ಬಿಸಿ ಬಿಸಿ ಸುದ್ದಿ

ನಿರಂತರ ಅಧ್ಯಯನ, ಸಂಶೋಧನೆಯ ಗುಣ ಅಳವಡಿಸಿಕೊಳ್ಳಿ: ಡಾ.ಉಮೇಶ ಜಾಧವ

ಕಲಬುರಗಿ: ಸೋಲು ಗೆಲುವಿನ ಮೊದಲ ಮೆಟ್ಟಿಲು, ಹೀಗಾಗಿ ನಿರಂತರ ಅಧ್ಯಯನ, ಸಂಶೋಧನೆಯ ಗುಣ ಅಳವಡಿಸಿಕೊಳ್ಳವುದು ವಿದ್ಯಾರ್ಥಿ ಜೀವನಕ್ಕೆ ಅಗತ್ಯ ಎಂದು ಸಂಸದ ಡಾ.ಉಮೇಶ ಜಾಧವ ಅವರು ಅಭಿಪ್ರಾಯಪಟ್ಟರು.

ಭಾನುವಾರ ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಕಲಬುರಗಿ ಪ್ರಾದೇಶಿಕ ಕಚೇರಿಯಲ್ಲಿನ ಸೆಮಿನಾರ್ ಹಾಲ್ ನಲ್ಲಿ 35ನೇ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಶಹಾಪುರ ನಗರಕ್ಕೆ ನಾಡೋಜ ಮಹೇಶ್ ಜೋಷಿ

ಕೋವಿಡ್-19 ವಿರುದ್ಧದ ಹೋರಾಟಕ್ಕಾಗಿ ವ್ಯಾಕ್ಸಿನ್ ಕಂಡುಹಿಡಿಯಲು ಇಡೀ ಜಗತ್ತೇ ಶ್ರಮಿಸುತ್ತಿದ್ದಾಗ, ಭಾರತವು ಅತ್ಯಂತ ಪರಿಣಾಮಕಾರಿ ವ್ಯಾಕ್ಸಿನ್ ನನ್ನು ಸಂಶೋಧಿಸಿದೆ. ಈ ಶ್ರೇಯಸ್ಸು ನಮ್ಮ ವಿಜ್ಞಾನಿಗಳಿಗೆ ಸಲ್ಲಬೇಕು ಎಂದು ಹೆಮ್ಮೆ ಪಟ್ಟರು. ಹಲವು ವೈಜ್ಞಾನಿಕ ಕ್ರಾಂತಿಗೆ ಭಾರತದ ವಿಜ್ಞಾನಿಗಳು ಸಾಕ್ಷಿಯಾಗಿದ್ದಾರೆ ಎಂದು ಶ್ಲಾಘಿಸಿದರು.

ಪ್ರಸ್ತುತ ವಿಜ್ಞಾನ, ತಂತ್ರಜ್ಞಾನ ಸಾಕಷ್ಟು ಮುಂದುವರಿದಿದ್ದು, ವಿದ್ಯಾರ್ಥಿಗಳು ಎಂಜಿಯರ್, ಡಾಕ್ಟರ್ ಏನೇ ಆಗಲು ಬಯಸಲಿ. ಆದರೆ, ಹಣಕ್ಕಿಂತ ಸಮಯಕ್ಕೆ ಹೆಚ್ಚು ಒತ್ತುಕೊಟ್ಟು ಅವರು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಂಸದರು ಸಲಹೆ ನೀಡಿದರು.

ಜೇವರ್ಗಿ ರಾಷ್ಟೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ವ್ಯಕ್ತಿ ಸಾವು

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಪ್ರಾದೇಶಿಕ ಆಯುಕ್ತರಾದ ಡಾ.ಎನ್.ವಿ.ಪ್ರಸಾದ ಅವರು ಮಾತನಾಡಿ, ಜೀವ ವಿಜ್ಞಾನ, ಸಾಮಾಜಿಕ ಅಭಿವೃದ್ಧಿ, ಸಂಶೋಧನಾತ್ಮಕ, ಆಧುನಿಕ ತಂತ್ರಜ್ಞಾನ ವಿಷಯಗಳ ಬಗ್ಗೆ ಗುಣಮಟ್ಟದ ಶಿಕ್ಷಣವು ವಿದ್ಯಾರ್ಥಿಗಳಿಗೆ ನೀಡುವುದು ಅಗತ್ಯವಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ಸಂಶೋಧನೆಯಲ್ಲಿ ನಾವು ತೊಡಗಿಸಿಕೊಳ್ಳಬೇಕಿರುವುದು ಇಂದಿನ ಅವಶ್ಯಕ ಎಂದು ತಿಳಿಸಿದರು.

ನಾಸಾದ ಮಾಜಿ ವಿಜ್ಞಾನಿ ನಾರಾಯಣ ಇನಾಮದಾರ ಅವರು ಮಾತನಾಡಿ, ಸರ್. ಸಿ.ವಿ.ರಾಮನ್ ಅವರ ಸ್ಮರಣಾತ್ಮಕವಾಗಿ ‘ರಾಷ್ಟ್ರೀಯ ವಿಜ್ಞಾನ ದಿನ’ ಆಚರಿಸಲಾಗುತ್ತಿದ್ದು, ವಿಜ್ಞಾನ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವೆಂದರು. ಇದೇ ವೇಳೆ ಶಾಂತಿ ಮತ್ತು ಅಭಿವೃದ್ಧಿಗಾಗಿ ವಿಜ್ಞಾನ ಎಂಬ ವಿಷಯ ಕುರಿತು ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಹೈದರಾಬಾದ ಶಿಕ್ಷಣ ಸಂಸ್ಥೆಯ (ಎಚ್.ಕೆ.ಇ.) ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ, ಡಾ.ಶರಣಬಸಪ್ಪ ಹರವಾಳ, ವಿ.ಟಿ.ಯು.ನ ಪ್ರಾದೇಶಿಕ ನಿರ್ದೇಶಕ ಡಾ.ಬಸವರಾಜ ಗಡಗಯ್, ಪ್ರೊ. ಎಂ.ಎಸ್.ಜೋಗದ, ಪ್ರೊ.ಶಂಭುಲಿಂಗಪ್ಪ.ಬಿ. , ವಿ.ಟಿ.ಯು.ನ ಭೋದಕ-ಭೋದಕೇತರ ಸಿಬ್ಬಂದಿ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago