ಕಲಬುರಗಿ: ತಾಲೂಕಿನ ಹೆರೂರು ಬಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆರೂರು ಗ್ರಾಮದಲ್ಲಿ ಇಂದು ಗ್ರಾಮ ಪಂಚಾಯತ ಹೆರೂರು ಬಿ ಹಾಗೂ ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಹಾಗೂ ರೂಢಾ ಸಂಸ್ಥೆ ಧಾರವಾಡ ರವರ ಸಂಯುಕ್ತಾಶ್ರಯದಲ್ಲಿ ಜಲ ಜೀವನ ಮಿಷನನ ಅಡಿಯಲ್ಲಿ ಕಾರ್ಯಾತ್ಮಕ ಮನೆ ನಳ ಸಂಪರ್ಕ ನೀಡುವುದಕ್ಕೆ ಸಮುದಾಯ ಮಾಲಿಕತ್ವ ವಹಿಸುವ ಸಮುದಾಯ ವಂತಿಕೆ ಸಂಗ್ರಹಣಾ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹೆರೂರು ಗ್ರಾಮವು ಟೆಂಡರ್ ಪ್ರಕ್ರಿಯೆ ಹಂತದಲ್ಲಿದ್ದು ಸದರಿ ಟೆಂಡರ್ ಮೊತ್ತದಲ್ಲಿ ಸರಕಾರದಿಂದ ೯೦% ಅನುದಾನದ ನೀಡುತ್ತಿದ್ದು ಬಾಕಿ ಉಳಿದ ೧೦% ಪ್ರತಿ ಶತ ಅನುದಾನವನ್ನು ಸಮುದಾಯ ವಂತಿಕೆ ರೂಪದಲ್ಲಿ ಗ್ರಾಮಸ್ಥರಿಂದ ಸಂಗ್ರಹಿಸುವ ನಿಟ್ಟಿನಲ್ಲಿ ಮತ್ತು ಸಮುದಾಯದವರು ಯೋಜನೆಯಲ್ಲಿ ಭಾಗೀದಾರರಾಗಲು ಹಾಗೂ ಮಾಲೀಕತ್ವ ವಹಿಸಲು ಕಲಬುರಗಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ ಸಭೆಯ ಮೂಲಕ ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಟ್ಟರು.
ದೇವರಗೋನಾಲ ತಾಪಂ ಕ್ಷೇತ್ರ ಸ್ಥಳಾಂತರಿಸದಂತೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ
ಕಾರ್ಯಕ್ರಮದಲ್ಲಿ ಜಲ ಜೀವನ ಮಿಷನ ಯೋಜನೆಯ ಡಿಪಿಎಂ. ಡಾ.ರಾಜು ಕಂಬಾಳಿಮಠ ರವರು ಮಾತನಾಡಿ ಜಲ ಜೀವನ ಮಿಷನ್ ಯೋಜನೆ ಯಶಸ್ವಿಯಾಗಬೇಕಾದರೆ ಸಮುದಾಯದ ಪಾತ್ರ ಅವಶ್ಯಕವಾಗಿದೆ, ಜಲ ಜೀವನ ಮಿಷನ ಯೋಜನೆಯಡಿಯಲ್ಲಿ ವೈಯಕ್ತಿಕ ಶೌಚಾಲಯ , ಮನೆ ಅಥವಾ ಸಮುದಾಯ ಬಚ್ಚಲು ಗುಂಡಿ, ನಿರ್ಮಾಣ ಮಾಡಿಕೊಳ್ಳುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಆನಂದ ದೊಡ್ಡಮನಿ ಮಾತನಾಡಿ ಗ್ರಾಮಸ್ಥರು ಜಲ ಜೀವನ ಮಿಷನ್ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದರು, ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಅನೀತಾ ಎಸ್ ದೊಡ್ಡಮನಿ ರವರ ಸಮ್ಮುಖದಲ್ಲಿ ಉಪಸ್ಥಿತರಿದ್ದ ಸದಸ್ಯರು ಸಮುದಾಯವ ವಂತಿಕೆ ರೂ.೪೫೫೦೦/- ರೂ.ಗಳನ್ನು ನೀಡಿದರು.
ಕುಲಪತಿಗಳ ನೇಮಕದಂತೆ ಕ.ಕ.ಕಲ್ಯಾಣಕ್ಕಾಗಿ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಲು ಆಗ್ರಹ
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ ಸದಸ್ಯರಾದ ಸೈಯದ ಸಾಬ್ ಗ್ರಾಮ ನೀರು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಚಂದಮ್ಮ ನಿಂಗಣ್ಣ, ಸಮಿತಿ ಉಪಾಧ್ಯಕ್ಷರಾದ ವಿಜಯಕುಮಾರ ಬೀರಪ್ಪ , ರೂಡಾ ಸಂಸ್ಥೆಯ ತಂಡದ ನಾಯಕರಾದ ಸಂತೋಷ ಮೂಲಗೆ, ಶ್ರವಣಕುಮಾರ, ಎಸ್.ದೊಡ್ಡಮನಿ ಇದ್ದರು. ಶಾಲಾ ಮತ್ತು ಗ್ರಾಮಸ್ಥರ ಮೂಲಕ ಜಾಥ ಏರ್ಪಡಿಸಲಾಗಿತ್ತು , ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಯರು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…