ಕಲಬುರಗಿ: ಮಹಿಳೆ ಮತ್ತು ಪುರುಷರಿಗೆ ಸಮಾನವಾದ ಅಧಿಕಾರ ನೀಡುವ ಮತ್ತು ವಿದ್ಯಾರ್ಥಿಗಳಲ್ಲಿ ಇರುವ ಕೌಶಲ್ಯಅಭಿವೃದ್ಧಿಯನ್ನು ಗುರುತಿಸಿ ಅವರ ಆಸಕ್ತಿಯ ಕ್ಷೇತ್ರವನ್ನು ಆರಿಸಿಕೊಳ್ಳುವ ಸೌಲಭ್ಯ ನೀಡುವ ರಾಷ್ಟ್ರೀಯ ಶಿಕ್ಷಣ ನೀತಿ 2020 ರೂಪಿಸಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಆಂಧ್ರ ಪ್ರದೇಶ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ, ವಿಜಯನಗರಮ್ ನ ಕುಲಪತಿಗಳಾದ ಪ್ರೊ. ಟಿ. ವ್ಹಿ. ಕಟ್ಟಿಮನಿಯವರು ಹೇಳಿದರು.
ನಗರದ ಎಂ. ಎಸ್. ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಿಶ್ವ ಮಹಿಳಾ ದಿನಾಚರಣೆ ಮತ್ತು ಅದರ ಅಂಗವಾಗಿ ಹಮ್ಮಿಕೊಂಡ ರಾಷ್ಟ್ರೀಯ ಶಿಕ್ಷಣ ನೀತಿ 2020ರಲ್ಲಿ ನ್ಯಾಯ ಮತ್ತು ಒಗ್ಗೂಡುವಿಕೆ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿಶ್ವ ಮಹಿಳಾ ದಿನಾಚರಣೆ ಕುರಿತು ಮಾತನಾಡಿದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕಿಯರಾದ ಪ್ರೊ. ಶಿವಗಂಗಾ ರುಮ್ಮ ಅವರು ಮಹಿಳೆಯರಿಲ್ಲದ ಸಮಾಜ ನರಕಕ್ಕೆ ಸಮಾನ ಎಂದು ಹೇಳಿದರು. ಇಂದು ಖಾಸಗೀಕರಣದ ಪ್ರಭಾವವು ಎಲ್ಲ ಕ್ಷೇತ್ರದಲ್ಲಿ ಹಮ್ಮಿಕೊಂಡಿದೆ. ಮುಂದೆ ತಮಗೆ ಯಾವುದೇ ರೀತಿಯ ಸರಕಾರಿ ಸೌಲಭ್ಯಗಳು ದೊರೆಯುವದಿಲ್ಲ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಸ್.ಎ. ಪಾಟೀಲ ರವರು ಮಹಿಳಾ ದಿನಾಚರಣೆ ಕುರಿತು ಮಾತನಾಡುತ್ತ ಮಹಿಳೆಯರಿಗೂ ಸಹ ಸಮಾನವಾದ ಅಧಿಕಾರ ದೊರೆಯಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಅತಿಥಿಗಳ ಸ್ವಾಗತ ಮತ್ತು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಮಹಿಳಾ ಘಟಕದ ಸಂಯೋಜಕರಾದ ಪ್ರೊ. ಜಗದೇವಿ ಹಿರೇಮಠ ಅವರು ಮಾಡಿದರು. ಅತಿಥಿಗಳ ಪರಿಚಯವನ್ನು ಗೀತಾ ಪಾಟೀಲ ರವರು ಮಾಡಿದರು, ಕಾರ್ಯಕ್ರಮದ ನಿರೂಪಣೆಯನ್ನು ಕವಿತಾ ಅಶೋಕ ರವರು ಮಾಡಿದರು, ಕಾರ್ಯಕ್ರಮದ ವಂದನಾರ್ಪಣೆಯನ್ನು ವಿಜಯಲಕ್ಷ್ಮೀ ವಾರದ ಅವರು ಮಾಡಿದರು.
ಕಾರ್ಯಕ್ರಮದ ಪ್ರಾರ್ಥನಾ ಗೀತೆಯನ್ನು ಸಿದ್ದಮ್ಮ ಅವರು ಹಾಡಿದರು. ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ವಿಜೇತ ವಿದ್ಯಾರ್ಥಿಗಳ ಪಟ್ಟಿಯನ್ನು ನಂದಿನಿಯವರು ನೆರವೇರಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…