ಶಹಾಪುರ :ಸಗರದ ಕಲಾನಿಕೇತನ ಟ್ರಸ್ಟ್ ಹಾಗೂ ದೇವರಗೊನಾಲ ಸಂಜು ಪ್ರಕಾಶನ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ದೇಸಿ ಸಂಭ್ರಮ ಹಾಗೂ ಸುಮಧುರ ಗೀತೆಗಳ ಗಾಯನ ಅಂಗವಾಗಿ ಸಾಹಿತಿ ಈಶ್ವರ ಶಹಪುರಕರ್ ರಚಿಸಿರುವ ‘ಹಾಡು ಬಾ ಕೋಗಿಲೆ’ ಕೃತಿ ಬಿಡುಗಡೆ ಸಮಾರಂಭವನ್ನು ಶಹಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ ಅಧ್ಯಕ್ಷರಾದ ಬಸವರಾಜ ಸಿನ್ನೂರ ಪ್ರಕಟಣೆಗೆ ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ವಿಶ್ರಾಂತ ಹೆಚ್ಚುವರಿ ಮಹಾನಿರ್ದೇಶಕರು ದೂರದರ್ಶನ ಕೇಂದ್ರ ದಕ್ಷಿಣ ಭಾರತದ ನಾಡೋಜ ಡಾ.ಮಹೇಶ್ ಜೋಶಿ ಉದ್ಘಾಟಿಸಲಿದ್ದು,ವಿಶ್ರಾಂತ ಉಚ್ಛ ಹೈಕೋರ್ಟ್ ನ್ಯಾಯಮೂರ್ತಿಗಳಾದ ಶ್ರೀ ಅರಳಿ ನಾಗರಾಜ್ ಅವರು ಕೃತಿ ಬಿಡುಗಡೆಗೊಳಿಸಲಿದ್ದು,ಹಿರಿಯ ಸಾಹಿತಿ ಸಿದ್ಧರಾಮ ಹೊನಕಲ್ ಕೃತಿ ಕುರಿತು ಸವಿಸ್ತಾರವಾಗಿ ಮಾತನಾಡಲಿದ್ದಾರೆ.
ಈ ಸಮಾರಂಭದಲ್ಲಿ ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹಿರಿಯ ಮುಖಂಡರಾದ ಚಂದ್ರಶೇಖರ್ ಸಾಹು,ಆರಬೋಳ,ಚಾಲನೆ ನೀಡಲಿದ್ದು,ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಸನಗೌಡ ಮಾಲಿಪಾಟೀಲ್ ಸಗರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ,ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಸಿದ್ದಲಿಂಗಣ್ಣ ಆನೇಗುಂದಿ ಅಧ್ಯಕ್ಷತೆ ವಹಿಸಿಕೊಳ್ಳುವರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಹಣಮಂತರಾಯಗೌಡ ದಳಪತಿ,ಸುರುಪುರ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷರಾದ ಬಸವರಾಜ ಜಮದ್ರಖಾನಿ,ಹಿರಿಯ ಸಾಹಿತಿಗಳಾದ ಡಾ,ಅಬ್ದುಲ್ ಕರೀಂ ಕನ್ಯಾಕೋಳೂರ ಸಾಹಿತಿಗಳು ಹಾಗೂ ಪತ್ರಕರ್ತರಾದ ಶಿವರಂಜನ್ ಸತ್ಯಂಪೇಟೆ,ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಲಿಂಗಣ್ಣ ಪಡಶೆಟ್ಟಿ,ಖ್ಯಾತ ಉದ್ದಿಮೆದಾರರಾದ ಬಸವರಾಜ್ ಹಿರೇಮಠ್,ಜಿಲ್ಲಾ ನೌಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಆರ್. ಎಂ.ನಾಟೇಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನಂತರ ಸುಮಧುರ ಗೀತೆಗಳ ಗಾಯನ ಹಾಗೂ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳ ಜತೆಗೆ ನಾಡಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ಕೂಡ ಹಮ್ಮಿಕೊಳ್ಳಲಾಗಿದೆ ಆದ್ದರಿಂದ ಸಾಹಿತಿಗಳು,ಪ್ರಗತಿಪರ,ಚಿಂತಕರು,
ಕಲಾವಿದರು,ಕವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದ್ದಾರೆ.