ ಕರ್ನಾಟಕ ಜನಪ್ರತಿನಿಧಿಗಳಲ್ಲಿ ಹಿರಿಯ ಹೋರಾಗಾರರಾದ ಲಕ್ಷ್ಮಣ ದಸ್ತಿ ಅವರು ಆಗ್ರಹಿಸಿದರು.

ನಗರದ ಹಿಂದಿ ಪ್ರಚಾರ ಸಭಾದಲ್ಲಿ ಇಂದು ಬಳಗದ ಸಭೆಯಲ್ಲಿ ಮಾತನಾಡಿದ ಅವರು ಕಲ್ಯಾಣ ಕರ್ನಾಟಕ ಭಾಗದ ಪ್ರತಿಷ್ಠಿತ ವಿಶ್ವವಿದ್ಯಾಲಯವಾದ ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರಗಿ ಸ್ಥಾಪನೆಯಾಗಿ 40 ವರ್ಷ ಇತಿಹಾಸವುಳ್ಳ ಈ ವಿಶ್ವವಿದ್ಯಾಲಯಕ್ಕೆ ಪ್ರಪಥಮ ಬಾರಿಗೆ ಸ್ಥಳೀಯರಿಗೆ ಕುಲಪತಿಗಳಾಗಿ ನೇಮಕ ಮಾಡಲಾಗಿದೆ.ಇದು ಸಂತಸದ ವಿಷಯವಾಗಿದೆ.

ಸೈದಪ್ಪ ಹೊಸಮನಿ ಎಸ್ಡಿಎಂಸಿ ಅಧ್ಯಕ್ಷರಾಗಿ ಆಯ್ಕೆ

ಈ ಹಿನ್ನೆಲೆಯಲ್ಲಿ ನೇಮಕಕ್ಕೆ ರಾಜಕೀಯ ನಾಯಕರ ಇಚ್ಛಾಶಕ್ತಿ ಕಾರಣವಾಗಿದೆ.ಅದೇ ರೀತಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಮ್ಮ ಜನಪ್ರತಿನಿಧಿಗಳು ಪ್ರಕ್ಷಾತೀತವಾಗಿ ರಾಜಕೀಯ ಹಿತಾಸಕ್ತಿ ತೊರಬೇಕು ಎಂದರು.

ಕಲ್ಯಾಣ ಕರ್ನಾಟಕದ ಸಂಸದರಿಗೆ ಶಾಸಕರಿಗೆ ಹಾಗೂ ನೂತನ ಕುಲಪತಿಗಳಿಗೆ ಆಹ್ವಾನಿಸಿ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ನಿರ್ಣಯಿಸಲಾಗಿದೆ. ಅಭಿನಂದನೆಗಳು ಸಲ್ಲಿಸಲು ಮಾರ್ಚ್ ಕೊನೆವಾರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಬಳಗದ ಅಧ್ಯಕ್ಷ ಲಕ್ಷ್ಮಣ ದಸ್ತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.ಮುಂದಿನ ಸಭೆಯಲ್ಲಿ ಅಭಿನಂದನಾ ಕಾರ್ಯಕ್ರಮದ ಸ್ಥಳ ಹಾಗೂ ದಿನಾಂಕ ನಿಗದಿಪಡಿಸಲಾಗುವುದು ಎಂದು ಬಳಗದ ಪ್ರಧಾನ ಕಾರ್ಯದರ್ಶಿಗಳಾದ ಡಾ.ಎ.ಎಸ್.ಭದ್ರಶೆಟ್ಟಿ ಹಾಗೂ ಲಿಂಗರಾಜ ಸಿರಗಾಪೂರ ತಿಳಿಸಿದ್ದಾರೆ.

ಭ್ರಷ್ಟ ಆಡಳಿತ ಫಲ; ಕಲಬುರಗಿ ಜಿಲ್ಲೆ ಅಕ್ರಮಗಳ ತಾಣ:  ಶಾಸಕ ಖರ್ಗೆ ಆಕ್ರೋಶ

ಈ ಸಂದರ್ಭದಲ್ಲಿ ಮಾಜಿ ಮಹಾಪೌರರಾದ ದಶರದ ಬಾಬು ವಂಟಿ.ಮುಖಂಡರುಗಳಾದ ಶಾಮ ನಾಟೀಕರ, ಅಶೋಕ್ ಗೂರುಜಿ, ಲತಾ ರಾಠೋಡ,ಸಿದ್ದಾರೆಡ್ಡಿ ಬಲಕಲ, ಮುತ್ತಣ್ಣ ನಾಡಗೇರಿ,ಎಂ.ಬಿ.ನಿಂಗಪ್ಪ,ಮಲ್ಲಿನಾಥ ಸಂಗಶೆಟ್ಟಿ, ಚಂದ್ರಶೇಖರ ದೊಡ್ಡಮನಿ,ಶರಣಬಸವ ದೊಡ್ಡಮನಿ, ಶಿವಲಿಂಗ ಬಂಡಕ, ಮಹ್ಮದ್ ಮಿರಾಜುದ್ದಿನ್, ನಿಂಗಣ್ಣ ಉದನೂರ, ಪರಮೇಶ್ವರ ಹಡಪದ,ಅಮಿತಕುಮಾರ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago